ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು ಸಾರ್ವಜನಿಕ ಸಾರಿಗೆಯನ್ನು ಆರಂಭಿಸಬೇಕೆಂದು ಸಾರ್ವಜನಿಕರಿಂದ ತೀವ್ರ ಒತ್ತಡ, ಮನವಿ ಕೇಳಿಬಂದ ಹಿನ್ನಲೆಯಲ್ಲಿ ಬಿಬಿಎಂಪಿ ಸೋಮವಾರ ಜೂ.21ರಿಂದ ಬಿಎಂಟಿಸಿ ಸಂಚಾರ ಆರಂಭಿಸಲು ಒಪ್ಪಿಗೆ ನೀಡಿದೆ.
ಜೂನ್ 21ರಿಂದ 2ನೇ ಹಂತದ ಅನ್‌ಲಾಕ್ ಪ್ರಕ್ರಿಯೆ ಆರಂಭವಾಗಲಿದ್ದು, ಲಾಕ್‌ಡೌನ್ ಕಾರಣದಿಂದ ಸಂಚಾರ ಸ್ಥಗಿತಗೊಳಿಸಿದ್ದ ಬಿಎಂಟಿಸಿಗೆ ಕೆಲವು ಷರತ್ತುಗಳೊಂದಿಗೆ ಬಸ್‌ಗಳನ್ನು ರಸ್ತೆಗಿಳಿಸಲು ಬಿಬಿಎಂಪಿ ಒಪ್ಪಿಗೆ ಸೂಚಿಸಿದೆ.
ಗುರುವಾರ ಬಿಬಿಎಂಪಿ ಕಚೇರಿಯಲ್ಲಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು, ನಗರ ಪೊಲೀಸ್ ಕಮಿಷನರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಿದ್ದಾರೆ.
ಇದನ್ನೂ ಓದಿ: ಲಾಕ್‌ಡೌನ್ ಮತ್ತಷ್ಟು ಸಡಿಲಿಸುವ ಮುನ್ಸೂಚನೆ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ನಗರದಲ್ಲಿ ಬಿಎಂಟಿಸಿ ಬಸ್ಗಳನ್ನ ರಸ್ತೆಗಿಳಿಸಲು ಜನಪ್ರತಿನಿಧಿಗಳು, ಸಾರ್ವಜನಿಕರಿಂದ ಒತ್ತಡ ಕೇಳಿ ಬಂದಿತ್ತು. ಬಿಬಿಎಂಪಿ ವ್ಯಾಪ್ತಿಯಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡುವಂತೆ ಬಿಬಿಎಂಪಿ ಮೇಲೆ ಒತ್ತಡ ಇತ್ತು. ಹೀಗಾಗಿ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡಲಾಗಿದೆ.
1. ಶೇಕಡಾ 50 ರಷ್ಟು ಬಸ್ಸುಗಳನ್ನ ಮಾತ್ರ ರಸ್ತೆಗಿಳಿಸಬೇಕು.
2. ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿರಬೇಕು
3.ಬಸ್‌ಗಳಲ್ಲಿ ಶೇಕಡಾ 50 ರಷ್ಟು ಪ್ರಯಾಣಿಕರಿಗೆ ಮಾತ್ರ ಅನುಮತಿ.
4. ಬಸ್‌ಗಳಲ್ಲಿ ಒಂದು ಸೀಟ್ ಬಿಟ್ಟು ಒಂದು ಸೀಟ್‌ನಲ್ಲಿ ಕುಳಿತು ಪ್ರಯಾಣಿಸಲು ಅವಕಾಶ.
5. ನಿಂತುಕೊಂಡು ಪ್ರಯಾಣಿಸೋದಕ್ಕೆ ಅವಕಾಶವಿಲ್ಲ.
6. ಬಸ್ ನಿಲ್ದಾಣಗಳಲ್ಲಿ ಜನಸಂದಣಿ ಆಗದಂತೆ ನೋಡಿಕೊಳ್ಳುವುದು ಪೊಲೀಸ್ ಇಲಾಖೆ ಮತ್ತು ಬಿಎಂಟಿಸಿ ಅಧಿಕಾರಿಗಳ ಜವಾಬ್ದಾರಿ.
7. ನೈಟ್ ಕರ್ಫ್ಯೂ ಆರಂಭವಾಗುವ 7 ಗಂಟೆ ಒಳಗೆ ಬಸ್ ಸಂಚಾರ ನಿಲ್ಲಿಸಬೇಕು.
8. ಮೆಜೆಸ್ಟಿಕ್, ಟರ್ಮಿನಲ್ಸ್ ಮತ್ತು ಪ್ರಮುಖ ಬಸ್ ನಿಲ್ದಾಣಗಳಲ್ಲಿ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಲಾಗಿದೆ.
ಅನ್‌ಲಾಕ್ ಮೊದಲ ಹಂತದಲ್ಲೇ ಶೇಕಡಾ 50 ರಷ್ಟು ಬಿಎಂಟಿಇ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರಕ್ಕೆ ಅನುಮತಿ ನಿಡಲಾಗುತ್ತದೆ ಎನ್ನಲಾಗಿತ್ತು. ಆದರೆ, ಸೋಂಕಿನ ಪ್ರಮಾಣ ಹೆಚ್ಚಳವಾಗುವ ಕಾರಣದಿಂದ ಬಿಬಿಎಂಪಿ ಬಸ್ ಸಂಚಾರಕ್ಕೆ ಅನುಮತಿ ಬೇಡ ಎಂದು ತಿಳಿಸಿತ್ತು.
ಇದನ್ನೂ ಓದಿ: ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಬಿಎಸ್‌ವೈ


