ಬಿ.ಆರ್. ಅಂಬೇಡ್ಕರ್ ಕುರಿತು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಬಿಜೆಪಿಯ ಜಾತಿವಾದಿ ಮತ್ತು ದಲಿತ ವಿರೋಧಿ ಮನಸ್ಥಿತಿಯ ಪ್ರದರ್ಶನವಾಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. ಅಮಿತ್ ಶಾ ಅವರ ಹೇಳಿಕೆಗಳು ಅವಹೇಳನಕಾರಿ ಎಂದು ಕರೆದ ಅವರು, ”ಅವರು ಹೇಳಿಕೆಯು ಮಾರ್ಗದರ್ಶನ ಮತ್ತು ಸ್ಫೂರ್ತಿಗಾಗಿ ಅಂಬೇಡ್ಕರ್‌ರನ್ನು ಎದುರು ನೋಡುವ ಲಕ್ಷಾಂತರ ಜನರಿಗೆ ಮಾಡಿದ ಅವಮಾನವಾಗಿದೆ” ಎಂದು ಅವರು ಹೇಳಿದ್ದಾರೆ.
“ಮುಖವಾಡ ಕಳಚಿದೆ! ಸಂಸತ್ತು ಸಂವಿಧಾನದ 75 ವೈಭವದ ವರ್ಷಗಳನ್ನು ಪ್ರತಿಬಿಂಬಿಸುತ್ತಿದೆ, ಗೃಹ ಸಚಿವ ಅಮಿತ್ ಶಾ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಈ ಸಂದರ್ಭವನ್ನು ಕಳಂಕಗೊಳಿಸಲು ನೋಡಿದ್ದಾರೆ. ಅದೂ ಕೂಡಾ ಪ್ರಜಾಪ್ರಭುತ್ವದ ದೇವಾಲಯದಲ್ಲಿ…” ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಿಜೆಪಿಯ ಜಾತಿವಾದಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
The mask has fallen!
As Parliament reflects on 75 glorious years of the Constitution, HM @AmitShah chose to TARNISH this occasion with DEROGATORY remarks against Dr. Babasaheb Ambedkar, that too in the temple of Democracy.
This is a display of BJP’s CASTEIST and ANTI-DALIT…
— Mamata Banerjee (@MamataOfficial) December 18, 2024
“ಇದು ಬಿಜೆಪಿಯ ಜಾತಿವಾದಿ ಮತ್ತು ದಲಿತ ವಿರೋಧಿ ಮನಸ್ಥಿತಿಯ ಪ್ರದರ್ಶನವಾಗಿದೆ. 240 ಸ್ಥಾನಗಳಿಗೆ ಇಳಿದಾಗಲೂ ಅವರು ಈ ರೀತಿ ವರ್ತಿಸಿದರೆ, ಒಂದು ವೇಳೆ ಅವರು 400 ಸ್ಥಾನಗಳು ಪಡೆದಿದ್ದರೆ ಅವರು ಉಂಟುಮಾಡುತ್ತಿದ್ದ ಹಾನಿಯನ್ನು ಊಹಿಸಿ. ಅವರು ಡಾ. ಅಂಬೇಡ್ಕರ್ ಅವರ ಕೊಡುಗೆಗಳ ಇತಿಹಾಸವನ್ನು ಸಂಪೂರ್ಣವಾಗಿ ಅಳಿಸಿ ಪುನಃ ಬರೆಯುತ್ತಿದ್ದರು” ಎಂದು ಅವರು ಆರೋಪಿಸಿದ್ದಾರೆ.
ಬಿಜೆಪಿಯ ಮೇಲೆ ದಾಳಿ ಮಾಡಿದ ಮಮತಾ ಅವರು, ದ್ವೇಷ ಮತ್ತು ಧರ್ಮಾಂಧತೆಯನ್ನು ಆಂತರಿಕಗೊಳಿಸಿದ ಪಕ್ಷದಿಂದ ಇನ್ನೇನು ನಿರೀಕ್ಷಿಸಬಹುದಿತ್ತು ಎಂದು ಹೇಳಿದ್ದಾರೆ. “ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗಳು ಮಾರ್ಗದರ್ಶನ ಮತ್ತು ಸ್ಫೂರ್ತಿಗಾಗಿ ಬಾಬಾಸಾಹೇಬರನ್ನು ಎದುರು ನೋಡುವ ಲಕ್ಷಾಂತರ ಜನರಿಗೆ ಮಾಡಿರುವ ಅವಮಾನವಾಗಿದೆ.” ಎಂದು ಅವರು ಹೇಳಿದ್ದಾರೆ.
“ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಪಿತಾಮಹ, ಈ ಅತಿರೇಕದ ಹೇಳಿಕೆಯು ಅವರ ಮೇಲಿನ ನೇರ ದಾಳಿ ಮಾತ್ರವಲ್ಲ, ಸಂವಿಧಾನದ ಕರಡು ಸಮಿತಿಯ ಎಲ್ಲಾ ಸದಸ್ಯರ ಮೇಲಿ ದಾಳಿಯಾಗಿದೆ. ಇದು ಎಲ್ಲಾ ಜಾತಿ, ಮತ, ಜನಾಂಗಗಳ ಸದಸ್ಯರೊಂದಿಗೆ ವಿವಿಧತೆಯಲ್ಲಿ ಭಾರತದ ಏಕತೆಯನ್ನು ಸಂಕೇತಿಸುತ್ತದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಅವರ ಪೋಸ್ಟ್ ಅನ್ನು ಹಂಚಿಕೊಂಡಿರುವ ಟಿಎಂಸಿ, ಅಮಿತ್ ಶಾ ಅವರ ಹೇಳಿಕೆ ನಾಲಿಗೆ ಸ್ಲಿಪ್ ಆಗಿ ಹೇಳಿದ್ದಲ್ಲ, ಬದಲಾಗಿ ಉದ್ದೇಶಪೂರ್ವಕವಾಗಿ ಹೇಳಿದ ಮಾತಾಗಿದೆ ಎಂದು ಹೇಳಿದೆ. ಸಂಸತ್ತಿನಲ್ಲಿ ಅಮಿತ್ ಶಾ ಅವರು ಬೇಷರತ್ ಕ್ಷಮೆಯಾಚಿಸಬೇಕು ಎಂದು ಟಿಎಂಸಿ ಒತ್ತಾಯಿಸಿದೆ.
“ಅಭಿ ಏಕ್ ಫ್ಯಾಶನ್ ಹೋ ಗಯಾ ಹೈ – ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಇತ್ನಾ ನಾಮ್ ಅಗರ್ ಭಗವಾನ್ ಕಾ ಲೇತೆ ತೋ ಸಾತ್ ಜನ್ಮೋನ್ ತಕ್ ಸ್ವರ್ಗ್ ಮಿಲ್ ಜಾತಾ” (ಈ ಒಂದು ಫ್ಯಾಶನ್ ಆಗಿ ಹೋಗಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್… ಇಷ್ಟು ಬಾರಿ ಭಗವಂತನ ಹೆಸರನ್ನು ಹೇಳಿದ್ದರೆ, ಏಳು ಜನ್ಮಕ್ಕೂ ಸ್ವರ್ಗ ಸಿಗುತ್ತಿತ್ತು) ಎಂದು ಅಮಿತ್ ಶಾ ರಾಜ್ಯ ಸಭೆಯಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ವೇಳೆ ಅವರು “ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಎಂಬ ಎರಡು ದಿನಗಳ ಚರ್ಚೆಯ ಮುಕ್ತಾಯದಲ್ಲಿ ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ
ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ


