Homeಕರ್ನಾಟಕಇಂದು BMTC ಬಸ್‌ಗಳು ರಸ್ತೆಗಿಳಿಯುವುದಿಲ್ಲ: ಸಾರಿಗೆ ನೌಕರರ ಪ್ರತಿಭಟನೆ

ಇಂದು BMTC ಬಸ್‌ಗಳು ರಸ್ತೆಗಿಳಿಯುವುದಿಲ್ಲ: ಸಾರಿಗೆ ನೌಕರರ ಪ್ರತಿಭಟನೆ

ವಿವಿಧ ನಿಗಮಗಳ ಅಡಿಯಲ್ಲಿ ನೌಕರರಾಗಿ ದುಡಿಯುತ್ತಿರುವ ಸಾವಿರಾರು ಜನರು ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ ಎಂದು ಒತ್ತಾಯಿಸಿ ನಿನ್ನೆ ಬೃಹತ್ ಪ್ರತಿಭಟನೆ ನಡೆಸಿದ್ದಕ್ಕಾಗಿ ನಿನ್ನೆ ಸಾರಿಗೆ ನೌಕರರನ್ನು ಬಂಧಿಸಲಾಗಿತ್ತು.

- Advertisement -
- Advertisement -

ಇಂದು ಬೆಂಗಳೂರು ನಗರ ಸಾರಿಗೆ ಸಂಸ್ಥೆ (BMTC)ಯ ನೌಕರರು ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿದ್ದು, ನಿನ್ನೆಯ ಪ್ರತಿಭಟನೆಯ ಮುಂದುವರಿದ ಭಾಗವಾಗಿ ಇಂದು BMTC ಬಸ್‌ಗಳು ರಸ್ತೆಗಿಳಿದಿಲ್ಲ. ಪ್ರತಿಭಟನೆ ನಡೆಸಿದ್ದಕ್ಕಾಗಿ ನಿನ್ನೆ ಸಾರಿಗೆ ನೌಕರರನ್ನು ಬಂಧಿಸಲಾಗಿತ್ತು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮತ್ತು ಬೆಂಗಳೂರು ನಗರ ಸಾರಿಗೆ ಸಂಸ್ಥೆ (BMTC) ಸೇರಿದಂತೆ ವಿವಿಧ ನಿಗಮಗಳ ಅಡಿಯಲ್ಲಿ ನೌಕರರಾಗಿ ದುಡಿಯುತ್ತಿರುವ ಸಾವಿರಾರು ಜನರು ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ ಎಂದು ಒತ್ತಾಯಿಸಿ ನಿನ್ನೆ ಬೃಹತ್ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಲಾಕ್‌ಡೌನ್ ಎಫೆಕ್ಟ್: ಆಹಾರಕ್ಕಾಗಿ ಸಾಲ ಮಾಡಿದ 11 ರಾಜ್ಯಗಳ 45% ಜನ!

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು, ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಸಾರಿಗೆ ನೌಕರರಿಗೂ ನೀಡಬೇಕು ಮತ್ತು ಕೊರೊನಾ ಸಮಯದಲ್ಲಿ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ ಕೊರೊನಾ ವಾರಿಯರ್ಸ್ ಜೀವವಿಮೆ ಮೊತ್ತ ನೀಡಬೇಕೆಂದು ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ವಿಧಾನಸೌಧ ಚಲೋ ನಡೆಸಿದರು.

ಈಗ ನಾವು ಸರ್ಕಾರಿ ನೌಕರರೂ ಅಲ್ಲ, ಖಾಸಗಿ ನೌಕರರು ಅಲ್ಲ. ಮಧ್ಯದಲ್ಲಿ ನಿಗಮ, ಸಂಸ್ಥೆಗಳ ಅಡಿಯಲ್ಲಿ ದುಡಿಯುತ್ತಿದ್ದು ಹೆಚ್ಚಿನ ಸೌಲಭ್ಯಗಳು ದೊರಕುತ್ತಿಲ್ಲ. ಸಂಸ್ಥೆಗೆ ನಷ್ಟವಾದರೆ ನಮಗೆ ಸಂಬಳವನ್ನು ಸಕಾಲಕ್ಕೆ ನೀಡುವುದಿಲ್ಲ. ಹಾಗಾಗಿ ನಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ವಿವಿಧ ರಾಜ್ಯಗಳಲ್ಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಗಣಿಸಲಾಗಿದೆ. ಇತ್ತೀಚೆಗೆ ಆಂದ್ರ ಪ್ರದೇಶ ಸರ್ಕಾರವೂ ಈ ತೀರ್ಮಾನ ತೆಗೆದುಕೊಂಡಿದೆ. ಅದು ಕರ್ನಾಟಕದಲ್ಲಿಯೂ ಜಾರಿಯಾಗಬೇಕೆಂದು ಸಾರಿಗೆ ನೌಕರರು ಒತ್ತಾಯಿಸಿದರು.

ಇದನ್ನೂ ಓದಿ: ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ

ಸಾರಿಗೆ ನೌಕರರು ಸರ್ಕಾರಿ ನೌಕರರಾಗುವ ಹೋರಾಟದ ಒಕ್ಕೂಟ ಬ್ಯಾನರ್‌ನಡಿ ಒಂದುಗೂಡಿದ ಸಾವಿರಾರು ನೌಕರರು, ಅವರ ಕುಟಂಬ ಸದಸ್ಯರು ‘ಸರ್ಕಾರಿ ನೌಕರರಾಗುವುದು ಬೇಡಿಕೆಯಲ್ಲ, ಅದು ನಮ್ಮ ಹಕ್ಕು; ಸಾರಿಗೆ ನೌಕರರ ನಡಿಗೆ- ಸರ್ಕಾರಿ ನೌಕರರಾಗುವ ಕಡೆಗೆ, ಆಶ್ವಾಸನೆ ಸಾಕು -ಘೋಷಣೆ ಬೇಕು ಎಂದು ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.

ಕೊರೊನಾ ಸಂಕಷ್ಟದಲ್ಲಿಯೂ ಸಾರಿಗೆ ನೌಕರರು ಕೆಲಸ ನಿರ್ವಹಿಸಿದ್ದಾರೆ. ಸುಮಾರು 50 ಮಂದಿ ಸೋಂಕಿಗೆ ಒಳಪಟ್ಟು ಮೃತಪಟ್ಟಿದ್ದಾರೆ. ಇಂದು ಬಹಳಷ್ಟು ಜನ ದುಡಿಯದೆ ಸರ್ಕಾರಿ ನೌಕರರೆನಿಸಿಕೊಳ್ಳುತ್ತಿದ್ದಾರೆ. ಆದರೆ ನಾವು ಕಷ್ಟಪಟ್ಟು ದುಡಿದರೂ ಸರ್ಕಾರಿ ನೌಕರರಾಗಿಲ್ಲ ಎಂದು ಅಳಲು ವ್ಯಕ್ತಪಡಿಸಿದರು.


ಇದನ್ನೂ ಓದಿ: ಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...