Homeಮುಖಪುಟಮನುಸ್ಮೃತಿ ಬಗ್ಗೆ ಟೀಕೆ: ಪ್ರತಿಭಟನೆಗೆ ತೆರಳುತ್ತಿದ್ದ ನಟಿ ಖುಷ್ಬೂ ಬಂಧನ

ಮನುಸ್ಮೃತಿ ಬಗ್ಗೆ ಟೀಕೆ: ಪ್ರತಿಭಟನೆಗೆ ತೆರಳುತ್ತಿದ್ದ ನಟಿ ಖುಷ್ಬೂ ಬಂಧನ

ಮನುಸ್ಮೃತಿಯು ಮಹಿಳೆಯರನ್ನು ಕೀಳಾಗಿ ಕಾಣುತ್ತದೆ ಮತ್ತು ಮನುಧರ್ಮ ಮಹಿಳೆಯರನ್ನು ಲೈಂಗಿಕ ಕಾರ್ಯಕರ್ತೆಯರಂತೆ ಪರಿಗಣಿಸುತ್ತದೆ ಎಂದು ವಿಸಿಕೆ ಪಕ್ಷದ ಮುಖ್ಯಸ್ಥ ತೋಳ್ ತಿರುಮಾವಾಲವನ್ ಹೇಳಿದ್ದರು.

- Advertisement -
- Advertisement -

ತಿಂಗಳ ಅಕ್ಟೋಬರ್‌ 12ರಂದು  ಬಿಜೆಪಿಗೆ ಸೇರ್ಪಡೆಯಾದ ನಟಿ, ರಾಜಕಾರಣಿ ಖುಷ್ಬೂ ಸುಂದರ್ ಅವರನ್ನು ಇಂದು ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆ ಬಳಿ ಪೊಲೀಸರು ಬಂಧಿಸಿದ್ದಾರೆ. ಮನುಸ್ಮೃತಿ ಬಗ್ಗೆ ರಾಜಕಾರಣಿಯೊಬ್ಬರು ನೀಡಿದ್ದ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲು ಖುಷ್ಬೂ ತೆರಳುತ್ತಿದ್ದರು. ಮಾರ್ಗ ಮಧ್ಯೆಯೇ ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ.

ಮನುಸ್ಮೃತಿಯು ಮಹಿಳೆಯರನ್ನು ಕೀಳಾಗಿ ಕಾಣುತ್ತದೆ ಮತ್ತು ಮನುಧರ್ಮ ಮಹಿಳೆಯರನ್ನು ಲೈಂಗಿಕ ಕಾರ್ಯಕರ್ತೆಯರಂತೆ ಪರಿಗಣಿಸುತ್ತದೆ ಎಂದು ವಿಡುಥಾಳೈ ಚಿರುಥೈಗಲ್ ಕಚ್ಚಿ (ವಿಸಿಕೆ) ಪಕ್ಷದ ಮುಖ್ಯಸ್ಥ ತೋಳ್ ತಿರುಮಾವಾಲವನ್ ಅವರು ಇತ್ತೀಚೆಗೆ ಒಂದು ಭಾಷಣದಲ್ಲಿ ಹೇಳಿದ್ದರು. ಜೊತೆಗೆ ಮನುಸ್ಮೃತಿಯನ್ನು ನಿಷೇಧಿಸುವಂತೆ ಒತ್ತಾಯಿಸಿದ್ದರು.

ತಿರುಮಾವಾಲವನ್ ಹೇಳಿಕೆ ಖಂಡಿಸಿ ನಟಿ ಖುಷ್ಬೂ ನೇತೃತ್ವದಲ್ಲಿ ಬಿಜೆಪಿಯ ಮಹಿಳಾ ವಿಭಾಗದ ಪ್ರತಿಭಟನೆ ನಡೆಸಲು ಕಡಲೂರು ಜಿಲ್ಲೆಗೆ ತೆರಳುತ್ತಿದ್ದರು. ಕಡಲೂರಿನಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ್ದರು.

ತಿರುಮಾವಾಲವನ್ ಅವರ ಹೇಳಿಕೆಯನ್ನ ವಿರೋಧ ಪಕ್ಷ ಡಿಎಂಕೆ, ಕಾಂಗ್ರೆಸ್​ ಹಾಗೂ ಬಿಜೆಪಿ ಪಕ್ಷಗಳು ಖಂಡಿಸಿವೆ.  ಬಿಜೆಪಿ ಪಕ್ಷವು ತಿರುಮಾವಾಲವನ್ ಅವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದೆ. ಬಿಜೆಪಿ ಮಹಿಳಾ ವಿಭಾಗವು ತಮಿಳುನಾಡಿನಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ವಿಸಿಕೆ ಮುಖ್ಯಸ್ಥರ ಹೇಳಿಕೆಗಳು ಕೋಮು ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಬಿಜೆಪಿ ಹೇಳಿದೆ. ತಿರುಮಾವಾಲವನ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ

ಇದನ್ನೂ ಓದಿ: ರಾಷ್ಟ್ರ ಮುಂದುವರಿಯಲು ಪ್ರಧಾನಿ ಮೋದಿಯಂತಹ ವ್ಯಕ್ತಿ ಬೇಕು: ಬಿಜೆಪಿ ಸೇರ್ಪಡೆ ಬಳಿಕ ನಟಿ ಖುಷ್ಬೂ

ಟೀಕೆಗೆ ಪ್ರತಿಕ್ರಿಯಿಸಿರುವ ತಿರುಮಾವಾಲವನ್, “ನಾನು ಮನುಸ್ಮೃತಿ ಬಗ್ಗೆ ಮಾತ್ರ ಉಲ್ಲೇಖಿಸಿದ್ದೇನೆ. ಮನುಸ್ಮೃತಿ ಕೃತಿಯನ್ನು ನಿಷೇಧಿಸಬೇಕಾಗಿದೆ. ಘರ್ಷಣೆಯನ್ನು ಪ್ರಚೋದಿಸಲು ಬಿಜೆಪಿ ನಕಲಿ ಸುದ್ದಿಗಳನ್ನು ಹರಡುತ್ತಿದೆಎಂದು ಹೇಳಿದ್ದಾರೆ.

ಸೋಮವಾರ(ಅ.26) ತಿರುಮಾವಾಲವನ್ ವಿವಾಹ ಸಮಾರಂಭವೊಂದರಲ್ಲಿ ಭಾಗಿಯಾಗಲು ಈರೋಡ್ಗೆ ಭೇಟಿ ನೀಡಿದಾಗ ಬಿಜೆಪಿ ಮತ್ತು ವಿಸಿಕೆ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿತ್ತು.  ಬಿಜೆಪಿ ಕಾರ್ಯಕರ್ತರು ಅವರ ವಿರುದ್ಧ ಘೋಷಣೆಗಳನ್ನು ಕೂಗಿ, ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು. ತಿರುಮಾವಾಲವನ್  ಜೊತೆಗಿದ್ದ ವಿಸಿಕೆ ಕಾರ್ಯಕರ್ತರು ಕೂಡ ಪ್ರತಿಯಾಗಿ ಘೋಷಣೆಗಳನ್ನ ಕೂಗಿದರು.

ಪರಿಸ್ಥಿತಿ ಕೈ ಮೀರುತ್ತಿದೆ ಎಂದು ತಿಳಿದ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಸ್ಥಳದಿಂದ ಪೊಲೀಸ್ ವಾಹನದಲ್ಲಿ ಕರೆದೊಯ್ದರು. ಆಗಲೂ ವಿಸಿಕೆಯ ಕೆಲ ಕಾರ್ಯಕರ್ತರು ಪೊಲೀಸ್ ವ್ಯಾನ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಯಾರು ಗಾಯಗೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ

ಖುಷ್ಬೂ ಸುಂದರ್ ತಮಿಳುನಾಡು ಚುನಾವಣೆಗೆ ಕೆಲವೇ ತಿಂಗಳುಗಳು ಇರುವಾಗ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದ ನಟಿ ’ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಬಯಸುವ ನನ್ನಂತಹ ಜನರನ್ನು ತುಳಿಯಲಾಗುತ್ತಿದೆ ಎಂದಿದ್ದರು. ಜೊತೆಗೆ ’ಪಕ್ಷದಲ್ಲಿ ವಾಸ್ತವ ಪರಿಸ್ಥಿತಿಯ ಅರಿವಿಲ್ಲದವರು ಅಥವಾ ಸಾರ್ವಜನಿಕವಾಗಿ ಗುರುತಿಸಿಕೊಳ್ಳದ ವ್ಯಕ್ತಿಗಳು ನಿಯಂತ್ರಣ ಹೇರುತ್ತಿದ್ದಾರೆ’ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದರು.


ಇದನ್ನೂ ಓದಿ: ತಮಿಳುನಾಡು: AIADMK ಪಕ್ಷದಿಂದ ಇ.ಪಳನಿಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿ; ಅಧಿಕೃತ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...