Homeಮುಖಪುಟಡಿಲಿಮಿಟೇಷನ್ ಮೂಲಕ ದಕ್ಷಿಣ ಭಾರತದ ಪ್ರಭಾವ ಕಸಿದುಕೊಳ್ಳಲು ಬಿಜೆಪಿಯಿಂದ ಪಿತೂರಿ: ರೇವಂತ್ ರೆಡ್ಡಿ

ಡಿಲಿಮಿಟೇಷನ್ ಮೂಲಕ ದಕ್ಷಿಣ ಭಾರತದ ಪ್ರಭಾವ ಕಸಿದುಕೊಳ್ಳಲು ಬಿಜೆಪಿಯಿಂದ ಪಿತೂರಿ: ರೇವಂತ್ ರೆಡ್ಡಿ

- Advertisement -
- Advertisement -

ಜನಸಂಖ್ಯೆ ಅನುಪಾತದ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಯು ದಕ್ಷಿಣ ರಾಜ್ಯಗಳಿಗೆ ಅನ್ಯಾಯವನ್ನುಂಟು ಮಾಡುತ್ತದೆ ಎಂದು ಎಚ್ಚರಿಸಿದ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ರಾಜಕೀಯ ಪಕ್ಷಗಳು ಮತ್ತು ಇತರರೊಂದಿಗೆ ವ್ಯಾಪಕ ಸಮಾಲೋಚನೆಯ ಮೂಲಕ ಒಮ್ಮತ ನಿರ್ಮಾಣ ಪ್ರಕ್ರಿಯೆಗೆ ಕರೆ ನೀಡಿದ್ದಾರೆ.

ಹೈದರಾಬಾದ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ದಕ್ಷಿಣ ರಾಜ್ಯಗಳಿಂದ ರಾಜಕೀಯ ಪ್ರಭಾವವನ್ನು ಕಸಿದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಬಿಜೆಪಿಯ ಪಿತೂರಿ” ಎಂದು ಆರೋಪಿಸಿದರು.

ಲೋಕಸಭಾ ಸ್ಥಾನಗಳ ಸಂಖ್ಯೆಯೊಂದಿಗೆ ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿಯನ್ನು ಜಾರಿಗೆ ತರಲು ಅವರು ಒಲವು ತೋರಿದರು.

ಶೇಕಡಾ 50 ರಷ್ಟು ಸ್ಥಾನಗಳನ್ನು ಅನುಪಾತದ ಆಧಾರದ ಮೇಲೆ ಮತ್ತು ಉಳಿದ ಶೇಕಡಾ 50 ರಷ್ಟು ಸ್ಥಾನಗಳನ್ನು ಜಿಎಸ್‌ಡಿಪಿ ಆಧರಿಸಿ ಹೆಚ್ಚಿಸಲಾಗುವ ‘ಹೈಬ್ರಿಡ್’ ಮಾದರಿಯ ಡಿಲಿಮಿಟೇಶನ್ ಅನ್ನು ಪರಿಗಣಿಸುವಂತೆ ರೆಡ್ಡಿ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದರು.

“ನಾನು ಒಂದು ಉದಾಹರಣೆ ನೀಡಲು ಬಯಸುತ್ತೇನೆ. ಇಲ್ಲಿಯವರೆಗೆ, ಕೇರಳದಲ್ಲಿ 20 ಲೋಕಸಭಾ ಸ್ಥಾನಗಳಿವೆ. ಯುಪಿಯಲ್ಲಿ 80 ಇವೆ. ಎರಡರ ನಡುವಿನ ವ್ಯತ್ಯಾಸ 60. ಅನುಪಾತದ ಆಧಾರದ ಮೇಲೆ ಶೇ. 50 ರಷ್ಟು ಸೀಟುಗಳನ್ನು ಹೆಚ್ಚಿಸಿದರೆ, ಕೇರಳದಲ್ಲಿ 30 ಮತ್ತು ಉತ್ತರ ಪ್ರದೇಶದಲ್ಲಿ 120 ಸ್ಥಾನಗಳು ಇರುತ್ತವೆ. ಎರಡರ ನಡುವೆ 90 ಸ್ಥಾನಗಳ ಅಂತರವಿರುತ್ತದೆ” ಎಂದು ಅವರು ಹೇಳಿದರು.

ಜನಸಂಖ್ಯೆಗೆ ಅನುಪಾತದ ಆಧಾರದ ಮೇಲೆ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇಕಡಾ 50 ರಷ್ಟು ಹೆಚ್ಚಿಸಿದರೆ, ಅವು ದಕ್ಷಿಣದಲ್ಲಿ 130 ರಿಂದ 195 ಕ್ಕೆ ಮತ್ತು ದೇಶದ ಉಳಿದ ಭಾಗಗಳಲ್ಲಿ 413 ರಿಂದ 413 ರಿಂದ ಸುಮಾರು 620 ಸ್ಥಾನಗಳಿಗೆ ಹೆಚ್ಚಾಗುತ್ತವೆ ಎಂದು ಅವರು ಹೇಳಿದರು.

“ಇದು ದಕ್ಷಿಣ ರಾಜ್ಯಗಳನ್ನು ರಾಜಕೀಯವಾಗಿ ಮತ್ತಷ್ಟು ದುರ್ಬಲಗೊಳಿಸುತ್ತದೆ. ರಾಜಕೀಯವಾಗಿ ಅವರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡುತ್ತದೆ. ಆದರೆ, ದೆಹಲಿ ಮತ್ತು ಪಂಜಾಬ್‌ನಂತಹ ಸಣ್ಣ ರಾಜ್ಯಗಳು ರಾಜಕೀಯ ಪ್ರಸ್ತುತತೆಯನ್ನು ಕಳೆದುಕೊಳ್ಳುತ್ತವೆ” ಎಂದು ಅವರು ಪ್ರತಿಪಾದಿಸಿದರು.

ರಾಜಕೀಯ ಲಾಭಕ್ಕಾಗಿ ಬಿಜೆಪಿ ಶೇ. 50 ರಷ್ಟು ಸೀಟುಗಳನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ರೆಡ್ಡಿ, ದಕ್ಷಿಣದಲ್ಲಿ 195 ಸ್ಥಾನಗಳು, ಉತ್ತರದಲ್ಲಿ 620 ಸ್ಥಾನಗಳು ದಕ್ಷಿಣ ಮತ್ತು ಉತ್ತರದ ನಡುವೆ ಪ್ರಮುಖ ವ್ಯತ್ಯಾಸವನ್ನು ಉಂಟುಮಾಡುತ್ತವೆ ಎಂದು ಹೇಳಿದರು.

“ಇದು ದೇಶದ ಅಸ್ತಿತ್ವಕ್ಕೆ ಒಳ್ಳೆಯದಲ್ಲ. ಇದು ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ ವಿಷಯವಲ್ಲ. ಇದು ದೇಶದ ಜನರಿಗೆ ಸಂಬಂಧಿಸಿದ ವಿಷಯ. ತಾರತಮ್ಯ ಎಲ್ಲಿಗೆ ಕಾರಣವಾಗುತ್ತದೆ ಎಂಬುದನ್ನು ನಾವು ನೋಡಿದ್ದೇವೆ, ತೆಲಂಗಾಣ ರಚನೆ ಆಂದೋಲನ, ನಕ್ಸಲೈಟ್ ಆಂದೋಲನ ನಮ್ಮ ಮುಂದೆ ಇವೆ” ಎಂದು ಅವರು ಹೇಳಿದರು.

ಮಹಿಳಾ ಮೀಸಲಾತಿ ಜಾರಿಗೆ ತರುವ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಲು ಪ್ರಯತ್ನಿಸುತ್ತಿರುವ ಬಿಜೆಪಿ, ತಾರತಮ್ಯವನ್ನು ಮತ್ತಷ್ಟು ಹೆಚ್ಚಿಸುತ್ತಿದೆ. ಸಣ್ಣ ರಾಜ್ಯಗಳು ಮತ್ತು ದಕ್ಷಿಣ ರಾಜ್ಯಗಳಿಗೆ ಅನ್ಯಾಯವನ್ನುಂಟುಮಾಡುತ್ತಿದೆ ಎಂದು ಅವರು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...