Homeಕರ್ನಾಟಕಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ.ಎನ್‌.ಚಂದ್ರಪ್ಪ ನೇಮಕ

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ.ಎನ್‌.ಚಂದ್ರಪ್ಪ ನೇಮಕ

- Advertisement -
- Advertisement -

ಹಿರಿಯ ರಾಜಕಾರಣಿ, ಮಾಜಿ ಸಂಸದ ಆರ್‌.ಧ್ರುವನಾರಾಯಣ ಅವರ ನಿಧನದಿಂದಾಗಿ ತೆರವಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ನೇಮಕವನ್ನು ಕಾಂಗ್ರೆಸ್ ಮಾಡಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷರನ್ನಾಗಿ ಬಿ.ಎನ್‌.ಚಂದ್ರಪ್ಪ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ ಮಾರ್ಚ್‌ ತಿಂಗಳಿನಲ್ಲಿ ನಿಧನ ಹೊಂದಿದ್ದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಭಾನುವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಬಿ. ಎನ್. ಚಂದ್ರಪ್ಪ ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಂದ್ರಪ್ಪ ನೇಮಕ ಮಾಡಿದ್ದು, ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಹತ್ವದ ನಿರ್ಧಾರ ಕೈಗೊಂಡಿದೆ.

ಪರಿಶಿಷ್ಟ ಜಾತಿಯೊಳಗಿನ ಎಡಗೈ (ಮಾದಿಗ) ಸಮುದಾಯಕ್ಕೆ ಸೇರಿದ್ದಾರೆ. ಮಾದಿಗ ಸಮುದಾಯದ ಮತಗಳನ್ನು ಗುರಿಯಾಗಿಸಿಕೊಂಡು ಬಿಜೆಪಿ ರಾಜಕಾರಣ ಶುರು ಮಾಡಿದ್ದು, ಕಾಂಗ್ರೆಸ್‌ ತನ್ನ ಸಾಂಪ್ರದಾಯಿಕ ಮತಗಳು ಚದುರಿ ಹೋಗದಂತೆ ನಿಭಾಯಿಸಲು ಎಡಗೈ ಸಮುದಾಯದ ಚಂದ್ರಪ್ಪ ಅವರಿಗೆ ಕಾರ್ಯಾಧ್ಯಕ್ಷ ಸ್ಥಾನವನ್ನು ನೀಡಿದೆ.

ಇದನ್ನೂ ಓದಿರಿ: ಸಾಮಾಜಿಕ ಮಾಧ್ಯಮದಲ್ಲಿ ‘#AmulGoback, #SaveKMF’ ಹ್ಯಾಶ್‌ಟ್ಯಾಗ್‌ ಟ್ರೆಂಡ್

ಚಿತ್ರದುರ್ಗದ ಲೋಕಸಭಾ ಕ್ಷೇತ್ರದ ಸಂಸದರಾಗಿ ಚಂದ್ರಪ್ಪ ಸೇವೆ ಸಲ್ಲಿಸಿದ್ದಾರೆ. ವಾಸ್ತವವಾಗಿ ಚಂದ್ರಪ್ಪ ಕೂಡಾ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಪಾವಗಡದಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಬಯಸಿದ್ದಾರೆ. ಇವರು 2014 -2019ರವರೆಗೂ ಲೋಕಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಸಂಸತ್ತಿನ ರಾಸಾಯನಿಕ ಮತ್ತು ರಸಗೊಬ್ಬರದ ಸ್ಥಾಯಿ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯವರಾದ ಚಂದ್ರಪ್ಪ ಎಂಬತ್ತರ ದಶಕದಲ್ಲಿ ಹಿಂದಿನ ಜಿಲ್ಲಾ ಪರಿಷತ್ತಿಗೆ ಆಯ್ಕೆಯಾಗಿದ್ದರು. ಮಲ್ಲಿಕಾರ್ಜುನ ಖರ್ಗೆಯವರಂತೆ ಚಂದ್ರಪ್ಪ ಕೂಡ ರಾಜ್ಯದ ಚರ್ಮೋದ್ಯಮದ ಅಂಗಸಂಸ್ಥೆಯಾದ ಲಿಡ್ಕರ್‌ನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read