Homeಮುಖಪುಟಬ್ರಾಹ್ಮಣರ ವಿರುದ್ಧ ಭಾಗವತ್ ಅವಹೇಳನ ಆರೋಪ; ವಿಎಚ್‌ಪಿ ಮುಖಂಡನ ಮೇಲೆ ಗುಂಡು ಹಾರಿಸಿದ ಬಿಜೆಪಿ ಸದಸ್ಯ

ಬ್ರಾಹ್ಮಣರ ವಿರುದ್ಧ ಭಾಗವತ್ ಅವಹೇಳನ ಆರೋಪ; ವಿಎಚ್‌ಪಿ ಮುಖಂಡನ ಮೇಲೆ ಗುಂಡು ಹಾರಿಸಿದ ಬಿಜೆಪಿ ಸದಸ್ಯ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ವಿಚಾರಕ್ಕೆ ವಾಗ್ವಾದ ನಡೆದಿದ್ದು, ಈ ವೇಳೆ ವಿಶ್ವ ಹಿಂದೂ ಪರಿಷತ್ ನಾಯಕನ ಮೇಲೆ ಬಿಜೆಪಿ ಸದಸ್ಯನೊಬ್ಬ ಗುಂಡು ಹಾರಿಸಿರುವ ಘಟನೆ ಶನಿವಾರ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆರೋಪಿ ರಜತ್ ಶರ್ಮಾ ಭಾರತೀಯ ಜನತಾ ಪಕ್ಷದ ಸದಸ್ಯ ಎಂದು ವರದಿಯಾಗಿದೆ. ಫೆಬ್ರವರಿ 8ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಶರ್ಮಾ ಅವರು ಭಾಗವಹಿಸಿದ್ದರು ಈ ವೇಳೆ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು.

ಶರ್ಮಾ ಅವರು RSS ನಾಯಕರ ವಿರುದ್ಧ ಮಾತನಾಡಿದ್ದಾರೆ. ಹಾಗಾಗಿ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ವಿಎಚ್‌ಪಿ ಮುಖಂಡ ಸಂತೋಷ್ ಪಂಡಿತ್ ಒತ್ತಾಯಿಸಿದ್ದಾರೆ. ಈ ವಿಚಾರವಾಗಿ ಶನಿವಾರ ಸಂಜೆ ಪಂಡಿತ್ ಮತ್ತು ಶರ್ಮಾ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ವಿಎಚ್‌ಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ.

ಇದನ್ನೂ ಓದಿ: ಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ: RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೂರು ದಾಖಲು

”ಗುಂಡೇಟು ತಿಂದಿರುವ ವಿಎಚ್‌ಪಿ ಮುಖಂಡ ಸಂತೋಷ್ ಪಂಡಿತ್ ಅವರು, ತಮ್ಮ ಮೇಲೆ ಗುಂಡು ಹಾರಿಸಿದ್ದು ರಜತ್ ಶರ್ಮಾ ಎಂದು ಹೇಳಿಕೆಯನ್ನು ನೀಡಿದ್ದಾರೆ. ಶರ್ಮಾ ಮತ್ತು ಪಂಡಿತ್ ಇಬ್ಬರೂ ಒಬ್ಬರಿಗೊಬ್ಬರು ಪರಿಚಿತರಾಗಿದ್ದು, ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ಆ ಬಳಿಕ ಈ ಹಲ್ಲೆ ನಡೆದಿದೆ. ಶರ್ಮಾ ದೇಶಿ ನಿರ್ಮಿತ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದು, ಸದ್ಯ ಆತ ತಲೆಮರೆಸಿಕೊಂಡಿದ್ದಾನೆ” ಎಂದು ಹಿರಿಯ ಮೊರಾದಾಬಾದ್ ಪೊಲೀಸ್ ಅಧೀಕ್ಷಕ ಹೇಮರಾಜ್ ಮೀನಾ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಫೆಬ್ರವರಿ 5 ರಂದು ಮುಂಬಯಿಯಲ್ಲಿ ನಡೆದ ಸಂತ ರವಿದಾಸ್‌ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಅವರು, ”ಹಿಂದೂ ಸಮಾಜದಲ್ಲಿ ಚಾಲ್ತಿಯಲ್ಲಿರುವ ಈ ಕೆಟ್ಟ ಜಾತಿ ಪದ್ಧತಿಯನ್ನು ಸೃಷ್ಟಿಸಿದ್ದು ದೇವರಲ್ಲ, ಅದು ಪುರೋಹಿತ ವರ್ಗದವರು ಸೃಷ್ಟಿ ಮಾಡಿರುವಂತಹದ್ದು” ಎಂದು ದೂಷಿಸಿದ್ದರು. ಹಾಗಾಗಿ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾ ಸಂಘಟನೆಯು ಭಾಗವತ್ ವಿರುದ್ಧ ಪ್ರತಿಭಟನೆ ನಡೆಸಿದೆ ಎಂದು ನವಭಾರತ್ ಟೈಮ್ಸ್ ವರದಿ ಮಾಡಿದೆ.

”ಸತ್ಯವೇ ದೇವರು. ವ್ಯಕ್ತಿಯೊಬ್ಬರ ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇದ್ದರೂ ಎಲ್ಲರೂ ಒಂದೇ. ಅವರ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ಶಾಸ್ತ್ರಗಳ ಹೆಸರಿನಲ್ಲಿ ಕೆಲವು ಪಂಡಿತರು ಹೇಳುವುದು ಸುಳ್ಳು. ಜಾತಿ ಶ್ರೇಷ್ಠತೆಯ ವ್ಯಸನದಿಂದ ತಪ್ಪುದಾರಿಗೆ ನಮ್ಮನ್ನು ಎಳೆಯಲಾಗಿದೆ. ಈ ಭ್ರಮೆಯನ್ನು ತೊಲಗಿಸಬೇಕಿದೆ. ದೇಶದಲ್ಲಿ ಎಲ್ಲರಲ್ಲಿಯೂ ಆತ್ಮಸಾಕ್ಷಿ ಮತ್ತು ಜಾಗೃತಿ ಒಂದೇ ರೀತಿ ಇದೆ. ಆದರೆ ಅಭಿಪ್ರಾಯಗಳು ಮಾತ್ರ ಬೇರೆ ಬೇರೆ ಇರುತ್ತವೆ” ಎಂದು ಭಾಗವತ್ ಹೇಳಿದ್ದರು.

ಈ ಹೇಳಿಕೆಗಳು ಟೀಕೆಗೆ ಗುರಿಯಾಗುತ್ತಿದ್ದಂತೆ, ಆರ್‌ಎಸ್‌ಎಸ್‌ನ ಪ್ರಚಾರ ಮುಖ್ಯಸ್ಥ ಸುನಿಲ್ ಅಂಬೇಕರ್ ಫೆಬ್ರವರಿ 6 ರಂದು ಭಾಗವತ್ ಅವರ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಪಂಡಿತರು ಅವರು ವಿದ್ವಾನ್ ಅಥವಾ ಬುದ್ಧಿಜೀವಿಗಳನ್ನು ಅರ್ಥೈಸಿದ್ದಾರೆ ಎಂದು ತೇಪೆ ಹಚ್ಚುವ ಕೆಲಸಕ್ಕೆ ಮುಂದಾಗಿತ್ತುಬ ಆದರೆ,

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾ ಸಂಘಟನೆಯು ಮೋಹನ್ ಭಾಗವತ್ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...