Homeಕರ್ನಾಟಕಪ್ರಾಮಾಣಿಕ ಪಶ್ಚಾತಾಪವಿಲ್ಲದ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ; ಹಾನಿ ತಪ್ಪಿಸುವ ರಕ್ಷಣಾತ್ಮಕ ಆಟ: ಸಚಿವ ಪ್ರಿಯಾಂಕ್...

ಪ್ರಾಮಾಣಿಕ ಪಶ್ಚಾತಾಪವಿಲ್ಲದ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ; ಹಾನಿ ತಪ್ಪಿಸುವ ರಕ್ಷಣಾತ್ಮಕ ಆಟ: ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಪ್ರಾಮಾಣಿಕ ಪಶ್ಚಾತಾಪವಿಲ್ಲದೆ ಕೇಳುವ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ, ಎದುರಾದ ಹಾನಿಯಿಂದ ತಪ್ಪಿಸಿಕೊಳ್ಳುವ ರಕ್ಷಣಾತ್ಮಕ ಆಟವಷ್ಟೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಹೇಳಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕ್ಷಮೆ ಕೇಳಿದ ಪರಿಷತ್ ಸದಸ್ಯ ರವಿಕುಮಾರ್ ಅವರು ಮೆರವಣಿಗೆಯಲ್ಲಿ ಪೊಲೀಸ್ ಠಾಣೆಗೆ ಹೋಗುವ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಕ್ಷಮೆ ಕೇವಲ ಬೂಟಾಟಿಕೆಯದ್ದು ಹೊರತು ಮನಃಪೂರ್ವಕವಾದುದಲ್ಲ ಎಂದು ಹೇಳಿದ್ದಾರೆ. ಪ್ರಾಮಾಣಿಕ ಪಶ್ಚಾತಾಪವಿಲ್ಲದ

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಅವರು, “ಕ್ಷಮೆ ಕೇಳುವುದರಲ್ಲಿ ಎರಡು ವಿಧ. ನೈಜ ಕ್ಷಮೆ ಮತ್ತು ಬಿಜೆಪಿಗರ ನಕಲಿ ಕ್ಷಮೆ! ನೈಜ ಕ್ಷಮೆಯ ಹಿಂದೆ ಪಶ್ಚಾತಾಪವಿರುತ್ತದೆ, ವಿಚಾರ ಪಕ್ವತೆ ಇರುತ್ತದೆ, ಜಾಗೃತಿ ಇರುತ್ತದೆ, ತಪ್ಪೆಸಗಿದ್ದಕ್ಕೆ ಗಿಲ್ಟ್ ಇರುತ್ತದೆ.

ಆದರೆ, ಬಿಜೆಪಿಯವರ ನಕಲಿ ಕ್ಷಮೆಗೆ ಕಾರಣಗಳೇ ಬೇರೆ, ಬಿಜೆಪಿಗರ ಕ್ಷಮೆಯಲ್ಲಿ ಪಶ್ಚಾತಾಪವಿರುವ ಬದಲು ಅಹಂಕಾರವಿರುತ್ತದೆ, ಅವರ ಕ್ಷಮೆಯ ಹಿಂದೆ ಅವಕಾಶವಾದಿತನ ಇರುತ್ತದೆ ಅಥವಾ ಕಾನೂನಿನ ಭಯವಿರುತ್ತದೆ, ಇಲ್ಲವೇ ಜನಾಕ್ರೋಶದ ಒತ್ತಡ ಇರುತ್ತದೆ ಅಷ್ಟೇ.” ಎಂದು ಅವರು ಹೇಳಿದ್ದಾರೆ.

ಬಿಜೆಪಿಗರದ್ದು ಸ್ವಯಂಪ್ರೇರಣೆಯ, ಜ್ಞಾನೋದಯದ ಕ್ಷಮೆ ಅಲ್ಲವೇ ಅಲ್ಲ. ಬಿಜೆಪಿಗರ ಮನಃಪೂರ್ವಕವಲ್ಲದ ದುರಹಂಕಾರದ ಕ್ಷಮೆಗೆ ಉದಾಹರಣೆ ಹಲವು ಇವೆ ಎಂದು ಅವರು ಹೇಳಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕ್ಷಮೆ ಕೇಳಿದ ಪರಿಷತ್ ಸದಸ್ಯ ರವಿಕುಮಾರ್ ಅವರು ಘನಂದಾರಿ ಕೆಲಸ ಮಾಡಿದವರಂತೆ ಮೆರವಣಿಗೆಯಲ್ಲಿ ಪೊಲೀಸ್ ಠಾಣೆಗೆ ಹೋಗುತ್ತಾರೆ ಎಂದರೆ ಅವರ ಕ್ಷಮೆ ಕೇವಲ ಬೂಟಾಟಿಕೆಯದ್ದು ಹೊರತು ಮನಃಪೂರ್ವಕವಾದುದಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಟ ಪ್ರಕಾಶ್ ರಾಜ್ ಅವರನ್ನು ಅವಹೇಳನ ಮಾಡಿದ್ದ ಪ್ರತಾಪ್ ಸಿಂಹ ಕಾನೂನಿನ ಒತ್ತಡಕ್ಕೆ ಕ್ಷಮೆ ಕೇಳಿದ್ದಾರೆ.
ಸೋಫಿಯಾ ಖುರೇಶಿಯವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ವಿಜಯ್ ಷಾ ಜನಾಕ್ರೋಶಕ್ಕೆ ಕ್ಷಮೆ ಕೇಳಿದ್ದಾರೆ.
ನನಗೆ ನಾಯಿ ಎಂದಿದ್ದ ನಾರಾಯಣಸ್ವಾಮಿಯವರು ಜನಾಕ್ರೋಶದ ಒತ್ತಡಕ್ಕೆ ಕ್ಷಮೆ ಕೇಳಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯವರು ಕ್ಷಮೆ ಕೇಳುವುದರಲ್ಲಿ ಸಾವರ್ಕರ್ ಅವರ ಬದ್ಧತೆಯನ್ನಾದರೂ ತೋರಿಸಬೇಕು ಎಂದು ಹೇಳಿರುವ ಅವರು, “ಸಾವರ್ಕರ್ ಮನಃಪೂರ್ವಕವಾಗಿ ಬ್ರಿಟಿಷರ ಕ್ಷಮೆ ಕೇಳಿ, ನಂತರ ಬ್ರಿಟಿಷರ ಜೊತೆ ನಿಂತು ಕೆಲಸ ಮಾಡಿದ್ದ ಅವರ ಪ್ರಾಮಾಣಿಕತೆಯನ್ನು ಅನುಸರಿಸಬೇಕು” ಎಂದು ಹೇಳಿದ್ದಾರೆ. ಪ್ರಾಮಾಣಿಕ ಪಶ್ಚಾತಾಪವಿಲ್ಲದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...