Homeಕರ್ನಾಟಕಲಿಂಗಾಯತರ ಕುರಿತು ಬಿಎಲ್‌ ಸಂತೋಷ್ ಹೇಳಿಕೆ ಸುಳ್ಳು: ಬಿಜೆಪಿ ಸ್ಪಷ್ಟನೆ

ಲಿಂಗಾಯತರ ಕುರಿತು ಬಿಎಲ್‌ ಸಂತೋಷ್ ಹೇಳಿಕೆ ಸುಳ್ಳು: ಬಿಜೆಪಿ ಸ್ಪಷ್ಟನೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯು ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿದೆ ಎನ್ನುವ ಚರ್ಚೆ ಹುಟ್ಟುಕೊಂಡಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್, ‘ನಾವು ಹಿಂದುತ್ವದಲ್ಲಿ ಮುಂದುವರೆಯುತ್ತೇವೆ ಲಿಂಗಾಯತರ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ ಎನ್ನಲಾದ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿತ್ತು ಇದನ್ನು ನಿರಾಕರಿಸಿರುವ ಬಿಜೆಪಿ ಪತ್ರಿಕಾಪ್ರಕಟಣೆ ಹೊರಡಿಸಿದೆ.

ರಾಜ್ಯದಲ್ಲಿ ಪ್ರಭಾವಿ ಲಿಂಗಾಯತ ನಾಯಕರಾದ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್, ಅವಧಿಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿತು. ಅದಾದನಂತೆ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರರ ಬಗ್ಗೆ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇತ್ತಿಚೆಗೆ ಪಂಚಮಸಾಲಿ ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಿಲ್ಲ. ಅವರು ಬಿಜೆಪಿಯನ್ನೇ ತೊರೆದು ಕಾಂಗ್ರೆಸ್ ಸೇರಿಕೊಂಡರು. ಈ ಎಲ್ಲ ಬೆಳವಣಿಗೆಯ ಮಧ್ಯೆ ಇದೀಗ ಬಿಎಲ್ ಸಂತೋಷ್ ಅವರು ಲಿಂಗಾಯತ ನಾಯಕರು ಹಾಗೂ ಆ ಸಮುದಾಯದವರ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂದು ಹೇಳಿದ್ದಾರೆ ಎನ್ನಲಾದ ಸುದ್ದಿಯ ಪೇಪರ್ ಕಟಿಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ಸತ್ಯವಾದ ಸುದ್ದಿಯೋ ಅಥವಾ ಸುಳ್ಳೋ ಎನ್ನುವ ಬಗ್ಗೆ ಗೊಂದಲಗಳಿದ್ದು, ಈ ಸುದ್ದಿಯ ಮೂಲ ಯಾವುದು ಎಂಬ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನ ಮಾಡುತ್ತಿದ್ದೇವೆ.

ಈ ಬಗ್ಗೆ ಬಿಜೆಪಿ ನಿರಾಕರಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸುಳ್ಳು ಸುದ್ದಿ ಪೋಸ್ಟ್ ಮಾಡಲಾಗಿದೆ. ಈ ರೀತಿ ಹೇಳಿಕೆಯನ್ನು ಸಂತೋಷ್‌ ಅವರು ಎಂದಿಗೂ ಹೇಳಿರುವುದಿಲ್ಲ ಎಂದು ಅಧಿಕೃತವಾಗಿ ಧೃಢೀಕರಿಸಿದ್ದಾರೆ. ಅಪಪ್ರಚಾರಕ್ಕಾಗಿ ಸುಳ್ಳು ಸುದ್ದಿ ಹರಿಬಿಡಲಾಗಿದೆ ಎಂದು ಸ್ಪಷ್ಟನೆ ನೀಡಿದೆ.

ವೈರಲ್ ಆದ ಸುದ್ದಿ ಪತ್ರಿಕೆಯಲ್ಲಿ ಏನಿದೆ?

ಬಿಜೆಪಿ ನಂಬಿಕ ಇಟ್ಟಿರುವುದು, ಹಿಂದುತ್ವದ ಆಧಾರದ ಮೇಲೆ ಹೊರತು ಯಾವುದೊ ನಾಯಕನ ಜಾತಿಯ ಮೇಲಲ್ಲ. ಕಾರ್ಯಕರ್ತರು ಹಿಂದುತ್ವದ ಮೇಲೆ ನಂಬಿಕೆ ಇಡಬೇಕೆ ಹೊರತು ಯಾವುದೋ ವ್ಯಕ್ತಿಯ ಮೇಲಲ್ಲ. ಎಂದು ಬಿಜೆಪಿಯ ಸಂಘಟನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ರಾಜ್ಯ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು..

ರಾಜ್ಯದಲ್ಲಿ ಲಿಂಗಾಯತರ ಮತಗಳು ಕೈ ತಪ್ಪಿಹೋದರೆ ಪಕ್ಷಕ್ಕೆ ಭಾರೀ ಹೊಡತ ಎಂದು ಸಭೆಯಲ್ಲಿ ದನಿ ಎತ್ತಿದ ಕಾರ್ಯಕರ್ತರ ಮಾತಿಗೆ ಸಿಡಿಮಿಡಿಗೊಂಡು ಉತ್ತರಿಸಿ ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲ ಎಂದು ಹೇಳಿದರು.

ನಮಗೆ ಲಿಂಗಾಯತರ ಅಗತ್ಯವಿಲ್ಲ ಎಂದು ಅನೇಕ ಬಾರಿ ಹೇಳಿದ್ದೇನೆ. ಅವರ ಈಗಲೂ ಅದನ್ನೇ ಹೇಳುತ್ತೇನೆ. ಇಲ್ಲಿ ಯಾರೂ ಸಹ ಚಿರಂಜೀವಿಗಳಲ್ಲ. ಎಂದು ಪರೋಕ್ಷವಾಗಿ ಬಿ.ಎಸ್‌.ವೈ ಅವರ ಹೇಳದೆ ವ್ಯಂಗ್ಯವಾಡಿದರು.

ಬಿಜೆಪಿ ಎಂದಿಗೂ ಓಲೈಕೆ ರಾಜಕಾರಣ ಮಾಡಿಲ್ಲ, ಲಿಂಗಾಯತರನ್ನು ಇನ್ನೆಷ್ಟು ದಿನ ಉತ್ತರ ಓಲೈಕೆ ಮಾಡಬೇಕು.

ಅವರ ಇಬ್ಬರು ಮಕ್ಕಳನ್ನು ಬೆಳೆಸಿದರೆ ಒಂದೇ ಸಮುದಾಯ ಬೆಳೆಯುತ್ತದೆ ಹೊರತು ಪಕ್ಷ ಬೆಳೆಯುವುದಿಲ್ಲ ಎಂದು ಕಾರ್ಯಕರ್ತರ ಮೇಲೆ ಕಿಡಿ ಕಾರಿದರು.

ಈ ಮಾತಿಗೆ ಅಸಮಾಧಾನ ವ್ಯಕ್ತಪಡಿಸಿದ ಹುಬ್ಬಳ್ಳಿ, ಧಾರವಾಡ ಮೈಸೂರು, ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಕಾರ್ಯಕರ್ತರು ಸಭೆಯಿಂದ ಹೊರ ನಡೆದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...