Homeಕರ್ನಾಟಕಧರ್ಮಸ್ಥಳದಲ್ಲಿ ಶವ ಹೊರತೆಗೆಯುವ ಕಾರ್ಯಾಚರಣೆ: ಮಣ್ಣು ಅಗೆಯಲು ಜೆಸಿಬಿ ಸಹಾಯ ಪಡೆದ ಎಸ್‌ಐಟಿ

ಧರ್ಮಸ್ಥಳದಲ್ಲಿ ಶವ ಹೊರತೆಗೆಯುವ ಕಾರ್ಯಾಚರಣೆ: ಮಣ್ಣು ಅಗೆಯಲು ಜೆಸಿಬಿ ಸಹಾಯ ಪಡೆದ ಎಸ್‌ಐಟಿ

- Advertisement -
- Advertisement -

ಧರ್ಮಸ್ಥಳ ಗ್ರಾಮದಲ್ಲಿ ಹೂಳಲಾಗಿದೆ ಎನ್ನಲಾದ ಶವಗಳನ್ನು ಹೊರ ತೆಗೆಯುವ ಕಾರ್ಯಾಚರಣೆಗೆ ನೀರಿನ ಒರತೆ ಅಡ್ಡಿಯಾಗಿದ್ದು, ಈ ಹಿನ್ನೆಲೆ ಮಣ್ಣು ಅಗೆಯಲು ಜೆಸಿಬಿ ಸಹಾಯ ಪಡೆಯಲಾಗಿದೆ ಎಂಬ ಮಾಹಿತಿ ದೊರೆತಿದೆ.

ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗ ನೇತ್ರಾವತಿ ಸ್ನಾನ ಘಟ್ಟದ ಪಕ್ಕದಲ್ಲೇ ಇದೆ. ನದಿಗೂ ಈ ಜಾಗಕ್ಕೂ ಕೇವಲ 10 ಮೀಟರ್ ಅಂತರವಿದ್ದು, ಭೂಮಿಯನ್ನು ಅಗೆದಂತೆಲ್ಲಾ ನೀರು ಒಸರುತ್ತಿದೆ. ಹಾಗಾಗಿ ಜೆಸಿಬಿಯನ್ನು ಸ್ಥಳಕ್ಕೆ ತರಿಸಿ ಅಗೆಯಲಾಗುತ್ತಿದೆ ಎಂದು ತಿಳಿದು ಬಂದಿದೆ.

ದೂರುದಾರ ತೋರಿಸಿದ ಮೊದಲ ಜಾಗದಲ್ಲಿ ಭೂಮಿಯನ್ನು ಅಗೆಯುವ ಕಾರ್ಯವನ್ನು ಮಧ್ಯಾಹ್ನ 12 ಗಂಟೆ ವೇಳೆಗೆ ಆರಂಭಿಸಲಾಗಿತ್ತು. ಸುಮಾರು 3 ಅಡಿ ಆಳದವರೆಗೆ ಅಗೆಯಲಾಗಿತ್ತು. ಆದರೆ, ಶವ ಹೂತು ಹಾಕಿರುವ ಯಾವುದೇ ಕುರುಹು ಪತ್ತೆಯಾಗಿಲ್ಲ ಎನ್ನಲಾಗಿದೆ. ಅಲ್ಲದೆ, ಇನ್ನಷ್ಟು ಮಣ್ಣು ಅಗೆಯಲು ನೀರಿನ ಒರತೆ ಅಡ್ಡಿಯಾಗಿದೆ.

ಸಾಕ್ಷಿ ದೂರುದಾರನಿಗೆ ಸಂತೃಪ್ತಿಯಾಗುವವರೆಗೆ ಹಾಗೂ ನಮಗೆ ಇನ್ನು ಅಗೆಯುವ ಅಗತ್ಯವಿಲ್ಲ ಎಂದು ಮನವರಿಕೆ ಆಗುವವರೆಗೆ ಅಗೆಯುವ ಕಾರ್ಯ ಮುಂದುವರಿಸಲಿದ್ದೇವೆ. ಒಂದು ಜಾಗದಲ್ಲಿ ಅಗೆಯುವ ಕಾರ್ಯವನ್ನು ಪೂರ್ಣಗೊಳಿಸದ ಬಳಿಕವೇ ಎರಡನೇ ಜಾಗದಲ್ಲಿ ಅಗೆಯುವ ಕಾರ್ಯ ಆರಂಭಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ಕನ್ನಡ ಪ್ಲಾನೆಟ್ ವರದಿ ಮಾಡಿದೆ.

ಎಸ್‌ಐಟಿಯ ಡಿಐಜಿ ಎಂ.ಎನ್ ಅನುಚೇತ್ ಹಾಗೂ ಪುತ್ತೂರಿನ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ ಎಂದು ವರದಿ ತಿಳಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್: ದರ್ಶನ್ ಅಭಿಮಾನಿಗಳ ಮೇಲೆ ಎಫ್‌ಐಆರ್‌ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...