Homeಮುಖಪುಟ‘ವಂದೇ ಮಾತರಂ’ ಹಾಡಲು ಬಾರದ ಬಿಜೆಪಿಗರಿಗೆ ಕೋರ್ಟ್ ಆದೇಶ ನೆಮ್ಮದಿ ತಂದಿದೆ: ಬಿ.ಕೆ. ಹರಿಪ್ರಸಾದ್ ವ್ಯಂಗ್ಯ

‘ವಂದೇ ಮಾತರಂ’ ಹಾಡಲು ಬಾರದ ಬಿಜೆಪಿಗರಿಗೆ ಕೋರ್ಟ್ ಆದೇಶ ನೆಮ್ಮದಿ ತಂದಿದೆ: ಬಿ.ಕೆ. ಹರಿಪ್ರಸಾದ್ ವ್ಯಂಗ್ಯ

- Advertisement -
- Advertisement -

‘ವಂದೇ ಮಾತರಂ’ ಹಾಡದಿದ್ದರೆ ಒಬ್ಬ ವ್ಯಕ್ತಿಯನ್ನು ಅಪರಾಧಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂಬ ಸಂವಿಧಾನಾತ್ಮಕ ನಿಲುವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿರುವುದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸ್ವಾಗತಿಸಿದ್ದಾರೆ.

ಧಾರ್ಮಿಕ ನಂಬಿಕೆ ಅಥವಾ ಆತ್ಮಸಾಕ್ಷಿಯ ಕಾರಣದಿಂದ ಯಾರಾದರೂ ಹಾಡಲು ನಿರಾಕರಿಸಿದರೆ ಅವರನ್ನು ಕ್ರಿಮಿನಲ್ ಕ್ರಮಕ್ಕೆ ಒಳಪಡಿಸಬಾರದು ಎಂಬ ದೇಶದ ಸರ್ವೋಚ್ಚ ನ್ಯಾಯಾಲಯದ ಅಭಿಪ್ರಾಯವು ನಮ್ಮ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳು ಎಷ್ಟು ಗಟ್ಟಿಯಾಗಿವೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಬಿಜೆಪಿಯ ನಕಲಿ ದೇಶಭಕ್ತಿಯನ್ನು ಟೀಕಿಸಿರುವ ಅವರು, “ಎಲ್ಲಕ್ಕಿಂತ ಮುಖ್ಯವಾಗಿ ಸುಪ್ರೀಂ ಕೋರ್ಟ್‌ನ ಈ ಆದೇಶದಿಂದಾಗಿ ವಂದೇ ಮಾತರಂ ಸರಿಯಾಗಿ ಹಾಡಲು ಬಾರದ ಬಿಜೆಪಿಗರು ಇದೀಗ ಕನಿಷ್ಠ ಒಂದು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದ್ದು ನನಗಂತೂ ಸಮಾಧಾನ ತಂದಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಪಕ್ಷವು ತನ್ನ ಎಐಸಿಸಿ ಕಾರ್ಯಕಾರಿ ಸಮಿತಿಯಲ್ಲಿ ಹಾಗೂ ಕರ್ನಾಟಕದ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಹಾಡುವ ನಿರ್ಧಾರವನ್ನು ಈಗಾಗಲೇ ಸ್ಪಷ್ಟವಾಗಿ ಹೇಳಿದೆ. ದೇಶಭಕ್ತಿ ಎಂಬುದು ಯಾರನ್ನಾದರೂ ಒಂದು ಹಾಡನ್ನು ಕಡ್ಡಾಯವಾಗಿ ಹಾಡುವಂತೆ ಬಲವಂತವಾಗಿ ಒತ್ತಾಯಿಸುವುದರಲ್ಲಿ ಇಲ್ಲ, ಬದಲಿಗೆ ಸಂವಿಧಾನವನ್ನು, ದೇಶದ ವೈವಿಧ್ಯತೆಯನ್ನು ಗೌರವಿಸುವುದು ಮತ್ತು ಪ್ರತಿಯೊಬ್ಬ ನಾಗರಿಕನ ಆತ್ಮಸಾಕ್ಷಿಯ ಸ್ವಾತಂತ್ರ್ಯವನ್ನು ರಕ್ಷಿಸುವುದೇ ನೈಜ ದೇಶಭಕ್ತಿಯಾಗಿದೆ. ಸ್ವಾತಂತ್ರ್ಯ ಹೋರಾಟದ ಕಾಲದಲ್ಲೇ ಈ ಕುರಿತು ಸುದೀರ್ಘ ಚರ್ಚೆ ನಡೆಸಿ, ದೇಶದ ಬಹುತ್ವವನ್ನು ಎತ್ತಿಹಿಡಿಯುವ ಮಾರ್ಗವನ್ನು ಹಿರಿಯ ನಾಯಕರು ಕಂಡುಕೊಂಡಿದ್ದರು. ಆದರೆ ಆ ಐತಿಹಾಸಿಕ ಒಮ್ಮತವನ್ನು ಬದಿಗಿಟ್ಟು, ಇಡೀ ಆರು ಚರಣಗಳನ್ನು ಅಧಿಕೃತವಾಗಿ ಹಾಡಿಸುವ ಹೊಸ ವ್ಯವಸ್ಥೆಯನ್ನು ಕೇಂದ್ರ ಸರ್ಕಾರವು ಜನರ ಮೇಲೆ ಬಲವಂತವಾಗಿ ಹೇರಲು ಹೊರಟಿದೆ ಎಂದು ಹರಿಪ್ರಸಾದ್ ಆಕ್ರೋಶ ಹೊರಹಾಕಿದ್ದಾರೆ.

ಇತ್ತೀಚೆಗೆ ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ನಡೆದ ಘಟನೆಯನ್ನು ನೆನಪಿಸಿದ ಹರಿಪ್ರಸಾದ್, ಬಿಜೆಪಿಯವರ ರಾಜಕೀಯ ನಿಲುವಿನ ಅಸ್ಪಷ್ಟತೆ ಮತ್ತು ಬೂಟಾಟಿಕೆಯನ್ನು ಬಹಿರಂಗಪಡಿಸಿದ್ದಾರೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ಮೊದಲ ಎರಡು ಚರಣಗಳನ್ನು ಹಾಡುವ ನಿರ್ಧಾರವನ್ನು ವಿರೋಧಿಸಿ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಪೂರ್ಣ ಗೀತೆ ಹಾಡಲು ಮುಂದಾಗಿದ್ದರು.

ಆಡಳಿತ ಪಕ್ಷದ ಸದಸ್ಯರು ಎರಡು ಚರಣಗಳ ನಂತರ ನಿಂತು ಸಂವಿಧಾನದ ಪೀಠಿಕೆಯನ್ನು ಓದಿದಾಗ, ಪ್ರತಿಪಕ್ಷದ ಸದಸ್ಯರು ಪೂರ್ಣ ಹಾಡನ್ನು ಮುಂದುವರಿಸಿದರು. ಆದರೆ, ವಂದೇ ಮಾತರಂನ ಪೂರ್ಣ ಆವೃತ್ತಿಯನ್ನು ಹಾಡಲೇಬೇಕು ಎಂದು ಸದನದಲ್ಲಿ ರಾದ್ಧಾಂತ ಮಾಡಿದ ಬಿಜೆಪಿಯವರಿಗೆ ಹಾಡಿನ ಸಂಪೂರ್ಣ ಸಾಹಿತ್ಯವೇ ಬಾಯಿಪಾಠವಿರಲಿಲ್ಲ. ಕೈಯಲ್ಲಿ ಮುದ್ರಿತ ಪ್ರತಿಗಳನ್ನು ಹಿಡಿದು, ನಾಲಗೆಯೂ ಹೊರಳದೆ ತಪ್ಪು ತಪ್ಪಾಗಿ ಹಾಡಿದರು. ವಂದೇ ಮಾತರಂ ಅನ್ನು ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡು ಮೆರೆಯುವ ಬಿಜೆಪಿಗೆ ಅದೇ ಹಾಡನ್ನು ಸರಿಯಾಗಿ ಹಾಡಲು ಬಾರದಿರುವುದಕ್ಕಿಂತ ದೊಡ್ಡ ರಾಜಕೀಯ ವೈರುಧ್ಯ ಮತ್ತೊಂದಿಲ್ಲ ಎಂದು ಅವರು ತಿವಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ: ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಉಪಾಸನಾ ಚೌಧರಿ ಮನೆ ಮೇಲೆ ಕಲ್ಲುತೂರಾಟ, ಮಾಜಿ ಶಾಸಕ ಹುಮಾಯೂನ್ ಕಬೀರ್ ಮೇಲೂ ಹಲ್ಲೆ!

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮುಕುಂದಪುರದಲ್ಲಿ ಮಂಗಳವಾರ (ಸೆ. 22) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಘರ್ಷಣೆ ನಡೆದಿದೆ. ಘಟನೆಯಲ್ಲಿ ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಹಾಗೂ ವಕ್ತಾರೆ...

SIR ಏಕಪಕ್ಷೀಯ ತೀರ್ಮಾನ ಖಂಡಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರಿ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision – SIR / ವಿಶೇಷ...

ರಾಯಚೂರು ದಲಿತ ದೌರ್ಜನ್ಯ: ಪ್ರಕರಣಗಳನ್ನು CIDಗೆ ಒಪ್ಪಿಸುವಂತೆ ಆಗ್ರಹಿಸಿ ಗೃಹ ಸಚಿವರನ್ನು ಭೇಟಿಯಾದ ನಿಯೋಗ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರ ಮೇಲೆ ಸಾಲು ಸಾಲು ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರದಂತಹ ಭೀಕರ ಕೃತ್ಯಗಳು ಹೆಚ್ಚಾಗುತ್ತಿರುವುದನ್ನು ತೀವ್ರವಾಗಿ ಖಂಡಿಸಿ, ದಲಿತ ಹಕ್ಕುಗಳ ಹೋರಾಟಗಾರರ ಹಾಗೂ ಪ್ರಮುಖ ಮುಖಂಡರ ನಿಯೋಗವು ಗೃಹ...

ಶಾರ್ಜೀಲ್ ಇಮಾಮ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು

ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್‌ಗೆ ಅವರ ಸೋದರಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯವು ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಅಕ್ಟೋಬರ್ 4 ರಿಂದ ಅಕ್ಟೋಬರ್ 10 ರವರೆಗೆ ಇರಲಿದೆ...

ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು

ಕೋಲ್ಕತ್ತಾದ ಸುರೇಂದ್ರನಾಥ ಕಾಲೇಜಿನ ಮುಸ್ಲಿಂ ಪ್ರಾಧ್ಯಾಪಕಿ ಮೊಹಮ್ಮದಿ ತರನ್ನುಮ್ ಅವರನ್ನು ಹಾಜರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇದಾದ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು...

SIR ಪರಿಶೋಧ ಹಾಗೂ ಪ್ರತಿರೋಧ ಪ್ರವಾಸಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಚಾಲನೆ: ಸಿಪಿಐ(ಎಂ) ಬೆಂಬಲ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ 'SIR ವಿರೋಧಿ ಕರ್ನಾಟಕ', ನಾಗರಿಕ ಮತಕಾವಲು ಸಮಿತಿ, ಜಾತ್ಯತೀತ ಪಕ್ಷಗಳು ಹಾಗೂ ವಿವಿಧ ನಾಗರಿಕ ಸಂಘಟನೆಗಳ...

ಪಶ್ಚಿಮ ಬಂಗಾಳ: ಸರ್ಕಾರದ ಜೊತೆ ಇರಬೇಕಾದರೆ ಎಲೆಕ್ಷನ್ ‘ಟೆಸ್ಟ್’ನಲ್ಲಿ ಗೆಲ್ಲಿ, ಮುಸ್ಲಿಮರಿಗೆ ಸುವೇಂದು ಅಧಿಕಾರಿ ಎಚ್ಚರಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಮುಂಬರುವ ಉಪಚುನಾವಣೆಯನ್ನು ಅಲ್ಪಸಂಖ್ಯಾತರಿಗೆ ಒಂದು ‘ಪರೀಕ್ಷೆ’ ಎಂದು ಕರೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ವಿವಾದ ಹಾಗೂ ಕಳವಳಕ್ಕೆ ಕಾರಣವಾಗಿದೆ....

ಮಹಿಳೆಯರ ಮೇಲಿನ ದಾಳಿಗಳು ಮತ್ತಷ್ಟು ಹಿಂಸಾತ್ಮಕವಾಗುತ್ತಿವೆ: ಪ್ರಿಯಾಂಕಾ ಗಾಂಧಿ

ದೆಹಲಿ ಮತ್ತು ಬಿಹಾರದಲ್ಲಿ ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳವಳ ವ್ಯಕ್ತಪಡಿಸಿದ್ದು, ಇಂತಹ ದಾಳಿಗಳು ಹೆಚ್ಚಾಗುತ್ತಿರುವುದು ಮಾತ್ರವಲ್ಲದೆ ಇನ್ನಷ್ಟು ಹಿಂಸಾತ್ಮಕವಾಗುತ್ತಿವೆ...

ಜಮುಯಿ ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣ: ಎನ್‌ಕೌಂಟರ್ ಬಳಿಕ ಪ್ರಮುಖ ಆರೋಪಿ ನಂದನ್ ಯಾದವ್ ಬಂಧನ; 7 ಮಂದಿಯಲ್ಲಿ 5 ಮಂದಿ ವಶಕ್ಕೆ

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್‌ ತರಗತಿಯಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಬಾಲಕಿ ಮತ್ತು ಬಾಲಕನನ್ನು ತಡೆದು ಹಲ್ಲೆ ಮಾಡಿ, ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ....

ಬಿಹಾರ|ಸಭ್ಯ ರೀತಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಮಾಡಿ: ಬಿಜೆಪಿ ಸಚಿವೆ ಶ್ರೇಯಸಿ ಸಿಂಗ್

ಬಿಹಾರದ ಜಮುಯಿ ಜಿಲ್ಲೆಯಲ್ಲಿ ಯುವಕ ಮತ್ತು ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಘಟನೆಯನ್ನು ಖಂಡಿಸುವ ಭರದಲ್ಲಿ, ‘ಅನೈತಿಕ ಪೊಲೀಸ್‌ಗಿರಿಯನ್ನು ಹೆಚ್ಚು ಸಭ್ಯ ಮತ್ತು ಘನತೆಯುತ ರೀತಿಯಲ್ಲಿ ಮಾಡಬಹುದು’ ಎಂದು ಬಿಹಾರದ ಬಿಜೆಪಿ...