Homeಕರ್ನಾಟಕಬ್ಲಾಕ್ ಫಂಗಸ್: ಔಷಧಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರದ ಮೀನಾಮೇಷ

ಬ್ಲಾಕ್ ಫಂಗಸ್: ಔಷಧಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರದ ಮೀನಾಮೇಷ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ನಡುವೇ ಹೆಚ್ಚು ಆತಂಕಕ್ಕೆ ಕಾರಣವಾಗಿರುವ ಬ್ಲಾಕ್ ಫಂಗಸ್ ಪ್ರಕರಣಗಳು ವರದಿಯಾಗುತ್ತಿವೆ. ಆದರೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿಲ್ಲ, ಪ್ರಕರಣಗಳ ಬಗ್ಗೆ ವದಂತಿ ಹಬ್ಬಿಸುತ್ತಿದ್ದಾರೆ ಎಂದು ಹೇಳುತ್ತಾ ರಾಜ್ಯ ಸರ್ಕಾರ ಬೇಜವಾಬ್ದಾರಿ ಪ್ರದರ್ಶಿಸುತ್ತಿದೆ.

ಮಹಾರಾಷ್ಟ್ರ, ಗುಜರಾತ್, ತೆಲಂಗಾಣ ರಾಜ್ಯಗಳು ಬ್ಲಾಕ್ ಫಂಗಸ್‌ ಸೋಂಕಿನ ಆಂಪೋಟೆರಿಸಿನ್ ಬಿ ಔಷಧಿಯನ್ನು ನೀಡಬೇಕು ಎಂದು  ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಡ ಹೇರುತ್ತಿವೆ. ತೆಲಂಗಾಣ ಸರ್ಕಾರ ಔಷಧವನ್ನು ರಾಜ್ಯ ಸರ್ಕಾರದ ತಜ್ಞರ ಸಮಿತಿಯ ಶಿಪಾರಸ್ಸು ಇಲ್ಲದೇ ಆಸ್ಪತ್ರೆಗಳಿಗೆ ನೀಡಬಾರದು ಎಂದು ಸೂಚಿಸಿ ಪತ್ರ ಬರೆದಿದೆ.

ಇತ್ತ ರಾಜ್ಯ ಸರ್ಕಾರ ರಾಜ್ಯದಲ್ಲಿ ಪ್ರಕರಣಗಳು ಕಡಿಮೆ ಇವೆ ಎಂದರೆ, ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ರಾಜ್ಯದಲ್ಲಿ ಬ್ಲಾಕ್ ಫಂಗಸ್‌ನಿಂದ ಯಾರು ಸಾವನ್ನಪ್ಪಿಲ್ಲ, ಸಾವುಗಳ ಕುರಿತು ಮಾಹಿತಿಯಿಲ್ಲ ಎಂದು  ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದ 97 ಜನರಲ್ಲಿ ಬ್ಲಾಕ್ ಫಂಗಸ್ ಪತ್ತೆ, ನಾಲ್ವರು ಬಲಿ- ಸಚಿವ ಸುಧಾಕರ್‌

ಮೇ 17 ರಂದು ಸುದ್ದಿಗೋಷ್ಠಿ ನಡೆಸಿದ್ದ ಆರೋಗ್ಯ ಸಚಿವ ಸುಧಾಕರ್‌, ಇದುವರೆಗೆ 97 ಮಂದಿಯಲ್ಲಿ ಸೋಂಕು ಕಂಡು ಬಂದಿದೆ ಮತ್ತು ನಾಲ್ವರು ಮೃತಪಟ್ಟಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬ್ಲಾಕ್​​ ಫಂಗಸ್​ ಕಾಣಿಸಿಕೊಂಡಿದೆ. ಕಪ್ಪು ಶಿಲೀಂದ್ರ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ ನಾಲ್ವರಲ್ಲಿ ಮೂರು ಬೆಂಗಳೂರಿನವರಾಗಿದ್ದಾರೆ, ಒಬ್ಬರು ಕೋಲಾರ ಜಿಲ್ಲೆಯವರು ಎಂದು ಮಾಹಿತಿ ನೀಡಿದ್ದರು.

ಆದರೆ ಈಗ, ರಾಜ್ಯದ ಕೆಲವೆಡೆ ಕಾಣಿಸಿಕೊಂಡಿರುವ ಬ್ಲಾಕ್‌ ಫಂಗಸ್‌ ರೋಗದ ಬಗ್ಗೆ ಕೆಲವರು ವದಂತಿಗಳನ್ನು ಹರಡಿಸುತ್ತಿದ್ದು ಈ ಬಗ್ಗೆ ಜನತೆ ಭಯ ಭೀತರಾಗುವ ಅಗತ್ಯವಿಲ್ಲ ಎಂದಿದ್ದಾರೆ.

“ಫಂಗಸ್‌ ಚಿಕಿತ್ಸೆಗೆ ಸಂಬಂಧಿಸಿದ ಔಷಧದ ಸರಬರಾಜು ಕಡಿಮೆಯಿದೆ. ಹೀಗಾಗಿ ಹೆಚ್ಚಿನ ಪ್ರಮಾಣದಲ್ಲಿ ರಾಜ್ಯಕ್ಕೆ ಕಳುಹಿಸಿಕೊಡುವಂತೆ ಕೇಂದ್ರ ಸಚಿವ ಸದಾನಂದಗೌಡರಿಗೆ ಮನವಿ ಮಾಡಲಾಗಿದೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದನೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಔಷಧ ಲಭ್ಯವಾಗಲಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳ ಮತ್ತು ಕೆಲವು ಮುಖಂಡರ ನಡೆ ಕೇಡುಗಾಲಕ್ಕೆ ಕುದುರೆ ಮೊಟ್ಟೆ ಇಟ್ಟಂತಿದೆ

ಬ್ಲಾಕ್ ಫಂಗಸ್‌ ಸೋಂಕಿನ ಔಷಧಕ್ಕೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಬದಲು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಕೇಂದ್ರದ ಪರವೇ ಬ್ಯಾಟ್ ಬಿಸಿದ್ದಾರೆ.

“ಕಪ್ಪು ಶಿಲೀಂಧ್ರ ಪ್ರಕರಣಗಳ ಸಂಖ್ಯೆಯನ್ನು ಆಧರಿಸಿ, ಬೇಡಿಕೆಯನ್ನು ಪರಿಹರಿಸಲು ನಾವು ಆಂಫೊಟೆರಿಸಿನ್-ಬಿ ಔಷಧವನ್ನು ಸಂಗ್ರಹಿಸಲು ಪ್ರಯತ್ನಿಸುತ್ತಿದ್ದೇವೆ. ರಾಜ್ಯದ ಪ್ರಕರಣಗಳ ಸಂಖ್ಯೆಯನ್ನು ಆಧರಿಸಿ ಕೇಂದ್ರದಿಂದ ಔಷಧ ಹಂಚಿಕೆ ಮಾಡಲಾಗುವುದು” ಎಂದಿದ್ದಾರೆ.


ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟಕ್ಕೆ ಮೊಬೈಲ್ ಆ್ಯಪ್! ನಿರ್ಗತಿಕರು ಆಹಾರ ವಂಚಿತರಾಗಬೇಕೆ ಎಂದು ಕಾಂಗ್ರೆಸ್ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...