Homeಮುಖಪುಟಬಿಎನ್ಎಸ್ ಸೆಕ್ಷನ್ 152 ಭಿನ್ನಾಬಿಪ್ರಾಯ ಹತ್ತಿಕ್ಕುವ ಅಸ್ತ್ರವಾಗಿ ಬಳಸಬಾರದು : ರಾಜಸ್ಥಾನ ಹೈಕೋರ್ಟ್

ಬಿಎನ್ಎಸ್ ಸೆಕ್ಷನ್ 152 ಭಿನ್ನಾಬಿಪ್ರಾಯ ಹತ್ತಿಕ್ಕುವ ಅಸ್ತ್ರವಾಗಿ ಬಳಸಬಾರದು : ರಾಜಸ್ಥಾನ ಹೈಕೋರ್ಟ್

- Advertisement -
- Advertisement -

ಭಾರತದ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳನ್ನು ಅಪರಾಧೀಕರಿಸುವ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 152 ಅನ್ನು ಕಾನೂನುಬದ್ಧ ಭಿನ್ನಾಭಿಪ್ರಾಯದ ವಿರುದ್ಧ ಅಸ್ತ್ರವಾಗಿ ಬಳಸಬಾರದು ಎಂದು ರಾಜಸ್ಥಾನ ಹೈಕೋರ್ಟ್ ಹೇಳಿದೆ.

ಬಿಎನ್‌ಎಸ್‌ ಸೆಕ್ಷನ್‌ನ ಮೂಲ ದೇಶದ್ರೋಹವನ್ನು ಅಪರಾಧೀಕರಿಸುವ ಬ್ರಿಟಿಷರು ಜಾರಿಗೆ ತಂದಿದ್ದ ಐಪಿಸಿ ಸೆಕ್ಷನ್‌ 124ಎರಲ್ಲಿ ಇದೆ ಎಂದು ನ್ಯಾ. ಅರುಣ್‌ ಮೋಂಗಾ ತಿಳಿಸಿದ್ದಾರೆ.

ತಮ್ಮ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ 152 ಮತ್ತು ಸೆಕ್ಷನ್‌ 197(1)(ಸಿ) (ಆರೋಪಗಳು, ರಾಷ್ಟ್ರೀಯ ಏಕೀಕರಣಕ್ಕೆ ಪ್ರತಿಕೂಲವಾದ ಸಮರ್ಥನೆಗಳು) ಅಡಿ ದಾಖಲಿಸಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಸಿಖ್‌ ಬೋಧಕ ತೇಜೇಂದರ್ ಪಾಲ್ ಸಿಂಗ್ ಸಲ್ಲಿಸಿದ್ದ ಮನವಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅವಲೋಕನ ಮಾಡಿದೆ.

ಖಲಿಸ್ತಾನ ಪರ ನಾಯಕ ಮತ್ತು ಸಂಸದ ಅಮೃತಪಾಲ್ ಸಿಂಗ್ ಅವರಿಗೆ ಸಹಾನುಭೂತಿ ತೋರಿದ್ದ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ತೇಜೇಂದರ್‌ ಅವರ ವಿರುದ್ದ ಕಳೆದ ಜುಲೈನಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ದುರುದ್ದೇಶದಿಂದ ಮಾಡುವ ಕೃತ್ಯಗಳ ಮಾತ್ರವೇ ಬಿಎನ್‌ಎಸ್‌ ಸೆಕ್ಷನ್ 152ರ ವ್ಯಾಪ್ತಿಯಲ್ಲಿ ಬರುತ್ತವೆ. ಬಿಎನ್‌ಎಸ್‌ ಸೆಕ್ಷನ್ 152ಕ್ಕೆ ಇರುವ ವಿವರಣೆಯು ಸರ್ಕಾರದ ನೀತಿಗಳ ನ್ಯಾಯಸಮ್ಮತ ಟೀಕೆಗೆ ವಿನಾಯಿತಿ ನೀಡುವ ಮೂಲಕ ಅಗತ್ಯವಾದ ಸುರಕ್ಷತೆಯನ್ನು ಒದಗಿಸುತ್ತದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿಗೆ ಅನುಗುಣವಾಗಿ ಬಿಎನ್‌ಎಸ್‌ ಸೆಕ್ಷನ್ 152ನ್ನು ಎಚ್ಚರಿಕೆಯಿಂದ ಅನ್ವಯಿಸುವಂತೆ ನ್ಯಾಯಾಲಯ ಸೂಚಿಸಿದೆ. ರಚನಾತ್ಮಕ ಸಂವಾದ ಅಥವಾ ರಾಜಕೀಯ ಅಭಿಪ್ರಾಯ ಭೇದವನ್ನು ಹತ್ತಿಕ್ಕುವುದನ್ನು ತಪ್ಪಿಸುವುದಕ್ಕಾಗಿ ಕಾನೂನು ಜಾರಿ ಅಧಿಕಾರಿಗಳು ಸಂಯಮ ಮತ್ತು ವಿವೇಚನೆಯನ್ನು ಬಳಸಬೇಕು ಎಂದು ಪೀಠ ಕಿವಿಮಾತು ಹೇಳಿದೆ.

ಝುಬೈರ್ ವಿರುದ್ದ ಸೆಕ್ಷನ್ 152 ಅಡಿ ಆರೋಪ ಹೊರಿಸಿರುವ ಯುಪಿ ಪೊಲೀಸರು

ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್ ಅವರು ಯತಿ ನರಸಿಂಗಾನದ ಅವರ ಪ್ರಚೋದನಕಾರಿ ಭಾಷಣದ ವಿಡಿಯೋ ಹಂಚಿಕೊಂಡಿದ್ದಕ್ಕೆ ಉತ್ತರ ಪ್ರದೇಶ ಪೊಲೀಸರು ಬಿಎನ್‌ಎಸ್‌ ಸೆಕ್ಷನ್ 152 ಅಡಿ ಪ್ರಕರಣ ದಾಖಲಿಸಿದ್ದಾರೆ.

ಇದಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಪ್ರೆಸ್ ಕ್ಲಬ್ ಆಫ್ ಇಂಡಿಯಾ (ಪಿಸಿಐ) ಸೇರಿದಂತೆ ಪತ್ರಿಕಾ ಸಂಸ್ಥೆಗಳು, “ಈ ಸೆಕ್ಷನ್‌ ಸ್ವತಂತ್ರ ಚಿಂತಕರು ಮತ್ತು ಮಾಧ್ಯಮಗಳನ್ನು ಮೌನಗೊಳಿಸುವ ಸಾಮರ್ಥ್ಯ ಹೊಂದಿರುವುದರಿಂದ ಎಲ್ಲಾ ವಿವೇಕಯುತ ಮನಸ್ಸುಗಳು ಇದನ್ನು ವಿರೋಧಿಸುತ್ತಿವೆ. ದೇಶದ್ರೋಹದ ಕಾನೂನನ್ನು ದುರುಪಯೋಗಪಡಿಸಿಕೊಂಡ ಹಲವಾರು ಪ್ರಕರಣಗಳನ್ನು ನಾವು ಈ ಹಿಂದೆ ನೋಡಿದ್ದೇವೆ. ಬಿಎನ್ಎಸ್‌ ಸೆಕ್ಷನ್‌ 152ಕೂಡ ಅದೇ, ಆದರೆ ಹೊಸ ಅವತಾರದಲ್ಲಿದೆ ಎಂದು ನವೆಂಬರ್ 29ರಂದು ಹೊರಡಿಸಿದ್ದ ಪ್ರಕಟಣೆಯಲ್ಲಿ ಹೇಳಿದೆ.

ಇದನ್ನೂ ಓದಿ : ಚುನಾವಣಾ ಆಯೋಗದ ಸಾಂಸ್ಥಿಕ ಸಮಗ್ರತೆ ನಾಶಪಡಿಸುವುದು ಮೋದಿ ಸರ್ಕಾರದ ಪಿತೂರಿಯ ಭಾಗ: ಖರ್ಗೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...