Homeಕರ್ನಾಟಕಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ: ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಈಗಾಗಲೇ ಬಂಧಿಸಲಾಗಿದೆ. ಯಾವುದೇ ಜಾತಿ ಧರ್ಮಗಳನ್ನು ಪರಿಗಣಿಸದೆ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಗಳವಾರ (ಸೆ.9) ಅವರು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮದ್ದೂರು ಗಲಭೆಗೆ ಸಂಬಂಧಪಟ್ಟಂತೆ ಬಿಜೆಪಿಯವರು ಮದ್ದೂರಿಗೆ ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, “ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೆಶವಾಗಿದೆ. ಮೈಸೂರಿನಲ್ಲಿ ‘ಚಾಮುಂಡಿ ಬೆಟ್ಟ ಚಲೋ’ ಹಮ್ಮಿಕೊಂಡಿದ್ದರು. ಆರ್‌ಎಸ್‌ಎಸ್ ಸಂಘಟನೆಯವರು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದವರು ಇದರಲ್ಲಿ ಪಾಲ್ಗೊಂಡು ಶಾಂತಿ ಕದಡುವ ಕೆಲಸ ಮಾಡುತ್ತಾರೆಂಬ ಕಾರಣಕ್ಕೆ ಪೊಲೀಸರು ಅನುಮತಿ ನೀಡಿಲ್ಲ. ಮದ್ದೂರಿನಲ್ಲಿ ಬಂದ್ ಮಾಡಲು ಕರೆ ಕೊಟ್ಟಿದ್ದಾರೆ. ಗಲಭೆಯಲ್ಲಿ ನಡೆಸುವವರು ಯಾವುದೇ ಪಕ್ಷ, ಸಮುದಾಯವರು ಆಗಿದ್ದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಣಿಪುರ ಹಿಂಸಾಚಾರದ ಬಗ್ಗೆ ಬಿಜೆಪಿ ಧ್ವನಿ ಎತ್ತುವುದಿಲ್ಲ

ಬಿಜೆಪಿಯವರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಾಗಿ ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿರುತ್ತದೆ. ಕೇಂದ್ರದಲ್ಲಿ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ಬಿಜೆಪಿಯವರು ಎಲ್ಲಿದ್ದರು? ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಯಾವುದೇ ಬಿಜೆಪಿಯವರು ಧ್ವನಿ ಎತ್ತಲಿಲ್ಲವೇಕೆ ಎಂದು ಮರುಪ್ರಶ್ನಿಸಿದರು. ಮಣಿಪುರದಲ್ಲಿ ಹಿಂಸಾಚಾರ ನಡೆದರೂ, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಲೇ ಇಲ್ಲ ಎಂದು ಹೇಳಿದರು.

ಎಂಎಲ್‌ಸಿಗಳಿಗೂ ಕ್ಷೇತ್ರ ಅಭಿವೃದ್ಧಿಗೆ ಅನುದಾನ ನೀಡುವ ಆಶ್ವಾಸನೆ

ಇಂದು ಆಡಳಿತ ಪಕ್ಷದ ವಿಧಾನಪರಿಷತ್ತಿನ ಸದಸ್ಯರೊಂದಿಗೆ ಸಭೆ ನಡೆಸಲಾಗಿದೆ. ಈ ಹಿಂದೆ ಜಿಲ್ಲಾ ಶಾಸಕರೊಂದಿಗೆ ಸಭೆ ನಡೆಸಿದಂತೆ, ನಾಳೆ ಬೆಂಗಳೂರು ನಗರದ ಶಾಸಕರೊಂದಿಗೆ ಸಭೆ ನಡೆಸಲಾಗುವುದು. ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆಯವ್ಯಯದಲ್ಲಿ 8000 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಶಾಸಕರಿಗೆ ನೀಡಿದಂತೆ ಎಂಎಲ್‌ಸಿಗಳಿಗೂ, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಕೆಯಾಗಿದೆ. ಮೀಸಲಿರಿಸಿರುವ 8000 ಕೋಟಿ ರೂ.ಗಳಲ್ಲಿ ಎಂಎಲ್‌ಸಿಗಳಿಗೂ ಅನುದಾನ ನೀಡಲು ಪರಿಶೀಲಿಸುವುದಾಗಿ ಆಶ್ವಾಸನೆ ನೀಡಲಾಗಿದೆ ಎಂದು ತಿಳಿಸಿದರು.

ಮದ್ದೂರಿನ ಕಲ್ಲು ತೂರಾಟದಲ್ಲಿ ಹಿಂದುತ್ವ ಗುಂಪುಗಳೂ ಭಾಗಿಯಾಗಿವೆ: ಗೃಹ ಸಚಿವ ಪರಮೇಶ್ವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....