Homeಕರ್ನಾಟಕನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

ನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

- Advertisement -
- Advertisement -

ಕಳೆದ ಎರಡು ದಿನಗಳ ಹಿಂದಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದಿಶ್ ಶೆಟ್ಟರ್ ಅವರು, ”ತಮಗೆ ಟಿಕೆಟ್ ಸಿಗದಿರಲು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್ ಅವರೇ ನೇರ ಕಾರಣ” ಎಂದು ಬಹಿರಂಗವಾಗಿಯೇ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ”ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ಮಾಡಿದರು. ಅವರ ಟೀಂ ಕೂಡ ನನ್ನ ವಿರುದ್ಧ ತಂತ್ರಗಾರಿಕೆ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿತ್ತು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಟಿಕೆಟ್ ಘೋಷಣೆ ಆಗುವವರೆಗೆ ಸುಮ್ಮನಿದ್ದೆ” ಎಂದು ಹೊಸ ಬಾಂಬ್ ಸಿಡಿಸಿದರು.

”ಮೊದಲ ಪಟ್ಟಿ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಘೋಷಣೆಯಾಗಲಿಲ್ಲ. ಚಿಕ್ಕ ಮಕ್ಕಳಿಗೆ ಹೇಳುವ ರೀತಿಯಲ್ಲಿ ಫೋನ್ ಮಾಡಿ ನಿಮಗೆ ಟಿಕೆಟ್ ಇಲ್ಲ ಎಂದು ಕೊನೆಗೆ ಹೇಳಿಬಿಟ್ಟರು. ನಾನು ಬಂಡಾಯವೆದ್ದಾಗ ಆ ಮೇಲೆ ಆ ಹುದ್ದೆ ನೀಡುತ್ತೇವೆ, ಈ ಹುದ್ದೆ ನೀಡುತ್ತೇವೆ. ನಿಮಗೆ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಭವಿಷ್ಯವಿದೆ ಉತ್ತಮ ಸ್ಥಾನಮಾನ ನೀಡಲಾಗುವುದು ಎಂದೆಲ್ಲ ಹೇಳಿದರು. ಅದನ್ನೇ ಆರಂಭದಲ್ಲಿಯೇ ಹೇಳಿ ಗೌರವಯುತವಾಗಿ ನನ್ನನ್ನು ಚುನಾವಣಾ ರಾಜಕೀಯದಿಂದ ಕಳುಹಿಸಿಕೊಡಬಹುದಾಗಿತ್ತಲ್ಲವೇ?” ಎಂದು ಜಗದೀಶ್ ಶೆಟ್ಟರ್ ಪ್ರಶ್ನಿಸಿದರು.

”ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಅಂದಿದ್ದೆ‌” ಎಂದು ಕಾಂಗ್ರೆಸ್​ ಮುಖಂಡ ಜಗದೀಶ್​ ಶೆಟ್ಟರ್​ ಹೇಳಿದ್ದಾರೆ.

”ನನಗೆ ಅವಕಾಶ ಸಿಕ್ಕಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ನಾನು 2 ವರ್ಷಗಳ ಕಾಲ ಕೇವಲ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ನಾನು ಮಂತ್ರಿ ಆಗಲಿಲ್ಲ. ಪಕ್ಷದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಿದ್ದೇನೆ. ಪಕ್ಷಕ್ಕೆ ಗಟ್ಟಿ ನಿಲವು ಮಾಡಿಕೊಡಲು ನನ್ನ ಸೇವೆ ಇದೆ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ದಿವಂಗತ ಮಾಜಿ ಸಂಸದ ಅನಂತ ಕುಮಾರ್ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಕಟ್ಟಿದ್ದನೆ” ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ತಮ್ಮ ಹಳೆ ದಿನಗಳನ್ನು ಮೆಲಕು ಹಾಕಿದರು.

ಇದನ್ನೂ ಓದಿ: ನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು…

”ಕೋರ್​ ಕಮಿಟಿ ಸಭೆಯಲ್ಲಿ ನನ್ನ ಹೆಸರು ಜೊತೆ ಒಟ್ಟು ಮೂವರ ಆಕಾಂಕ್ಷಿಗಳ ಹೆಸರುಗಳನ್ನು ಕಳುಹಿಸಲಾಗಿತ್ತು. ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು. ಆದರೆ, ಕೊನೆಗೆ ಟಿಕೆಟ್​ ಕೈತಪ್ಪುವುದಕ್ಕೆ ಸಂತೋಷ್ ಕಾರಣ. ರಾಮದಾಸ್ ಕ್ಷೇತ್ರಕ್ಕೂ ನಾನು ಹೋಗಿದ್ದೆ. ರಾಮದಾಸ್ ನಿಂತರೆ ಗೆಲ್ಲುತ್ತಾರೆ. ರಾಮದಾಸ್ ಸಂತೋಷ್ ಆಪ್ತ ಅಲ್ಲ. ಶ್ರೀವತ್ಸ ಸಂತೋಷ್ ಅವರ ಆಪ್ತ, ಹಾಗಾಗಿ ರಾಮದಾಸ್​ಗೆ ಟಿಕೆಟ್​ ಕೈತಪ್ಪಿದ್ದು, ಶ್ರೀವತ್ಸಗೆ ಟಿಕೆಟ್ ಸಿಕ್ಕಿದೆ. ರಾಮದಾಸ್ ಬಂಡಾಯ ಎದ್ದರೆ ಗೆಲ್ಲುವುದಕ್ಕೆ ಆಗಲ್ಲ. ಬಿಎಲ್ ಸಂತೋಷ್ ಕೇರಳದಲ್ಲಿ ಇನ್ ಚಾರ್ಜ್ ಮಾಡಿದರು, ಆದರೆ ಒಂದು ಸೀಟ್ ಬರಲಿಲ್ಲ. ತಮಿಳುನಾಡಿಲ್ಲಿ ಎರಡು ಮೂರು ಸೀಟ್ ಬಂತು. ಇವತ್ತು ಕರ್ನಾಟಕದಲ್ಲಿ ಕಾರಬಾರು ಮಾಡುತ್ತಿದ್ದಾರೆ” ಎಂದು ಸಂತೋಷ್​ ವಿರುದ್ಧ ಸಾಲು ಸಾಲು ಗಂಭೀರ ಆರೋಪಗಳನ್ನು ಮಾಡಿದರು.

”ಅವರು ಯಾಕೆ ಗ್ರೌಂಡ್ ರಿಪೋರ್ಟ್ ಕೊಡಲಿಲ್ಲ. ಅರುಣ್ ಸಿಂಗ್ ಧರ್ಮೆಂದ್ರ ಪ್ರದಾನ ನಮ್ಮ ಕರೆದು ಮಾತಾಡಿಲ್ಲ. ಕೆಲವರ ಕಪಿ ಮುಷ್ಟಿಯಲ್ಲಿ ಬಿಜೆಪಿ ಇದೆ. ಹೀಗಾಗಿ ಅನಾಹುತ ಆಗುತ್ತಿದೆ. ಒಂದು ಚುನಾವಣೆ ಗೆಲ್ಲಲು ಆಗದವರನ್ನು ರಾಜ್ಯ ಚುನಾವಣೆ ಸಹ ಉಸ್ತುವಾರಿ. ಅವರಿಗೆ ಒಂದು ಕ್ಷೇತ್ರದ ಮಾಹಿತಿ ಇಲ್ಲ. ಕೋರ್ ಕಮಿಟಿಯಲ್ಲಿ ನಾವು ಅವರ ಹಿಂದೆ ಕೂಡಬೇಕು. ನಮ್ಮ ಕೆಳಗೆ ಕೆಲಸ ಮಾಡಿದ ಆಫೀಸರ್ ಹಿಂದೆ ಕೂಡಬೇಕು. ನಾನು ಸದಾನಂದಗೌಡ ಹಿಂದೆ ಕೂತಿದ್ದೆವು” ಎಂದು ಅಣ್ಣಾಮಲೈ ಅವರನ್ನು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯ್ನನಾಗಿ ಮಾಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

”ಬಿಜೆಪಿಯೊಳಗಿನ ವೇದನೆಯನ್ನುಸಹಿಸಕೊಂಡರೆ ಜಗದೀಶ್​ ಶೆಟ್ಟರ್ ಅವರಿಗೆ ಮಾನ ಮರ್ಯಾದೆ ಇಲ್ಲ ಅಂತ ಕಾಣುತ್ತಾರೆ. ನಾನು 70 ವರ್ಷ ಆದ ಮೇಲೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇದು ನನ್ನ ಕೊನೆ ಚುನಾವಣೆ…” ಎನ್ನುತ್ತಾ ಕಾಂಗ್ರೆಸ್​ ನಾಯಕ ಜಗದೀಶ್​ ಶೆಟ್ಟರ್​​ ಭಾವುಕಾರದರು.

”ಕಾಂಗ್ರೆಸ್ ನಾಯಕರಿಗೆ ನಾನು ಗೌರವದಿಂದ ನಡೆಸಿಕೊಳ್ಳಿ ಎಂದು ಹೇಳಿದ್ದೇನೆ, ಪಕ್ಷ ನಶಿಸಿ ಹೋಗುತ್ತಿದೆ. ಪಕ್ಷವನ್ನು ಮುಗಿಸಲು ಕಾಯುತ್ತಿದ್ದಾರೆ. ಬಿಎಲ್ ಸಂತೋಷ್ ಜೊತೆ ಒಂದೊಂದೆ ಹೆಸರು ಬರತ್ತೆ. ಬಿಎಲ್​ ಸಂತೋಷ್ ಅವರಿಗೆ ಒಂದೇ ಹೇಳೋದು. ನಿಮ್ಮ ಮಾನಸ ಪುತ್ರನಿಗೆ ತೋರಿಸೋ ಪ್ರೀತಿ ನನಗೆ ಒಂದು ಪರ್ಸೆಂಟ್ ತೋರಸಬೇಕಿತ್ತು” ಎಂದು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...