Homeಮುಖಪುಟಬ್ರಾಹ್ಮಣರ ವಿರುದ್ಧ ಭಾಗವತ್ ಅವಹೇಳನ ಆರೋಪ; ವಿಎಚ್‌ಪಿ ಮುಖಂಡನ ಮೇಲೆ ಗುಂಡು ಹಾರಿಸಿದ ಬಿಜೆಪಿ ಸದಸ್ಯ

ಬ್ರಾಹ್ಮಣರ ವಿರುದ್ಧ ಭಾಗವತ್ ಅವಹೇಳನ ಆರೋಪ; ವಿಎಚ್‌ಪಿ ಮುಖಂಡನ ಮೇಲೆ ಗುಂಡು ಹಾರಿಸಿದ ಬಿಜೆಪಿ ಸದಸ್ಯ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ವಿಚಾರಕ್ಕೆ ವಾಗ್ವಾದ ನಡೆದಿದ್ದು, ಈ ವೇಳೆ ವಿಶ್ವ ಹಿಂದೂ ಪರಿಷತ್ ನಾಯಕನ ಮೇಲೆ ಬಿಜೆಪಿ ಸದಸ್ಯನೊಬ್ಬ ಗುಂಡು ಹಾರಿಸಿರುವ ಘಟನೆ ಶನಿವಾರ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆರೋಪಿ ರಜತ್ ಶರ್ಮಾ ಭಾರತೀಯ ಜನತಾ ಪಕ್ಷದ ಸದಸ್ಯ ಎಂದು ವರದಿಯಾಗಿದೆ. ಫೆಬ್ರವರಿ 8ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಶರ್ಮಾ ಅವರು ಭಾಗವಹಿಸಿದ್ದರು ಈ ವೇಳೆ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು.

ಶರ್ಮಾ ಅವರು RSS ನಾಯಕರ ವಿರುದ್ಧ ಮಾತನಾಡಿದ್ದಾರೆ. ಹಾಗಾಗಿ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ವಿಎಚ್‌ಪಿ ಮುಖಂಡ ಸಂತೋಷ್ ಪಂಡಿತ್ ಒತ್ತಾಯಿಸಿದ್ದಾರೆ. ಈ ವಿಚಾರವಾಗಿ ಶನಿವಾರ ಸಂಜೆ ಪಂಡಿತ್ ಮತ್ತು ಶರ್ಮಾ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ವಿಎಚ್‌ಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ.

ಇದನ್ನೂ ಓದಿ: ಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ: RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೂರು ದಾಖಲು

”ಗುಂಡೇಟು ತಿಂದಿರುವ ವಿಎಚ್‌ಪಿ ಮುಖಂಡ ಸಂತೋಷ್ ಪಂಡಿತ್ ಅವರು, ತಮ್ಮ ಮೇಲೆ ಗುಂಡು ಹಾರಿಸಿದ್ದು ರಜತ್ ಶರ್ಮಾ ಎಂದು ಹೇಳಿಕೆಯನ್ನು ನೀಡಿದ್ದಾರೆ. ಶರ್ಮಾ ಮತ್ತು ಪಂಡಿತ್ ಇಬ್ಬರೂ ಒಬ್ಬರಿಗೊಬ್ಬರು ಪರಿಚಿತರಾಗಿದ್ದು, ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ಆ ಬಳಿಕ ಈ ಹಲ್ಲೆ ನಡೆದಿದೆ. ಶರ್ಮಾ ದೇಶಿ ನಿರ್ಮಿತ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದು, ಸದ್ಯ ಆತ ತಲೆಮರೆಸಿಕೊಂಡಿದ್ದಾನೆ” ಎಂದು ಹಿರಿಯ ಮೊರಾದಾಬಾದ್ ಪೊಲೀಸ್ ಅಧೀಕ್ಷಕ ಹೇಮರಾಜ್ ಮೀನಾ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಫೆಬ್ರವರಿ 5 ರಂದು ಮುಂಬಯಿಯಲ್ಲಿ ನಡೆದ ಸಂತ ರವಿದಾಸ್‌ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಅವರು, ”ಹಿಂದೂ ಸಮಾಜದಲ್ಲಿ ಚಾಲ್ತಿಯಲ್ಲಿರುವ ಈ ಕೆಟ್ಟ ಜಾತಿ ಪದ್ಧತಿಯನ್ನು ಸೃಷ್ಟಿಸಿದ್ದು ದೇವರಲ್ಲ, ಅದು ಪುರೋಹಿತ ವರ್ಗದವರು ಸೃಷ್ಟಿ ಮಾಡಿರುವಂತಹದ್ದು” ಎಂದು ದೂಷಿಸಿದ್ದರು. ಹಾಗಾಗಿ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾ ಸಂಘಟನೆಯು ಭಾಗವತ್ ವಿರುದ್ಧ ಪ್ರತಿಭಟನೆ ನಡೆಸಿದೆ ಎಂದು ನವಭಾರತ್ ಟೈಮ್ಸ್ ವರದಿ ಮಾಡಿದೆ.

”ಸತ್ಯವೇ ದೇವರು. ವ್ಯಕ್ತಿಯೊಬ್ಬರ ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇದ್ದರೂ ಎಲ್ಲರೂ ಒಂದೇ. ಅವರ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ಶಾಸ್ತ್ರಗಳ ಹೆಸರಿನಲ್ಲಿ ಕೆಲವು ಪಂಡಿತರು ಹೇಳುವುದು ಸುಳ್ಳು. ಜಾತಿ ಶ್ರೇಷ್ಠತೆಯ ವ್ಯಸನದಿಂದ ತಪ್ಪುದಾರಿಗೆ ನಮ್ಮನ್ನು ಎಳೆಯಲಾಗಿದೆ. ಈ ಭ್ರಮೆಯನ್ನು ತೊಲಗಿಸಬೇಕಿದೆ. ದೇಶದಲ್ಲಿ ಎಲ್ಲರಲ್ಲಿಯೂ ಆತ್ಮಸಾಕ್ಷಿ ಮತ್ತು ಜಾಗೃತಿ ಒಂದೇ ರೀತಿ ಇದೆ. ಆದರೆ ಅಭಿಪ್ರಾಯಗಳು ಮಾತ್ರ ಬೇರೆ ಬೇರೆ ಇರುತ್ತವೆ” ಎಂದು ಭಾಗವತ್ ಹೇಳಿದ್ದರು.

ಈ ಹೇಳಿಕೆಗಳು ಟೀಕೆಗೆ ಗುರಿಯಾಗುತ್ತಿದ್ದಂತೆ, ಆರ್‌ಎಸ್‌ಎಸ್‌ನ ಪ್ರಚಾರ ಮುಖ್ಯಸ್ಥ ಸುನಿಲ್ ಅಂಬೇಕರ್ ಫೆಬ್ರವರಿ 6 ರಂದು ಭಾಗವತ್ ಅವರ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಪಂಡಿತರು ಅವರು ವಿದ್ವಾನ್ ಅಥವಾ ಬುದ್ಧಿಜೀವಿಗಳನ್ನು ಅರ್ಥೈಸಿದ್ದಾರೆ ಎಂದು ತೇಪೆ ಹಚ್ಚುವ ಕೆಲಸಕ್ಕೆ ಮುಂದಾಗಿತ್ತುಬ ಆದರೆ,

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾ ಸಂಘಟನೆಯು ಮೋಹನ್ ಭಾಗವತ್ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...