Homeಮುಖಪುಟಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಬಿಜೆಪಿ ಯೂತ್ ವಿಂಗ್ ನಾಯಕ: ಪ್ರಕರಣ ದಾಖಲು

ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಬಿಜೆಪಿ ಯೂತ್ ವಿಂಗ್ ನಾಯಕ: ಪ್ರಕರಣ ದಾಖಲು

- Advertisement -
- Advertisement -

ಬಿಜೆಪಿ ಯೂತ್ ವಿಂಗ್ ನಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಓರ್ವರಿಗೆ ಬೆದರಿಕೆ ಹಾಕಿದ ಮತ್ತು ನಿಂದಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಉತ್ತರಪ್ರದೇಶದ  ಫರೂಕಾಬಾದ್‌ನಲ್ಲಿ ನಡೆದ ಘಟನೆಯ ವಿಡಿಯೋ ಇದಾಗಿದ್ದು, ವೈರಲ್ ವಿಡಿಯೋದಲ್ಲಿ ಬಿಜೆಪಿ ಯೂತ್ ವಿಂಗ್ ನಾಯಕ ಅಮಿತ್ ಠಾಕೂರ್, ಇದು ಮುಲಾಯಂ ಸಿಂಗ್ ಸರಕಾರವಲ್ಲ. ಬಿಜೆಪಿ ಸರಕಾರ, ನಾನು ಯಾರು ಎಂದು ನಿನಗೆ ಗೊತ್ತಿದೆಯಾ? ನಾವು ನಿನಗೆ ಥಳಿಸುತ್ತೇವೆ ಎಂದು  ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿರುವುದು ಸೆರೆಯಾಗಿದೆ.

ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಎರಡು ಗುಂಪುಗಳ ನಡುವಿನ ಘರ್ಷಣೆ ಮತ್ತು ನಂತರದ ಗುಂಡಿನ ಚಕಮಕಿಯ ಬಗ್ಗೆ ನೀಡಿದ ದೂರಿನ ಮೇರೆಗೆ ಎಸ್ಐ ಸ್ಥಳಕ್ಕೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೋ ವೈರಲ್ ಬಳಿಕ ನಾವು ಅಮಿತ್ ಠಾಕೂರ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ಸ್ಪೆಷಲ್ ಆಪರೇಷನ್ ಗ್ರೂಪ್ ಮತ್ತು ಇತರ ಪೊಲೀಸ್ ತಂಡಗಳು ಅವರ ಬಂಧನಕ್ಕೆ  ಹುಡುಕಾಟ ನಡೆಸುತ್ತಿದೆ ಎಂದು ಫರೂಕಾಬಾದ್ ಪೊಲೀಸ್ ಅಧೀಕ್ಷಕ(ಎಸ್‌ಪಿ) ವಿಕಾಸ್ ಕುಮಾರ್ ಹೇಳಿದ್ದಾರೆ.

ಆರೋಪಿ ವಿರುದ್ಧ ಸೆಕ್ಷನ್ 147 (ಗಲಭೆ), 504, 506 ಮತ್ತು 332 ಸೇರಿ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಮಯಾಂಕ್ ಬುಂದೇಲಾ, ಠಾಕೂರ್ ಅವರ ನಡವಳಿಕೆಯು ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಕಾರಣ ಪಕ್ಷದ ಉನ್ನತ ನಾಯಕತ್ವದ ನಿರ್ದೇಶನದ ಮೇರೆಗೆ ಠಾಕೂರ್ ಅವರನ್ನು ಜಿಲ್ಲಾ ಯುವ ಬಿಜೆಪಿಯ ಉಪಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು ಹೇಳಿದ್ದಾರೆ.

ಪ್ರಕರಣ ದಾಖಲಾದ ಬಳಿಕ ಠಾಕೂರ್ ಸೇರಿ ಮೂವರು ಆರೋಪಿಗಳು ತೆಲೆಮರೆಸಿಕೊಂಡಿದ್ದಾರೆ. ಆರೋಪಿಗಳ ಬಗ್ಗೆ ಮಾಹಿತಿ ನೀಡುವವರಿಗೆ ನಗದು ಬಹುಮಾನವನ್ನು ಕೂಡ ಪೊಲೀಸ್ ಇಲಾಖೆ ಘೋಷಣೆಯನ್ನು ಮಾಡಿದೆ.

ಇದನ್ನು ಓದಿ: ಅರುಣಾಚಲ ಪ್ರದೇಶ ಸೇರಿಸಿ ಚೀನಾ ಮ್ಯಾಪ್ ರಿಲೀಸ್: ಮೋದಿ ಪ್ರತಿಕ್ರಿಯಿಸುವಂತೆ ರಾಹುಲ್ ಗಾಂಧಿ ಆಗ್ರಹ

 

 

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ 2024; ಐದನೇ ಹಂತದಲ್ಲಿ 60.09% ಮತದಾನ

0
ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳ ಮತದಾರರು ಸೋಮವಾರ ನಡೆದ ಐದನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ. ಅಂದಾಜು 60.09% ರಷ್ಟು ಮತದಾನದೊಂದಿಗೆ ಕೊನೆಗೊಂಡಿತು, ಪಶ್ಚಿಮ ಬಂಗಾಳದಲ್ಲಿ...