Homeಚಳವಳಿಮಂಡ್ಯದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ರಕ್ತದಾನ: ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಣೆ

ಮಂಡ್ಯದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ರಕ್ತದಾನ: ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಣೆ

- Advertisement -
- Advertisement -

ಮಂಡ್ಯದಲ್ಲಿ ಮಹಾನ್ ಮಾನವತಾವಾದಿ ಅಂಬೇಡ್ಕರ್ ರವರ 131ನೇ ಜಯಂತಿ ಅಂಗವಾಗಿ 75 ಹೆಚ್ಚು ಜನರು ರಕ್ತದಾನ ಮಾಡುವ ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಿಸಿದ್ದಾರೆ.

ಮಿಮ್ಸ್ ನ ಎಸ್ಸಿ ಎಸ್ಟಿ ನೌಕರರು, ರಕ್ತನಿಧಿ ಕೇಂದ್ರ ಮೀಮ್ಸ್, ನೆಲದನಿ ಬಳಗ ಮಂಗಲ ಮಂಡ್ಯ ಇವುರುಗಳ ಸಂಯುಕ್ತಾಶ್ರಯದಲ್ಲಿ ಮಂಡ್ಯದ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಭಾಂಗಣದಲ್ಲಿ ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನ ಆಚರಿಸಲಾಯಿತು.

ಮಿಮ್ಸ್ ನಿರ್ದೇಶಕ ಡಾ. ಹರೀಶ್‌ಕುಮಾರ್‌ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ “ಶಿಕ್ಷಣದಿಂದ ಮಾತ್ರವೇ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯ ಎಂದು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಪಾದಿಸಿದ್ದು ಇಂದು ಸತ್ಯವಾಗುತ್ತಿದೆ. ಹಾಗಾಗಿ ನಾವು ಶಿಕ್ಷಣಕ್ಕೆ ಹೆಚ್ಚು ಹೆಚ್ಚು ಒತ್ತುಕೊಡಬೇಕು. ಆ ಮೂಲಕ ಸಂವಿಧಾನ ಶಿಲ್ಪಿಯ ಆಶಯ ನೆರವೇರಿಸಲು ಮುಂದಾಗಬೇಕು” ಎಂದು ಕರೆ ನೀಡಿದರು.

ಸುಶಿಕ್ಷಿತರಾದಾಗ ಅಸಮಾನತೆ, ಅಸ್ಪೃಷ್ಯತೆ ಆಚರಣೆ ವಿರುದ್ಧ ಹೋರಾಡಲು ಮತ್ತು ಸಮಸಮಾಜ ನಿರ್ಮಾಣದತ್ತ ಮುನ್ನಡೆಯಬಹುದು. ಶಿಕ್ಷಣದಿಂದ ಮಾತ್ರ ಪ್ರಗತಿಯತ್ತ ಸಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು

ಮಿಮ್ಸ್‌ ಸಿಇಓ ವೆಂಟಕಲಕ್ಷ್ಮಿಯವರು ಮಾತನಾಡಿ, “ಮಹಿಳೆಯರು ಸಾಧಿಸಿದ ಪ್ರಗತಿಯ ಆಧಾರ ಮೇಲೆ ಆ ಸಮಾಜದ ಪ್ರಗತಿಯನ್ನು ಅಳೆಯುತ್ತೇನೆ ಎಂದು ಅಂಬೇಡ್ಕರ್ ಹೇಳಿದ್ದರು. ಹಾಗಾಗಿ ಮಹಿಳೆರನ್ನು ಸಮಾನತೆಯಿಂದ ಕಾಣುವುದು ಮತ್ತು ಪ್ರಗತಿಯಲ್ಲಿ ಅವರಿಗೂ ಸಮಪಾಲು ನೀಡಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನ ಮತ್ತು ಕಾನೂನುಗಳ ಮೂಲಕ ಮಹಿಳೆಯರಿಗೆ ಸಮನಾಗಿ ಹಕ್ಕುಗಳನ್ನು ನೀಡಿದ್ದರ ಪ್ರತಿಫಲದಿಂದ ಉದ್ಯೋಗ, ಉದ್ಯಮಗಳಲ್ಲಿ ಪ್ರಗತಿ ಸಾಧಿಸಲು ಸಾದ್ಯವಾಗುತ್ತಿದೆ” ಎಂದರು.

ನೆಲದನಿ ಬಳಗದ ಅಧ್ಯಕ್ಷ ಮಂಗಲ ಲಂಕೇಶ್ ಮಾತನಾಡಿ “ನಮ್ಮ ಸಂವಿಧಾನ ಸತ್ತವರ ಬಗ್ಗೆ ಬರೆದಿರುವ ಜೀವನ ಚರಿತ್ರೆಯಲ್ಲ. ಅದು ಜನರ ಬದುಕು ಕಟ್ಟುವ ಮಹಾನ್ ಗ್ರಂಥವಾಗಿದೆ. ಇಂತಹ ಸಂವಿಧಾನ ರಚಿಸುವ ಮೂಲಕ ಡಾ.ಬಿ ಆರ್ ಅಂಬೇಡ್ಕರ್ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಿದ್ದಾರೆ. ಅವರು ಜೀವನದುದ್ದಕ್ಕೂ ಜಾತೀಯತೆಯ ವಿರುದ್ಧ ಹೋರಾಡಿದವರು. ರಕ್ತಕ್ಕೆ ಯಾವುದೇ ಜಾತಿ ಧರ್ಮವಿಲ್ಲ, ಜೀವ ಉಳಿವಿಗಾಗಿ ರಕ್ತದಾನ ಅತ್ಯವಶ್ಯಕವಿದೆ ಎಂದರು.

ಇದೇ ಸಂದರ್ಭದಲ್ಲಿ ಮಿಮ್ಸ್ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞ ಡಾ. ಯೋಗೇಂದ್ರಕುಮಾರ್ ಮತ್ತು ರಕ್ತದಾನಿಗಳಾದ ಪ್ರಕಾಶ್, ರಾಕೇಶ್, ನಂದೀಶ್, ಮನೋಜ್‌ಕುಮಾರ್, ಪದವಿ ಕಾಲೇಜು ವಿದ್ಯಾರ್ಥಿನಿಯರಾದ ದಿವ್ಯ, ಸಹನಾ, ರೇವತಿ, ಆರ್ ಸಹನಾ, ಪ್ರೀತಿ, ವಾಣಿಶ್ರೀ ಸೇರಿದಂತೆ 75ಕ್ಕೂ ಹೆಚ್ಚು ಮಂದಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷ ರವಿಕುಮಾರ್, ಮಿಮ್ಸ್ ಸ್ಥಾನಿಯ ವೈದ್ಯಾಧಿಕಾರಿ ಡಾ.ವೆಂಕಟೇಶ್, ನೇತ್ರತಜ್ಞೆ ಡಾ.ಪೂರ್ಣಿಮಾ, ರೋಗ ಲಕ್ಷಣ ಶಾಸ್ತ್ರ ತಜ್ಞ ಡಾ. ಸಿದ್ದೇಗೌಡ, ಡಾ.ಮುರಳಿಧರಭಟ್, ಪ್ರಗತಿಪರ ಚಿಂತಕ ಪ್ರೊ.ಹುಲ್ಕೆರೆ ಮಹದೇವು, ನೆಲದನಿ ಬಳಗದ ಗೌ. ಅಧ್ಯಕ್ಷೆ ರುಕ್ಮುಣಿ ಡಾ.ಶಂಕರೇಗೌಡ, ರಕ್ತನಿಧಿ ಕೇಂದ್ರ ಡಾ.ಸುಹಾಸಿನಿ, ಶುಶ್ರೂಷಕರಾದ ಪ್ರಸನ್ನ, ರವಿ, ಮೋಹನ್, ತುಳಸಿಯಮ್ಮ, ಶಿವಮ್ಮ, ನೆಲದನಿ ಬಳಗದ ಪದಾಧಿಕಾರಿಗಳಾದ ಕುಮಾರ್‌ಗೌಡ, ನಂಜುಂಡ, ಯೋಗೇಶ್, ಉಮಾಪತಿ, ಪ್ರತಾಪ್, ವಿಜಿ ಮತ್ತಿತರರಿದ್ದರು.


ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...