Homeಮುಖಪುಟಮೋದಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸದಿದ್ದರೆ ದೇಶವು 'ಕರಾಳ ದಿನ'ಗಳನ್ನು ನೋಡಲಿದೆ: ಉದ್ಧವ್ ಠಾಕ್ರೆ

ಮೋದಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸದಿದ್ದರೆ ದೇಶವು ‘ಕರಾಳ ದಿನ’ಗಳನ್ನು ನೋಡಲಿದೆ: ಉದ್ಧವ್ ಠಾಕ್ರೆ

- Advertisement -
- Advertisement -

ಮೋದಿ ಸರ್ಕಾರವನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸದಿದ್ದರೆ ದೇಶವು “ಕರಾಳ ದಿನಗಳನ್ನು” ನೋಡಲಿದೆ ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಶಿವಸೇನಾ ಪಕ್ಷದ ಮುಖವಾಣಿ ‘ಸಾಮ್ನಾ’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಭಾರತದ ಜನರು ತಮ್ಮ ನಾಯಕರ ಭವಿಷ್ಯವನ್ನು ನಿರ್ಧರಿಸುತ್ತಾರೆ. ಪ್ರಸ್ತುತ ಸರ್ಕಾರವನ್ನು ಸೋಲಿಸಿದರೆ ದೇಶದ ಭವಿಷ್ಯವು ಶಾಂತಿಯುತವಾಗಿರುತ್ತದೆ ಮತ್ತು ಪ್ರಜಾಪ್ರಭುತ್ವವು ಬಲವಾಗುತ್ತದೆ. ಇಲ್ಲದಿದ್ದರೆ ದೇಶವು ಕರಾಳ ದಿನಗಳನ್ನು ನೋಡಲಿದೆ. ಅಚ್ಛೇ ದಿನ್ ಎಂದಿಗೂ ಬರಲಿಲ್ಲ, ಆದರೆ ಕರಾಳ ದಿನಗಳು ಬರುತ್ತವೆ ಎಂದು ಹೇಳಿದ್ದಾರೆ.

ಭ್ರಷ್ಟರ ರಕ್ಷಣೆ ಮೋದಿ ಗ್ಯಾರಂಟಿ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಆರೋಪಿಸಿದ್ದಾರೆ. ಎಲ್ಲಾ ಧೂಳು ಮತ್ತು ಮಣ್ಣನ್ನು ಹೀರುವ ವ್ಯಾಕ್ಯೂಮ್ ಕ್ಲೀನರ್‌ನಂತೆ ಬಿಜೆಪಿ ಎಲ್ಲಾ ಭ್ರಷ್ಟರನ್ನು ಸೇರಿಸುತ್ತಿದೆ. ಕಾಂಗ್ರೆಸ್, ಶಿವಸೇನೆ ಭ್ರಷ್ಟರಿಂದ ಮುಕ್ತವಾಗಿದೆ ಎಂದು ಹೇಳಿದ್ದಾರೆ. ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿಗೆ ಹೇಳಿಕೊಳ್ಳುವ ಸಾಧನೆ ಏನೂ ಇಲ್ಲ, ಆದ್ದರಿಂದ ಚುನಾವಣಾ ಭಾಷಣದಲ್ಲಿ ಬಿಜೆಪಿ ರಾಮನ ಹೆಸರು ಹೇಳುತ್ತಿದೆ ಎಂದು ಹೇಳಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಗಳ ಬಗ್ಗೆ ಕೇಳಿದ ಪ್ರಶ್ನೆಗೆ ಠಾಕ್ರೆ, ಪ್ರಧಾನಿ ತಮ್ಮ ಭಾಷಣಗಳಲ್ಲಿ ಪಾಕಿಸ್ತಾನ ಬಗ್ಗೆ ಮಾತನಾಡುತ್ತಾರೆ, ಆದರೆ ಪ್ರತಿಪಕ್ಷಗಳು ಭಾರತದ ಬಗ್ಗೆ ಮಾತನಾಡುತ್ತವೆ ಎಂದು ಹೇಳಿದ್ದಾರೆ.

ಎನ್‌ಸಿಪಿ(ಎಸ್‌ಪಿ) ನಾಯಕ ಶರದ್ ಪವಾರ್ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಟೀಕೆಗಳನ್ನು ಸಹಿಸುವುದಿಲ್ಲ ಆದರೆ ಇತರರ ವಿರುದ್ಧ ಏನೇನೋ ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚಣೆ ವೇಳೆ ಮಾತನಾಡಿದ್ದ ಶರದ್ ಪವಾರ್, ಮೋದಿ ಅವರು ಮುಸ್ಲಿಮರನ್ನು ಬಹಿರಂಗವಾಗಿ ಗುರಿಯಾಗಿಸಿದ್ದಾರೆ, ಆದರೆ ಅವರು ಪ್ರಧಾನಿಯಾಗಿದ್ದರೂ ಅವರು ಎಲ್ಲಾ ಜಾತಿಗಳು ಮತ್ತು ಧರ್ಮಗಳ ನಾಗರಿಕರ ಪರವಾಗಿ ನಿಲ್ಲಬೇಕು ಎಂದು ಹೇಳಿದ್ದರು.

ಮೋದಿ ಮಹಿಳಾ ವಿರೋಧಿ ಮತ್ತು ರೈತ ವಿರೋಧಿಯಾಗಿದ್ದಾರೆ. ಕಳೆದ 10 ವರ್ಷಗಳಲ್ಲಿ ರೈತರ ಕಲ್ಯಾಣಕ್ಕಾಗಿ ಮೋದಿ ಸರ್ಕಾರ ಏನನ್ನೂ ಮಾಡಿಲ್ಲ, ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆಯೂ ಅವರ ಸರ್ಕಾರ ಕಣ್ಣು ಮುಚ್ಚಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಹೇಮಂತ್ ಸೋರೆನ್ ಅವರ ಬಂಧನವು ಅಧಿಕಾರದ ದುರುಪಯೋಗ ಮತ್ತು ದುರಹಂಕಾರಕ್ಕೆ ಉದಾಹರಣೆಯಾಗಿದೆ ಎಂದು ಶರದ್‌ ಪವಾರ್‌ ಹೇಳಿದ್ದಾರೆ.

ಇದನ್ನು ಓದಿ; ಮೋದಿ ವಿರುದ್ಧ ಸ್ಪರ್ಧೆ: ವಾರಣಾಸಿಯಲ್ಲಿ ಅಧಿಕಾರಿಗಳು ನಾಮಪತ್ರದ ಅರ್ಜಿಯೇ ಕೊಡುತ್ತಿಲ್ಲ; ಶ್ಯಾಮ್ ರಂಗೀಲಾ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...