Homeಮುಖಪುಟಚಂಡೀಗಢ: ಕಬ್ಬಿಣದ ಪೆಟ್ಟಿಗೆಯೊಳಗಡೆ ಮೂವರು ಸಹೋದರಿಯರ ಮೃತದೇಹ ಪತ್ತೆ

ಚಂಡೀಗಢ: ಕಬ್ಬಿಣದ ಪೆಟ್ಟಿಗೆಯೊಳಗಡೆ ಮೂವರು ಸಹೋದರಿಯರ ಮೃತದೇಹ ಪತ್ತೆ

- Advertisement -
- Advertisement -

ಪಂಜಾಬ್‌ನ ಜಲಂಧರ್ ಜಿಲ್ಲೆಯ ಕಾನ್ಪುರ ಗ್ರಾಮದ ಮನೆಯೊದರಲ್ಲಿ ಪೆಟ್ಟಿಗೆಯೊಳಗಡೆ ಮೂವರು ಸಹೋದರಿಯರ ಮೃತದೇಹ ಪತ್ತೆಯಾದ ಆಘಾತಕಾರಿ ಘಟನೆ ನಡೆದಿದೆ.

ಮೂವರು ಸಹೋದರಿಯರ ನಾಪತ್ತೆ ಬಗ್ಗೆ ಮಕ್ಸೂದಮ್‌ ಪೊಲೀಸ್‌ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದರು. ಆದಿತ್ಯವಾರ ಪೋಷಕರು ಕೆಲಸದಿಂದ ಮನೆಗೆ ಬಂದು ನೋಡಿದಾಗ ಮೂವರು ಕೂಡ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಈ ಕುಟುಂಬವು ವಲಸೆ ಕಾರ್ಮಿಕರಾಗಿದ್ದು, ದಂಪತಿಗೆ ಐವರು ಮಕ್ಕಳಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಕಾಂಚನ್(4) ಶಕ್ತಿ (7) ಮತ್ತು ಅಮೃತ(9) ಅವರ ಮೃತದೇಹ ಪೆಟ್ಟಿಗೆಯೊಳಗಡೆ ಪತ್ತೆಯಾಗಿದೆ. ಸಾವಿನ ಕಾರಣವನ್ನು ತಿಳಿಯಲು ಎಲ್ಲಾ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಾಲಕಿಯರ ತಂದೆ ಸೋಮವಾರ ಗೃಹೋಪಯೋಗಿ ವಸ್ತುಗಳನ್ನು ಸ್ಥಳಾಂತರಿಸುತ್ತಿದ್ದಾಗ ಪೆಟ್ಟಿಗೆ ಮಾಮೂಲಿಗಿಂತ ಭಾರವಾಗಿರುವುದನ್ನು ಕಂಡು ಪರಿಶೀಲಿಸಿದಾಗ ಈ ವಿಷಯ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಬಾಲಕಿಯರ ತಂದೆ ಕುಡಿತದ ಚಟವನ್ನು ಹೊಂದಿದ್ದ. ಆತನಿಗೆ ಮನೆಯನ್ನು ಖಾಲಿ ಮಾಡುವಂತೆ ಮನೆ ಮಾಲಕ ಗಡುವನ್ನು ಕೂಡ ನೀಡಿದ್ದ ಎಂದು ಹೇಳಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಸಾವಿಗೆ ನಿಖರವಾದ ಕಾರಣಗಳ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನು ಓದಿ:  ಫತೇಪುರ್‌ನಲ್ಲಿ ಹಿಂಸಾಚಾರ: ಒಂದೇ ಕುಟುಂಬದ ಐವರು ಸೇರಿದಂತೆ ಆರು ಮಂದಿಯ ಹತ್ಯೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...