Homeಮುಖಪುಟಬಿಜೆಪಿಯದ್ದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಬ್ಲಂಡರ್ ಸರ್ಕಾರ - ಅಖಿಲೇಶ್ ಯಾದವ್

ಬಿಜೆಪಿಯದ್ದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಬ್ಲಂಡರ್ ಸರ್ಕಾರ – ಅಖಿಲೇಶ್ ಯಾದವ್

- Advertisement -
- Advertisement -

ಕೇಂದ್ರ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷವೂ ‘ಡಬಲ್ ಬ್ಲಂಡರ್’ ಸರ್ಕಾರವನ್ನು ನಡೆಸುತ್ತಿದೆ ಹೊರತು, ‘ಡಬಲ್ ಎಂಜಿನ್’ ಸರ್ಕಾರವನ್ನಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮಂಗಳವಾರ ಹೇಳಿದ್ದಾರೆ. ಬಿಜೆಪಿಯದ್ದು

ಗೋವಾಕ್ಕೆ ಹೊರಟಿದ್ದ ವಂದೇ ಭಾರತ್ ರೈಲು ಕಲ್ಯಾಣಕ್ಕೆ ತಲುಪಿದ್ದ ಕುರಿತ ಸುದ್ದಿಯ ಚಿತ್ರವನ್ನು ಎಕ್ಸ್‌ನಲ್ಲಿ ಹಂಚಿರುವ ಅಖಿಲೇಶ್ ಯಾದವ್ ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯದ್ದು

ರೈಲಿನ ಸುದ್ದಿಯ ಚಿತ್ರದ ಜೊತೆಗೆ, “ಬಿಜೆಪಿಯದ್ದು ‘ಡಬಲ್ ಇಂಜಿನ್’ ಸರ್ಕಾರವಲ್ಲ, ಬದಲಿಗೆ ‘ಡಬಲ್ ಬ್ಲಂಡರ್’ ಸರ್ಕಾರ” ಎಂದು ಅಖಿಲೇಶ್ ಯಾದವ್ ಬರೆದಿದ್ದಾರೆ. ಅದೇ ಪೋಸ್ಟ್‌ನಲ್ಲಿ ಅವರು, “ಬಿಜೆಪಿ ದೇಶದ ಎಂಜಿನ್ ಅನ್ನು ತಪ್ಪು ಹಾದಿಗೆ ತಳ್ಳಿದೆ” ಎಂದು ಟೀಕಿಸಿದ್ದಾರೆ.

ಸೋಮವಾರ ಬೆಳಗ್ಗೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ದಿವಾ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದಾಗಿ ಸಿಎಸ್‌ಎಂಟಿ-ಮಡ್ಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ತನ್ನ ನಿಯಮಿತ ಮಾರ್ಗವನ್ನು ಬದಲಿಸಿತ್ತು. ಈ ಘಟನೆ ವ್ಯಾಪಕ ಸುದ್ದಿಯಾಗಿತ್ತು.

ಗೋವಾಕ್ಕೆ ತೆರಳಬೇಕಿದ್ದ ಅದು ತನ್ನ ಪ್ರಯಾಣವನ್ನು 90 ನಿಮಿಷಗಳ ಕಾಲ ವಿಳಂಬಗೊಳಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಂದೇಭಾರತ್ ರೈಲು ಕೊಂಕಣ ಪ್ರದೇಶಕ್ಕೆ ಹೋಗುವ ರೈಲುಗಳು ಬಳಸುವ ದಿವಾ-ಪನ್ವೇಲ್ ರೈಲುಮಾರ್ಗದ ಮೂಲಕ ಪನ್ವೇಲ್ ನಿಲ್ದಾಣದ ಕಡೆಗೆ ಸಾಗುವ ಬದಲು, ಕಲ್ಯಾಣ ಮಾರ್ಗದ ಕಡೆಗೆ ಹೋಗಿತ್ತು.

ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ನಿರ್ಣಯ ಅಂಗೀಕರಿಸಿದ ಡಿಎಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....