Homeಮುಖಪುಟಬಿಎಂಎಸ್ ಟ್ರಸ್ಟ್ ಅಕ್ರಮ: ಸಚಿವ ಅಶ್ವಥ್ ನಾರಾಯಣ್ ರಾಜೀನಾಮೆಗೆ ಮಾಜಿ ಸಿಎಂ ಎಚ್‌ಡಿಕೆ ಒತ್ತಾಯ

ಬಿಎಂಎಸ್ ಟ್ರಸ್ಟ್ ಅಕ್ರಮ: ಸಚಿವ ಅಶ್ವಥ್ ನಾರಾಯಣ್ ರಾಜೀನಾಮೆಗೆ ಮಾಜಿ ಸಿಎಂ ಎಚ್‌ಡಿಕೆ ಒತ್ತಾಯ

- Advertisement -
- Advertisement -

ಬೆಂಗಳೂರಿನ BMS ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ನಲ್ಲಿ ಹಲವಾರು ಅಕ್ರಮಗಳು ನಡೆದಿದ್ದು, ಇದಕ್ಕೆ ಕಾರಣರಾದ ಸಚಿವ ಅಶ್ವಥ್ ನಾರಾಯಣ್ ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಬುಧವಾರ ಸದನದಲ್ಲಿ ವಿವರವಾಗಿ ಮಾತನಾಡಿದ ಅವರು, BMS ಟ್ರಸ್ಟ್‌ಗೆಗೆ ದಾನಿ ಟ್ರಸ್ಟಿ ಮತ್ತು ಅಜೀವ ಟ್ರಸ್ಟಿ ನೇಮಕಾತಿಯಲ್ಲಿ ಸರಕಾರದ ನಿಯಮಗಳನ್ನು ಉಲ್ಲಂಘಿಸಿ ಅಕ್ರಮಗಳನ್ನು ಎಸಗಲಾಗಿದೆ. ಟ್ರಸ್ಟಿನ ಮೂಲ ಡೀಡ್ ನ ಷರತ್ತುಗಳ ಉಲ್ಲಂಘನೆ ಮಾಡಲಾಗಿದೆ. ಕೆಲ ಪಟ್ಟಭದ್ರ ಹಿತಾಸಕ್ತಿಗಳು BMS ಎಜ್ಯುಕೇಷನಲ್ ಟ್ರಸ್ಟ್ ಅನ್ನು ಹೊಡೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಸಾವಿರಾರು ಕೋಟಿ ರೂ. ಮೌಲ್ಯದ ಸರಕಾರಿ ಸ್ವತ್ತನ್ನು ಬಿಜೆಪಿ ಸರ್ಕಾರ ಸದ್ದಿಲ್ಲದೆ ಖಾಸಗಿ ರಿಯಲ್ ಎಸ್ಟೇಟ್ ಪಟ್ಟಭದ್ರರಿಗೆ ಧಾರೆ ಎರೆದುಕೊಡುತ್ತಿದೆ. BMS ಎಂಜೀಯರಿಂಗ್‌ ಕಾಲೇಜಿನಲ್ಲಿ ಸೀಟ್‌ ಬ್ಲಾಕಿಂಗ್‌, ಪೇಮೆಂಟ್‌ ಸೀಟುಗಳನ್ನು 50:50 ರಂತೆ ಟ್ರಸ್ಟಿಗಳಿಬ್ಬರು ಹಂಚಿಕೊಂಡಿದ್ದಾರೆ. ಕಾಮೆಡ್-ಕೆ ಆಕ್ಷೇಪಣಾ ಪತ್ರ, ಸರಕಾರದ ಇಬ್ಬರು ಅಧಿಕಾರಿಗಳು ಟ್ರಸ್ಟಿನ ಅಕ್ರಮಗಳ ಬಗ್ಗೆ ಪತ್ರಗಳನ್ನು ಬರೆದಿದ್ದಾರೆ. ಆದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಕಿಡಿಕಾರಿದರು.

2018ರಲ್ಲಿ ನಾವು ಅಧಿಕಾರದಲ್ಲಿದ್ದಾಗ ದಾನಿ ಟ್ರಸ್ಟಿ, ಅಜೀವ ಟ್ರಸ್ಟಿ ನೇಮಕದ ಬಗ್ಗೆ BMS ಟ್ರಸ್ಟಿನಲ್ಲಿ ಕೈಗೊಂಡಿದ್ದ ತಿದ್ದುಪಡಿಗಳು ಅಕ್ರಮ ಎಂದು ಸಾರಿ, ಆ ತಿದ್ದುಪಡಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿದ್ದೆವು. ಆದರೆ ಈಗಿನ ಬಿಜೆಪಿ ಸರಕಾರ ಈ ಅಕ್ರಮ ತಿದ್ದುಪಡಿಗಳನ್ನು ಶರವೇಗದಲ್ಲಿ ಪುರಸ್ಕರಿಸಿದ್ದು ಹೇಗೆ? ಎಂದು ಅವರು ಪ್ರಶ್ನಿಸಿದ್ದಾರೆ.

ಸದನದಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿದ ಅವರು, BMS ಟ್ರಸ್ಟ್‌ʼನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್‌ ಮತ್ತು ಅದರ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್‌ರವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್‌ರವರು ದಾಖಲೆಗಳಲ್ಲಿ ಏನೂ ಇಲ್ಲ. ಕುಮಾರಸ್ವಾಮಿಯವರು ಕೇವಲ ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ ಎಂದಿದ್ದಾರೆ. ಇದರಿಂದ ಕ್ರೋಧಗೊಂಡ ಕುಮಾರಸ್ವಾಮಿಯವರು ನನ್ನ ಬಗ್ಗೆ ಮಾತನಾಡುವ ಯೋಗ್ಯತೆ ನಿನಗೆದೆಯೇ? ನಾನು ಯಾರ ಮನೆ ಹಾಳು ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಶ್ವಥ್ ನಾರಾಯಣ್ ಸಹ ನನ್ನ ಬಗ್ಗೆ ಮಾತನಾಡಲು ನಿಮಗೆ ಯೋಗ್ಯತೆಯಿಲ್ಲ ಎಂದು ಪ್ರತಿಕ್ರಿಸಿದರು.

ಇಂದು ಸದನದಲ್ಲಿ ಎಚ್.ಡಿ ಕುಮಾರಸ್ವಾಮಿಯವರು ಎತ್ತಿರುವ ಪ್ರಶ್ನೆಗಳಿಗೆ ಅಶ್ವಥ್ ನಾರಾಯಣ್‌ರವರು ಉತ್ತರಿಸಬೇಕಾಗಿದ್ದು, ಅದಕ್ಕೆ ಮುಂಚೆ ಇಂದು ಸಿಎಂ ಬೊಮ್ಮಾಯಿಯವರೊಂದಿಗೆ ಚರ್ಚಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ; ಸಾರ್ವಕಾಲಿಕ ಕುಸಿತ: ಡಾಲರ್ ಎದುರು ರೂಪಾಯಿ ಮೌಲ್ಯ 81 ರೂ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...