Homeಕರ್ನಾಟಕಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ” ಎಂಬ ಬಿಜೆಪಿಗರ ಆರೋಪಕ್ಕೆ ಪ್ರತಿಕ್ರಿಯಿಸಿದರು.

“ಬಿಜೆಪಿ ಸುಳ್ಳು ಹೇಳುತ್ತಿದೆ. ನೀರಾವರಿಗೆ 18,000 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ, ಅದು ಕಡಿಮೆಯೇ? ಏನೂ ಮಾಡಿಲ್ಲ ಎಂದರೆ ಏನು? ಗ್ಯಾರಂಟಿಗಳನ್ನು ಒಳಗೊಂಡಂತೆ 1,20,000 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಲಾಗಿದೆ ಎಂದರು.

“ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ”

ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆ ಬಗ್ಗೆ ಅವರಿಗೆ ಗೊತ್ತೂ ಇಲ್ಲ ಎಂದು ಸಿಎಂ ಹೇಳಿದರು. ಅಭಿವೃದ್ಧಿ ಶೂನ್ಯ ಎನ್ನುತ್ತಾರೆ. ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು. ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಅಂಬೇಡ್ಕರ್ ಹೇಳಿದ್ದರು. ಈ ಬಗ್ಗೆ ಬಿಜೆಪಿಗೆ ತಿಳಿದಿದೆಯೇ? ಎಂದು ಪ್ರಶ್ನಿಸಿದರು.

ನಿನ್ನೆ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಮ್ಮ ಸಾಧನೆಗಳನ್ನು ಜನರ ಮುಂದಿರಿಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ : ನೇರ ನಡೆ-ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...