Homeಮುಖಪುಟಬಿಜೆಪಿಯ ಬೂಟಾಟಿಕೆಗೆ ಮಿತಿಯಿಲ್ಲ: 2ಜಿ ಪ್ರಕರಣದ ತೀರ್ಪು ತಿದ್ದುಪಡಿ ಕೋರಿದ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

ಬಿಜೆಪಿಯ ಬೂಟಾಟಿಕೆಗೆ ಮಿತಿಯಿಲ್ಲ: 2ಜಿ ಪ್ರಕರಣದ ತೀರ್ಪು ತಿದ್ದುಪಡಿ ಕೋರಿದ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

- Advertisement -
- Advertisement -

ಯುಪಿಎ ಆಡಳಿತದಲ್ಲಿ 2ಜಿ ಸ್ಪೆಕ್ಟ್ರಂನ ಆಡಳಿತಾತ್ಮಕ ಹಂಚಿಕೆಯನ್ನು ‘ಹಗರಣ’ ಎಂದು ಕರೆದಿದ್ದ ಬಿಜೆಪಿ, ಈಗ ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಹರಾಜು ಇಲ್ಲದೆ ಸ್ಪೆಕ್ಟ್ರಂ ನೀಡಲು ಸುಪ್ರೀಂ ಕೋರ್ಟ್‌ನಿಂದ ಅನುಮತಿ ಕೇಳುತ್ತಿದ್ದು, ಬಿಜೆಪಿಯ ಬೂಟಾಟಿಕೆಗೆ ಮಿತಿಯಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

2ಜಿ ಸ್ಪೆಕ್ಟ್ರಮ್ ಪ್ರಕರಣದಲ್ಲಿ ತನ್ನ ತೀರ್ಪನ್ನು ಮಾರ್ಪಡಿಸುವಂತೆ ಕೋರಿ ಕೇಂದ್ರವು ಸೋಮವಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಮೋದಿ ಸರ್ಕಾರ ಮತ್ತು ಭ್ರಷ್ಟ ಜನತಾ ಪಾರ್ಟಿಯ ಬೂಟಾಟಿಕೆಗೆ ಯಾವುದೇ ಮಿತಿಯಿಲ್ಲ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ, 2ಜಿ ಸ್ಪೆಕ್ಟ್ರಂ ಆಡಳಿತಾತ್ಮಕ ಹಂಚಿಕೆಯನ್ನು ‘ಹಗರಣ’ ಎಂದು ಬಿಜೆಪಿ ಹೇಳಿತ್ತು. ಈಗ ಅದಕ್ಕೆ ತದ್ವಿರುದ್ಧವಾಗಿ ವಾದ ಮಂಡಿಸುತ್ತಿದ್ದಾರೆ. ಹರಾಜು ಮಾಡದೆ ತಮಗೆ ಬೇಕಾದವರಿಗೆ ಸ್ಪೆಕ್ಟ್ರಂ ನೀಡಲು ಅನುಮತಿ ನೀಡಲು ಕೇಂದ್ರವು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದಾರೆ” ಎಂದು ಆರೋಪಿಸಿದ್ದಾರೆ.

“ಖಂಡಿತವಾಗಿಯೂ, ಈ ‘ಮೋದಾನಿ ಆಡಳಿತ’ ಈಗಾಗಲೇ ಸಾರ್ವಜನಿಕ ಸಂಪನ್ಮೂಲಗಳನ್ನು ಪ್ರಧಾನ ಮಂತ್ರಿಯ ಕ್ರೂರಿ ಬಂಡವಾಳಶಾಹಿ ಸ್ನೇಹಿತರಿಗೆ ಹಸ್ತಾಂತರಿಸುತ್ತಿದೆ. ವಿಮಾನ ನಿಲ್ದಾಣಗಳನ್ನು ಒಂದು ಕಂಪನಿಗೆ ಹಸ್ತಾಂತರಿಸಲಾಗಿದೆ. ಕಲ್ಲಿದ್ದಲು ಗಣಿಗಳನ್ನು ಮೋಸದ ಹರಾಜಿನಲ್ಲಿ ನೀಡಲಾಗಿದೆ. ಉಪಗ್ರಹ ಸ್ಪೆಕ್ಟ್ರಮ್ ಅನ್ನು ಸಹ ಹಸ್ತಾಂತರಿಸಲಾಗಿದೆ” ಎಂದು ಜೈರಾಮ್ ರಮೇಶ್ ಕಿಡಿಕಾರಿದ್ದಾರೆ.

“ಒಟ್ಟಾರೆಯಾಗಿ 150 ಕೋಟಿ ರೂಪಾಯಿಗಳ ಚುನಾವಣಾ ಬಾಂಡ್‌ಗಳಿಗೆ ಬದಲಾಗಿ, ಅವರು ಈಗಾಗಲೇ ತಮ್ಮ ಕಾರ್ಪೊರೇಟ್ ದಾನಿಗಳಿಗೆ 4 ಲಕ್ಷ ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಸಂಪನ್ಮೂಲಗಳನ್ನು ಹಸ್ತಾಂತರಿಸಿದ್ದಾರೆ” ಎಂದಿದ್ದಾರೆ.

“ಜೂನ್ 4 ರಂದು, ಭಾರತದ ಮತದಾರರು ಈ ಪಕ್ಷಕ್ಕೆ ‘ಸಂಘಟಿತ ಲೂಟಿ’ ಬಾಗಿಲನ್ನು ತೋರಿಸಲಿದ್ದಾರೆ. ಇಂಡಿಯಾ ಸರ್ಕಾರವು ಅದಾನಿ ಮೆಗಾ ಹಗರಣದ ಕುರಿತು ಜಂಟಿ ಸಂಸದೀಯ ಸಮಿತಿ ಮೂಲಕ ತನಿಖೆ ನಡೆಸಲಿದೆ. ಪ್ರಧಾನಿ ತಮ್ಮ ಸುಸಜ್ಜಿತವಾದ ‘ಚಾರ್ ರಾಸ್ತೆ’ ಮೂಲಕ 8200 ಕೋಟಿ ರೂ. ಸಂಗ್ರಹಿಸಿದ
#PayPM ಹಗರಣ ಸೇರಿದಂತೆ ಇತರ ಹಗರಣಗಳನ್ನು ಸರ್ಕಾರ ತನಿಖೆ ನಡೆಸಲಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಫೆಬ್ರವರಿ 2, 2012 ರಂದು ನೀಡಿದ್ದ ತೀರ್ಪಿನಲ್ಲಿ, ಜನವರಿ 2008ರಲ್ಲಿ ಎ ರಾಜಾ ಅವರು ದೂರಸಂಪರ್ಕ ಸಚಿವರಾಗಿದ್ದ ಅವಧಿಯಲ್ಲಿ ವಿವಿಧ ಸಂಸ್ಥೆಗಳಿಗೆ ನೀಡಲಾಗಿದ್ದ 2ಜಿ ತರಂಗಾಂತರ ಪರವಾನಗಿಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.

ಸೋಮವಾರ, ಕೇಂದ್ರದ ಪರವಾಗಿ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ಅವರ ಪೀಠದ ಮುಂದೆ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದು, ಕೆಲವು ಪ್ರಕರಣಗಳಲ್ಲಿ ಕೇಂದ್ರವು 2ಜಿ ಸ್ಪೆಕ್ಟ್ರಂ ಪರವಾನಗಿಗಳನ್ನು ನೀಡಲು ಬಯಸಿರುವುದರಿಂದ 2012 ರ ತೀರ್ಪನ್ನು ಮಾರ್ಪಾಡು ಮಾಡಬೇಕು ಎಂದು ಮನವಿ ಮಾಡಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : 27 ಪ್ರಕರಣಗಳು: ಪ್ರಧಾನಿ ಮೋದಿ ವಿರುದ್ಧದ ದೂರುಗಳಿಗೆ ಸಂಬಂಧಿಸಿ ಚುನಾವಣಾ ಆಯೋಗ ಏನು ಮಾಡಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...