Homeಕರ್ನಾಟಕಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಔಟ್: ಪಕ್ಷಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಔಟ್: ಪಕ್ಷಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

- Advertisement -
- Advertisement -

ಆಪರೇಷನ್ ಕಮಲದಿಂದಾಗಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ತಮ್ಮ ಸ್ವಕ್ಷೇತ್ರವನ್ನೇ ಕಳೆದುಕೊಂಡ ಮಾಜಿ ಉಪಮುಖ್ಯಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ.

ಅಥಣಿ ವಿಧಾನಸಭೆ ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ  ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನಿಡುವುದಾಗಿ ಘೋಷಣೆ ಮಾಡಿದರು. ಬೆಳಗಾವಿಯ ಅಥಣಿಯಲ್ಲಿ ಇಂದು(ಏಪ್ರಿಲ್ 12) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸವದಿ, ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.

”ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ. ನಾಳೆ ಕ್ಷೇತ್ರದ ಜನರ ಜತೆ ಚರ್ಚಿಸಿ ಘೋಷಣೆ ಮಾಡುತ್ತೇನೆ. ಬಿಜೆಪಿ ಟಿಕೆಟ್​ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ. ಅನೇಕ ಪಕ್ಷದ ಮುಖಂಡರು ನನ್ನನ್ನು ಸಂಪರ್ಕ ಮಾಡಿದ್ದಾರೆ. ನಾಳೆ ಸಂಜೆ ಕ್ಷೇತ್ರದ ಜನರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ. ಸವದಿ ಯಾವತ್ತೂ ಒಳಗೊಂದು ಹೊರಗೊಂದು ಮಾತನಾಡಲ್ಲ. ವಿಧಾನಸಭೆಯಲ್ಲಿ ನಡೆದ ಘಟನೆಯಿಂದ ರಾಜೀನಾಮೆ ಕೊಡಬೇಕಾಯಿತು. ಈ ಪ್ರಕರಣದಿಂದ ನನ್ನ ಗುರುಗಳ ಕಣ್ಣಲ್ಲಿ ನೀರು ಬಂದಿತ್ತು” ಎಂದು ಆ ದಿನಗಳನ್ನು ನೆನೆದರು.

”ಸೌಜನ್ಯಕ್ಕಾದರೂ ಮೊದಲು ನನ್ನ ಜೊತೆ ಚರ್ಚೆ ಮಾಡಬೇಕಿತ್ತು. ಮುಂದಿನ ದಿನಗಳಲ್ಲಿ ಸಿಎಂ ಆಗಿ, ಪ್ರಧಾನಿ ಆಗುವ ಅವಕಾಶ ಇದೆ. ಪ್ರಧಾನಿ ಆಗಿ ನೋಡುವ ಆಸೆ ಇದೆ. ಅವರು ಈ ರಾಷ್ಟ್ರದ ಪ್ರಧಾನಮಂತ್ರಿ ಆಗಲು ಯಾರು ತಪ್ಪಿಸಲ್ಲ ಅಂದುಕೊಂಡಿದ್ದೇನೆ. ಮೋದಿಗೆ 75 ವರ್ಷ ಆದ ಬಳಿಕ, ಇವರಿಗೆ ಅವಕಾಶ ಸಿಗಬಹುದು” ಎಂದು ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.

”ನಿನಗೆ ಟಿಕೆಟ್​ ಕೊಡುವುದಕ್ಕೆ ಆಗಲ್ಲ ಸುಮ್ಮನೆ ಬಿದ್ದುಕೊಂಡು ಇರು ಎಂದು ಹೇಳಿದ್ದರೆ ಕೇಳುತ್ತಿದ್ದೆ. ನನಗೆ ಅವರ ಮೇಲೆ ದ್ವೇಷ ಇಲ್ಲ. ಅವರ ತಂದೆ ಸಿಎಂ ಆಗಿದ್ದ ದಿನದಿಂದಲೂ ಒಳ್ಳೆಯ ಸಂಬಂಧ ಇದೆ. ಸಿ.ಸಿ.ಪಾಟೀಲ್ ಹಾಗೂ ನನ್ನ ವಿನಂತಿ ಮನ್ನಿಸಿ ಬಿಜೆಪಿಗೆ ಬಂದರು. ನಾನು ಸಿ‌‌.ಸಿ‌‌.ಪಾಟೀಲ್ ಸೇರಿ ಬೊಮ್ಮಾಯಿರ‌ನ್ನು ಬಿಜೆಪಿಗೆ ಸೇರ್ಪಡೆ ಮಾಡಿಸಿದ್ದೇವು. ಅವರು ಬೃಹತ್ ನೀರಾವರಿ ಸಚಿವರಾಗಿ ಸಿಎಂ ಆಗಿ ಕಾರ್ಯನಿರ್ವಹಿಸುವುದು ನನಗೆ ಬಹಳ ಸಂತೋಷ ಆಗಿದೆ. ನನಗೆ ಸಹಾಯ ಮಾಡಿದ ಎಲ್ಲರಿಗೂ ಅಭಿನಂದನೆ ಹೇಳುತ್ತೇನೆ. ನಾನು ಎಲ್ಲೇ ಇರಲಿ ಹೇಗೆ ಇರಲಿ ಅಲ್ಲಿ ನನ್ನ ಗುರು ಇದ್ದಾರೆ, ಆ ಗುರುವನ್ನು ಮಾತ್ರ ಮರೆಯಲ್ಲ. ಅವರಿಗೆ ನಾನು ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ, ನನ್ನ ಕ್ಷಮಿಸಬೇಕು ಎಂದು ಹೇಳುತ್ತೇನೆ” ಎಂದರು.

ಟಿಕೆಟ್ ಸಿಗದಿರುವ ಬಗ್ಗೆ ತಿಳಿದ ಸವದಿ ಬೆಂಬಲಿಗರ ಜೊತೆ ಮುಂದಿನ ನಡೆ ಬಗ್ಗೆ ಚರ್ಚಿಸಲು ಸಿದ್ಧರಾಗಿದ್ದರು.  ”ಗುರುವಾರ (ಏಪ್ರಿಲ್ 13) ಸಂಜೆ 4 ಗಂಟೆಗೆ ಅಥಣಿ ಕ್ಷೇತ್ರ ಬೃಹತ್ ಜನರ ಸಭೆ ಕರೆಯಲಾಗುವುದು. ನೀವು ಏನು ಹೇಳುತ್ತಿರಿ ನಾನು ಅದನ್ನು ಕೇಳುತ್ತೇನೆ. ನೀವು ಮನೆಯಲ್ಲಿರು ಎಂದರೆ ನಾನು ಮನೆಯಲ್ಲಿ ಕೂರುತ್ತೇನೆ. ನೀವು ಯಾವು ದಿಕ್ಕು ತೊರುತ್ತಿರಿ ನಾನು ಆ ದಿಕ್ಕು ಕಡೆ ಹೋಗುತ್ತೇನೆ. ನೀವು ಕೊಡುವಂತಹ ಆದೇಶಕ್ಕೆ ನಾನು ಬದ್ಧನಾಗಿದ್ದೇನೆ ಎಂಬ ಸಂದೇಶವನ್ನು ಸವದಿ ರವಾನಿಸಿದ್ದರು.

ಪಕ್ಷೇತರ ಅಥವಾ ಕಾಂಗ್ರೆಸ್‌ನಿಂದ ಸ್ಪರ್ಧೆ ಸಾಧ್ಯತೆ

ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ಲಕ್ಷ್ಮಣ ಸವದಿ ಅವರು, ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೂ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಹೇಳಿದ್ದಾರೆ. ಈ ಮೂಲಕ ಅವರು ಪಕ್ಷೇತರರಾಗಿಯಾದರೂ ಸ್ಪರ್ಧೆ ಮಾಡಲು ನಿಶ್ಚಿಯಿಸಿದ್ದಾರೆ. ಇನ್ನು ಕಾಂಗ್ರೆಸ್ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅವರು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬಂದಿವೆ. ಮತ್ತೊಂದೆಡೆ ಕಾಂಗ್ರೆಸ್ ಕೂಡ ಅಥನಿ ಕ್ಷೇತ್ರಕ್ಕೆ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ. ಈ ಎಲ್ಲ ಬೆಳವಣಿಗೆಗಳನ್ನು ನೋಡಿದಾಗ ಲಕ್ಷ್ಮಣ ಸವದಿ ಕಾಮಗ್ರೆಸ್ ಸೇರಿದರೂ ಅಚ್ಚರಿಪಡಬೇಕಿಲ್ಲ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಯ್‌ ಬರೇಲಿ, ಅಮೇಥಿ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ: ರಾಹುಲ್‌ ಗಾಂಧಿ, ಕಿಶೋರಿ ಲಾಲ್‌...

0
ಲೋಕಸಭಾ ಚುನಾವಣೆಗೆ ಉತ್ತರಪ್ರದೇಶದ ರಾಯ್‌ ಬರೇಲಿ ಕ್ಷೇತ್ರದಿಂದ ಮತ್ತು ಅಮೇಥಿ ಕ್ಷೇತ್ರದಿಂದ ಯಾರು ಸ್ಪರ್ಧಿಸುತ್ತಾರೆ ಎಂಬುವುದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ಎರಡೂ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿದ್ದು, ಉತ್ತರಪ್ರದೇಶದ ರಾಯ್‌...