Homeಚಳವಳಿರೈತ ಹೋರಾಟ: ಸಿಂಘು ಗಡಿಯಲ್ಲಿ ಅನಾಮಧೇಯ ಮೃತದೇಹ ಪತ್ತೆ

ರೈತ ಹೋರಾಟ: ಸಿಂಘು ಗಡಿಯಲ್ಲಿ ಅನಾಮಧೇಯ ಮೃತದೇಹ ಪತ್ತೆ

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಆಗ್ರಹಿಸಿ ದೆಹಲಿಯ ಗಡಿಭಾಗಗಳಲ್ಲಿ ದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶುಕ್ರವಾರ ಸಿಂಘು ಗಡಿಯ ಪ್ರತಿಭಟನಾ ಸ್ಥಳದ ವೇದಿಕೆ ಬಳಿ ಯುವಕನ ಮೃತದೇಹ ಪತ್ತೆಯಾಗಿದೆ. ವೇದಿಕೆ ಮುಂಭಾಗದ ಬ್ಯಾರಿಕೇಡ್‌ಗೆ ಮೃತದೇಹವನ್ನು ಕಟ್ಟಲಾಗಿದೆ ಎಂದು ವರದಿಯಾಗಿದೆ.

ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡ್ಲಿಯ ಸಿಂಘು ಗಡಿಯಲ್ಲಿರುವ ವೇದಿಕೆಯ ಸಮೀಪದ ತಾತ್ಕಾಲಿಕ ಗುರುದ್ವಾರದಲ್ಲಿ ಇರಿಸಲಾಗಿರುವ ಗುರು ಗ್ರಂಥ ಸಾಹಿಬ್‌ಗೆ ಮೃತ ವ್ಯಕ್ತಿ ಅಗೌರವ ತೋರಿದ್ದಾನೆ. ಹೀಗಾಗಿ ಈ ಕೃತ್ಯದಲ್ಲಿ ನಿಹಾಂಗ್‌ಗಳ ಕೈವಾಡವಿದೆ ಎಂದು ಶಂಕಿಸಲಾಗಿದೆ. ಆದರೆ ಪೊಲೀಸರು ಇದನ್ನು ದೃಢಪಡಿಸಿಲ್ಲ.

ಬೆಳಿಗ್ಗೆ 5: 30 ರ ಸುಮಾರಿಗೆ ಹತ್ಯೆಯ ಬಗ್ಗೆ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಬ್ಯಾರಿಕೇಡ್‌ನಲ್ಲಿ ಕಟ್ಟಲಾಗಿದ್ದ ಮೃತದೇಹದ ಎಡಗೈನ ಮುಂಗೈ ಕತ್ತರಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಭಾಷಣ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

“ಇಂದು ಮುಂಜಾನೆ 5 ಗಂಟೆಗೆ, ರೈತರ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ ಕೈಗಳು, ಕಾಲುಗಳನ್ನು ಕತ್ತರಿಸಿದ  ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಯಾರು ಕಾರಣ ಎಂಬ ಬಗ್ಗೆ ಮಾಹಿತಿಯಿಲ್ಲ. ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ವೈರಲ್ ಆಗಿರುವ ವಿಡಿಯೊ ತನಿಖೆಯ ಭಾಗವಾಗಿದೆ. ವದಂತಿಗಳು ಕಾಲಹರಣ ಮಾಡಿಸುತ್ತವೆ ಅಷ್ಟೇ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಹಂಸರಾಜ್ ಹೇಳಿಕೆಯನ್ನು  ಸುದ್ದಿ ಸಂಸ್ಥೆ ಎಎನ್ಐ ಉಲ್ಲೇಖಿಸಿದೆ.

ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಿದ ಆರೋಪದಲ್ಲಿ ನಿಹಾಂಗ್ಸ್ ಯುವಕನನ್ನು ಹೊಡೆದಿದ್ದಾರೆ ಎಂದು ವರದಿಗಳು ಹೇಳಿವೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ವಿಡಿಯೊಗಳು ವೈರಲ್ ಆಗಿವೆ.

ಶಾಂತಿಯುತವಾಗಿ ಸಾಗುತ್ತಿರುವ ರೈತರ ಪ್ರತಿಭಟನೆಗೆ ಅಪಖ್ಯಾತಿ ತರುವ ಪ್ರಯತ್ನ ಇದು ಎಂದು ಹಲವು ರೈತರು ಆರೋಪಿಸಿದ್ದಾರೆ.

ಇದನ್ನೂ ಓದಿ: 2024ಕ್ಕೆ ರಾವಣನನ್ನು ಸಂಪೂರ್ಣವಾಗಿ ಸುಡುತ್ತೇವೆ: ಶಿವಸೇನೆ ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...