Homeನಿಜವೋ ಸುಳ್ಳೋವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

ವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

- Advertisement -
- Advertisement -

ಬಿಜೆಪಿ ಸದಸ್ಯ ಮೇಜರ್ ಸುರೇಂದ್ರ ಪೂನಿಯಾ ಅವರು “ಸೈಬರಾಬಾದ್ ಪೊಲೀಸರು ನಗರದಲ್ಲಿ ಆರೆಂಜ್ ಮಾರಾಟವನ್ನು ನಿಷೇಧಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ “ರಾಜ್ಯದಲ್ಲಿ ಪೋಲಿಸರು ಶರಿಯ ವಿಧಿಸಲು ಪ್ರಾರಂಭಿಸಿದ್ದಾರೆ, ಮುಂದಕ್ಕೆ ಸಿಂಧೂರ, ಮಂಗಳಸೂತ್ರ, ಬಿಂದಿ ಹಾಗೂ ಓಂ ಅನ್ನು ಕೂಡಾ ನಿಷೇಧ ಮಾಡುವ ದಿನ ದೂರವಿಲ್ಲ, ಜಾತ್ಯಾತೀತತೆ ಜಿಂದಾಬಾದ್” ಎಂದು ಪತ್ರಿಕೆಯೊಂದರ ಮೊದಲ ಪುಟದ ಚಿತ್ರವನ್ನು ಟ್ವಿಟ್ಟರಿನಲ್ಲಿ (ಆರ್ಕೈವ್ ನೋಡಿ) ಹಂಚಿಕೊಂಡಿದ್ದಾರೆ.

ಅವರ ಈ ಟ್ವೀಟನ್ನು ತಗೆದು ಹಾಕುವ ಮೊದಲು ಸುಮಾರು 14,000 ಲೈಕ್‌ಗಳು ಹಾಗೂ 4,000 ರಿಟ್ವೀಟ್‌ಗಳನ್ನು ಗಳಿಸಿತ್ತು.ಇತರ ಕೆಲವು ಟ್ವಿಟ್ಟರ್‌ ಬಳಕೆದಾರರು ಕೂಡಾ ಇದನ್ನು ನಂಬಿ ಹಂಚಿಕೊಂಡಿದ್ದರು.

@theskindoctor13 ಎಂಬ ಟ್ವಿಟರ್ ಹ್ಯಾಂಡಲ್ ಇದನ್ನು ಸೈಬರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿತ್ತು ಟ್ವೀಟ್ ಮಾಡಿತ್ತು.

ನಿಜವಾಗಿಯೂ ನಡೆದದ್ದೇನು?

ಪತ್ರಿಕೆಯ ಚಿತ್ರವೂ ಕಂಪ್ಯೂಟರ್ ರಚಿತ ಸ್ಪೂಫ್ ಪತ್ರಿಕೆ ಎಂಬ ಅಂಶವನ್ನು ಪೂನಿಯಾ ಗಮನಿಸದೆ ಇದ್ದುದರಿಂದ ಇಷ್ಟೆಲ್ಲ ರಾದ್ದಾಂತಗಳಾಗಿವೆ. ಪತ್ರಿಕೆಯ ಹೆಸರು ‘ಡೆಕ್ಕನ್ ಕ್ರೊನಿಕಲ್’ ಮತ್ತು ‘ವಿಡಂಬನೆ ಮಾಡಿದವರು @theskindoctor13’ ಎಂದು ಪತ್ರಿಕೆಯ ಬಲಗಡೆ ಕೊನೆಯಲ್ಲಿ ಸ್ಪಷ್ಟವಾಗಿ ಬರೆಯಲಾಗಿದೆ.


ಇದನ್ನೂ ಓದಿ: Fact Check: ಸುಳ್ಳು ಹೇಳಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌


ಆದರೆ ಪೂನಿಯಾ ಶರಿಯಾ ಮತ್ತು ಜಾತ್ಯಾತೀತತೆಯನ್ನು ಉಲ್ಲೇಖಿಸುವ ಆತುರದಲ್ಲಿ ಪತ್ರಿಕೆಯಲ್ಲಿದ್ದ ವಿಡಂಬನೆಯನ್ನು ಗಮನಿಸಿರಲಿಲ್ಲ. ಪತ್ರಿಕೆಯೂ ‘ಯುನೆಸ್ಕೋ ಸೈಬರಾಬಾದ್ ಪೊಲೀಸರನ್ನು ವಿಶ್ವದ ಅತ್ಯಂತ ಜಾತ್ಯತೀತ ಪೊಲೀಸ್ ಎಂದು ಘೋಷಿಸಿದೆ’ ಎಂದು ಬರೆದಿದೆ.

ನೀಲಂ ಸಿಂಗ್ ಎಂಬ ಟ್ವಿಟ್ಟರ್ ಬಳಕೆದಾರ @theskindoctor ಹೆಸರಿನೊಂದಿಗೆ ‘ಹಿಂದೂ ಹಣ್ಣಿನ ಅಂಗಡಿ’  ಎಂದು ಹೋರ್ಡಿಂಗ್ ಅನ್ನು ಹಾಕಿದ್ದಕ್ಕೆ ಜಾರ್ಖಂಡ್‌ನಲ್ಲಿ ಪೋಲಿಸರು ಮಾರಾಟಗಾರನ ವಿರುದ್ದ ಪ್ರಕರಣ ದಾಖಲಿಸಿದ್ದರಿಂದ ಅದಕ್ಕೆ ಪ್ರತಿಕ್ರಿಯೆಯಾಗಿ ವಿಡಂಬನಾತ್ಮಕ ಕ್ಲಿಪಿಂಗ್ ಮಾಡಿದ್ದರು. ತೆಲಂಗಾಣದಲ್ಲಿ ಕೂಡಾ ಇದೇ ರೀತಿಯ ಪ್ರಕರಣಗಳು ವರದಿಯಾಗಿತ್ತು. ಟ್ವಿಟ್ಟರ್‌ ಬಳಕೆದಾರರೊಬ್ಬರು ಪೊಲೀಸರನ್ನು ಟ್ಯಾಗ್ ಮಾಡಿ ಅತ್ತಾಪುರದಲ್ಲಿ ತರಕಾರಿ ಮಾರಾಟಗಾರರೊಬ್ಬರು ತಮ್ಮ ಗಾಡಿಗಳಲ್ಲಿ ಕೇಸರಿ ಧ್ವಜಗಳನ್ನು ಅಳವಡಿಸಿದ್ದಾರೆ ಎಂದು ಆರೋಪಿಸಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಸೈಬದರಾಬಾದ್ ಪೊಲೀಸರು ರಾಜೇಂದ್ರ ನಗರ ಪೊಲೀಸ್ ಠಾಣೆಯನ್ನು ಟ್ಯಾಗ್ ಮಾಡಿದ್ದಾರೆ. ಇದರಿಂದಾಗಿ ಶಾಸಕ ಅರವಿಂದ್ ಧರ್ಮಪುರಿ ಸೇರಿದಂತೆ ಹಲವಾರು ಬಿಜೆಪಿ ಸದಸ್ಯರು ಪೊಲೀಸ್ ಠಾಣೆಯನ್ನು ಏಕೆ ಟ್ಯಾಗ್ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

 

ಇದಕ್ಕಾಗಿ @ theskindoctor13 ಎಂಬ ಬಳಕೆದಾರ ವಿಡಂಬನಾತ್ಮಕ ವೃತ್ತಪತ್ರಿಕೆ ಕ್ಲಿಪಿಂಗ್ ತಯಾರಿಸಿ ಅದನ್ನು ಪ್ರಶ್ನಿಸಿದ್ದರು. ಈಗ ಪೊಲೀಸರು ವಿಡಂಬನೆ ಮಾಡಿದ್ದಕ್ಕೆ ಅವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಅಮಿತ್ ಷಾ ಸುಳ್ಳು ಹೇಳಿದ್ದೇಕೆ ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...