Homeಕರ್ನಾಟಕಪರಿಷತ್ ಚುನಾವಣೆಗೆ ಬಿಜೆಪಿ ಒತ್ತು, ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಸರತ್ತು

ಪರಿಷತ್ ಚುನಾವಣೆಗೆ ಬಿಜೆಪಿ ಒತ್ತು, ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಸರತ್ತು

ವಿಧಾನಸಭೆಯಲ್ಲಿ ಹಲವು ಮಸೂದೆಗಳನ್ನು ಅಂಗೀಕರಿಸಲಾಗಿದ್ದರೂ ಪರಿಷತ್‌ನಲ್ಲಿ ಅಂಗೀಕಾರ ಪಡೆಯಲು ಸದಸ್ಯರ ಕೊರತೆ ಇದೆ. ಹಾಗಾಗಿ ಬಿಜಪಿ ಇತ್ತ ಗಮನಹರಿಸಿದೆ ಎಂದು ಹೇಳಲಾಗುತ್ತಿದೆ.

- Advertisement -
- Advertisement -

ವಿಧಾನಸಭೆಗೆ ನಡೆಯುತ್ತಿರುವ ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಮತ್ತು ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನೂರಕ್ಕೆ ನೂರರಷ್ಟು ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತುಮಕೂರು ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲ ಜನರ ಅಭಿವೃದ್ಧಿಗೆ ಕೆಲಸ ಮಾಡುತ್ತಿವೆ. ಹಲವು ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. ರಾಜ್ಯ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ಕಾರ್ಯಕರ್ತರು ಪ್ರತಿಯೊಬ್ಬ ಮತದಾರರನ್ನು ಭೇಟಿ ಮಾಡಿ ಬಿಜೆಪಿಗೆ ಮತ ಚಲಾಯಿಸುವಂತೆ ಮನವೊಲಿಸಬೇಕು ಎಂದು ತಿಳಿಸಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಾತನಾಡಿ ಕೇಂದ್ರ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಹಲವು ಸಮಸ್ಯೆಗಳನ್ನ ನೀಗಿಸಿದೆ. ಕೊರೊನ ಸೋಂಕು ನಿಯಂತ್ರಿಸುವಲ್ಲಿ ಹಲವು ಕಠಿಣ ಕ್ರಮಗಳನ್ನು ಅನುಸರಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ:  ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಿಧಾನ ಪರಿಷತ್ ಚುನಾವಣೆಯ ಪ್ರಚಾರಕ್ಕೆ ಬಂದು ಹೋದರೆ ಹೊರತು, ಶಿರಾ ಉಪಚುನಾವಣಾ ಪ್ರಚಾರಕ್ಕೆ ತೆರಳಲಿಲ್ಲ. ಹೀಗಾಗಿ ವಿಧಾನ ಪರಿಷತ್‌ನಲ್ಲಿ ತನ್ನ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ ಶತಪ್ರಯತ್ನಪಡುತ್ತಿದೆ.

ಪರಿಷತ್‌ನಲ್ಲಿ ಆಡಳಿತ ಪಕ್ಷದ ಸದಸ್ಯರ ಸಂಖ್ಯೆ ಕಡಿಮೆ ಇರುವುದರಿಂದ ಮಸೂದೆಗಳನ್ನು ಅಂಗೀಕರಿಸಲು ಸಾಧ್ಯವಾಗುತ್ತಿಲ್ಲ. ವಿಧಾನಸಭೆಯಲ್ಲಿ ಹಲವು ಮಸೂದೆಗಳನ್ನು ಅಂಗೀಕರಿಸಲಾಗಿದ್ದರೂ ಪರಿಷತ್‌ನಲ್ಲಿ ಅಂಗೀಕಾರ ಪಡೆಯಲು ಸದಸ್ಯರ ಕೊರತೆ ಇದೆ. ಸುಗ್ರೀವಾಜ್ಞೆಗಳು ಕೂಡ ಪರಿಷತ್ತಿನಲ್ಲಿ ಬಿದ್ದುಹೋಗಿವೆ. ಹಾಗಾಗಿ ಬಿಜಪಿ ಇತ್ತ ಗಮನಹರಿಸಿದೆ ಎಂದು ಹೇಳಲಾಗುತ್ತಿದೆ.

ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕೂಡ ಪರಿಷತ್‌ನಲ್ಲಿ ಸದಸ್ಯರ ಸಂಖ್ಯೆಯನ್ನು ಹೆಚ್ಷಿಸಿಕೊಳ್ಳುವುದಕ್ಕೆ ಬಿಜೆಪಿ ಒತ್ತು ನೀಡುತ್ತಿದೆ ಎಂದು ಹೇಳಿ ಹೋಗಿದ್ದರು. ಈಗ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವುದು ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

ಆಗ್ನೇಯ ಪದವೀಧರರ ಕ್ಷೇತ್ರ ಜೆಡಿಎಸ್ ತೆಕ್ಕೆಯಲ್ಲಿತ್ತು. ಇದೀಗ ಚೌಡರೆಡ್ಡಿ ತೂಪಲ್ಲಿ ಜೆಡಿಎಸ್‌ನಿಂದ, ರಮೇಶ್ ಬಾಬು ಕಾಂಗ್ರೆಸ್‌ನಿಂದ ಮತ್ತು ಬಿಜೆಪಿಯಿಂದ ಚಿದಾನಂದಗೌಡ ಅಭ್ಯರ್ಥಿಗಳಾಗಿ ಕಣದಲ್ಲಿದ್ದಾರೆ. ಅದೇ ಕಾರಣಕ್ಕೇ ಬಿಜೆಪಿ ಚಿದಾನಂದಗೌಡರನ್ನು ಗೆಲ್ಲಿಸಿಕೊಳ್ಳಲು ತಂತ್ರ ಹೆಣೆದಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕೂಡ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿವೆ.

ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಗಳಾಗಿ ಕಣದಲ್ಲಿರುವ ಶ್ರೀನಿವಾಸ್ ಮತ್ತು ಹಾಲನೂರು ಲೇಪಾಕ್ಷ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಶ್ರೀನಿವಾಸ್ ಪತ್ನಿ ಪೂರ್ಣಿಮ ಬಿಜೆಪಿ ಶಾಸಕಿಯಾಗಿದ್ದಾರೆ. ಈ ಇಬ್ಬರೂ ಕೂಡ ಮತದಾರರ ಮೇಲೆ ಸ್ವಲ್ಪಮಟ್ಟಿನ ಪ್ರಭಾವ ಬೀರುವಷ್ಟು ಶಕ್ತಿಯನ್ನು ಹೊಂದಿದ್ದಾರೆ. ಇದು ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಹಿನ್ನಡೆಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.


ಇದನ್ನೂ ಓದಿ:  ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...