HomeUncategorizedಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ಸಾಮಾಜಿಕ ಜಾಲತಾಣಗಳಲ್ಲಿ ಮನರಂಜನಾ ಕ್ಷೇತ್ರವನ್ನು ಗುರಿಮಾಡಿಕೊಂಡು ಕಟುವಾಗಿ ದಾಳಿ ಮಾಡಲಾಗುತ್ತಿದೆ. ಇಂಥಹ ಸಂದರ್ಭದಲ್ಲಿ ಸರ್ಕಾರ ಸಿನಿಮಾ ಕ್ಷೇತ್ರದ ರಕ್ಷಣೆಗೆ ಮುಂದಾಗಬೇಕು- ಜಯಾ ಬಚ್ಚನ್

- Advertisement -
- Advertisement -

ಸಂಸತ್ತಿನಲ್ಲಿ ನಡೆಯುತ್ತಿರುವ ಮಾನ್ಸೂನ್ ಅಧಿವೇಶನದಲ್ಲಿ ಜಯಾ ಬಚ್ಚನ್, ಬಾಲಿವುಡ್ ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ಅನ್ನು ಟೀಕಿಸುವವರ ವಿರುದ್ಧ ಮಂಗಳವಾರದ ಅಧಿವೇಶನದಲ್ಲಿ ಅವರು ಕಿಡಿಕಾರಿದ್ದರು.

“ಸಿನಿಮಾ ಕ್ಷೇತ್ರದಲ್ಲಿ ಮಾದಕವಸ್ತು ವ್ಯಸನದ ಸಮಸ್ಯೆ ಇದೆ” ಎಂದು ಬಿಜೆಪಿ ಸಂಸದ ಮತ್ತು ನಟ ರವಿ ಕಿಶನ್ ಆರೋಪಿಸಿದ್ದರು. ಇತ್ತೀಚೆಗೆ ಬಾಲಿವುಡ್ ಅನ್ನು ‘ಚರಂಡಿ’ಗೆ ಹೋಲಿಸಿ ಕಂಗನಾ ರಣಾವತ್ ಟೀಕಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಜಯಾ ಬಚ್ಚನ್, “ಇದೇ ಕ್ಷೇತ್ರದಲ್ಲಿ ಇದ್ದು, ಹೆಸರು ಮಾಡಿರುವವರೂ ಸಹ ಈಗ ಈ ಕ್ಷೇತ್ರವನ್ನು ಚರಂಡಿ ಎನ್ನುತ್ತಿದ್ದಾರೆ. ಇನ್ನು, ಸಿನಿಮಾ ಕ್ಷೇತ್ರದಿಂದ ಬಂದು ಈಗ ಸಂಸದರಾಗಿರುವವರೊಬ್ಬರು ಇದರ ಬಗ್ಗೆ ಮಾತನಾಡಿದ್ದಾರೆ” ಎಂದು ಯಾರ ಹೆಸರನ್ನೂ ಹೇಳದೇ ತಿರುಗೇಟು ನೀಡಿದ್ದರು.

“ಸಿನಿಮಾ ಕ್ಷೇತ್ರವು ನಿತ್ಯ 5 ಲಕ್ಷ ಜನರಿಗೆ ನೇರ ಉದ್ಯೋಗ ನೀಡುತ್ತಿದೆ. ಪರೋಕ್ಷವಾಗಿ ಸುಮಾರು 50 ಲಕ್ಷ ಜನರಿಗೆ ಉದ್ಯೋಗವನ್ನು ನೀಡಿದೆ. ಈ ಸಾಂಕ್ರಾಮಿಕ ಪಿಡುಗಿನ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಸಂದರ್ಭದಲ್ಲಿ ಜನರ ದಿಕ್ಕುತಪ್ಪಿಸಲು ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಕ್ಷೇತ್ರವನ್ನು ಟೀಕಿಸಲಾಗುತ್ತಿದೆ. ನಮಗೆ ಸರ್ಕಾರದ ಬೆಂಬಲವೂ ಸಿಗುತ್ತಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಜಯಾ ಬಚ್ಚನ್ ಅವರ ಈ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರವಾದ ವಿರೋಧ ವ್ಯಕ್ತವಾಗಿದ್ದು, #JayaBachchanShamlessLady ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದ್ದು, ಟ್ರೆಂಡಿಂಗ್‌ನಲ್ಲಿ 2ನೇ ಸ್ಥಾನದಲ್ಲಿದೆ. ಈ ವರದಿ ಬರೆಯುವ ವೇಳೆಗೆ ಸುಮಾರು 59 ಸಾವಿರ ಟ್ವೀಟ್‌ಗಳನ್ನು ಮಾಡಲಾಗಿದೆ.

 

ಜಯಾ ಬಚ್ಚನ್ ಅವರ ಈ ಹೇಳಿಕೆಯನ್ನು ಕಂಗನಾ ರಣಾವತ್ ಖಂಡಿಸಿ ಟ್ವೀಟ್ ಮಾಡಿದ್ದಾರೆ. “ಜಯಾ ಜೀ, ನನ್ನ ಜಾಗದಲ್ಲಿ ನಿಮ್ಮ ಮಗಳು ಇದ್ದಿದ್ದರೆ, ಆಗಲೂ ನಿಮ್ಮ ಅಭಿಪ್ರಾಯ ಇದೇ ಆಗಿರುತ್ತಿತ್ತೇ? ಅವಳು ಹದಿಹರೆಯದವಳಾಗಿದ್ದು, ಮದಕ ವ್ಯಸನಿಯಾಗಿ ಕಿರುಕುಳಕ್ಕೆ ಒಳಗಾಗಿದ್ದರೆ, ಅಭಿಷೇಕ್ ನಿರಂತರವಾಗಿ ಬೆದರಿಕೆ ಮತ್ತು ಕಿರುಕುಳದ ಬಗ್ಗೆ ಆರೋಪಿಸಿದ್ದರೆ? ಹಾಗೂ ಹಿಂದಿನ ದಿನ ನೇಣುಬಿಗಿದುಕೊಂಡಿದ್ದರೆ? ನೀವು ಆಗಲೂ ಇದೇ ಮಾತುಗಳನ್ನು ಹೇಳುವಿರಾ?” ಎಂದು ಟ್ವೀಟ್ ಮಾಡಿದ್ದಾರೆ.

ಆದರೆ, ಅಷ್ಟೇ ಜನರು ಜಯಾ ಅವರನ್ನು ಸಮರ್ಥಿಸಿಕೊಳ್ಳುವವರೂ ಇದ್ದಾರೆ. ಬಾಲಿವುಡ್‌ನ ಖ್ಯಾತ ನಟಿ ತಾಪ್ಸಿ ಪನ್ನು ಜಯಾ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡು, “ನಮ್ಮ ಸಿನಿಮಾ ಕ್ಷೇತ್ರದಿಂದ ಮತ್ತೊಬ್ಬ ಮಹಿಳೆ ದನಿಯೆತ್ತಿರುವುದಕ್ಕೆ ಶ್ಲಾಘಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

“ಜಯಾ ಅವರು ಸರಿಯಾಗಿಯೇ ಮಾತನಾಡಿದ್ದು, ಕೇವಲ ಒಂದೆರಡು ಪ್ರಕರಣಗಳನ್ನಿಟ್ಟುಕೊಂಡು ಇಡೀ ಉದ್ಯಮವನ್ನೇ ದೂರುವುದು ಸರಿಯಲ್ಲ” ಎಂಬ ಅಭಿಪ್ರಾಯವನ್ನು ಹೇಮಾ ಮಾಲಿನಿ, Producers Guild of India ಸೇರಿದಂತೆ ಬಾಲಿವುಡ್‌ನ ಹಲವರು ಜಯಾ ಬಚ್ಚನ್ ಅವರ ಪರವಾಗಿ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಕಡೆ, ಬಾಲಿವುಡ್ ಮೇಲೆ ನಡೆಯುತ್ತಿರುವ ಕಟುವಾದ ಟೀಕೆಗಳನ್ನು ಎದುರಿಸಿ, ಉದ್ಯಮದ ಪರವಾಗಿ ಅದರ ರಕ್ಷಣೆಗೆ ನಿಂತಿರುವುದು ಕೇವಲ ಮಹಿಳೆಯರು ಮಾತ್ರ! ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಹೀಗೆ ದನಿಯೆತ್ತುವವರ ವಿರುದ್ಧ ಕಾಣದ ಕೈಗಳು ಕೆಲಸ ಮಾಡಿ, ಸಾಮಾಜಿಕ ಮಾದ್ಯಮಗಳಲ್ಲಿ ತೇಜೋವಧೆ ಮಾಡಲಾಗುತ್ತಿದೆ. ಆ ಮೂಲಕ ಅವರ ಎಂದು ಹಲವರು ಆರೋಪಿಸಿದ್ದಾರೆ.


ಇದನ್ನೂ ಓದಿ: ಡ್ರಗ್ಸ್ ಕೇಸ್: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...