Homeಮುಖಪುಟಬಹುಜನರನ್ನು ಬಾಲಿವುಡ್ ನಿರ್ಲಕ್ಷಿಸಿದೆ, ಶೇ.10-15 ರಷ್ಟಿರುವ ಪ್ರಬಲ ಜಾತಿಗಳ ಕಥೆ ಮಾತ್ರ ಹೇಳಿದೆ: ನೀರಜ್ ಘಯ್ವಾನ್

ಬಹುಜನರನ್ನು ಬಾಲಿವುಡ್ ನಿರ್ಲಕ್ಷಿಸಿದೆ, ಶೇ.10-15 ರಷ್ಟಿರುವ ಪ್ರಬಲ ಜಾತಿಗಳ ಕಥೆ ಮಾತ್ರ ಹೇಳಿದೆ: ನೀರಜ್ ಘಯ್ವಾನ್

- Advertisement -
- Advertisement -

ನೀರಜ್ ಘಯ್ವಾನ್ ಅವರ ಇತ್ತೀಚಿನ ಬಾಲಿವುಡ್ ಚಿತ್ರ ‘ಹೋಮ್‌ಬೌಂಡ್’ ಆಧುನಿಕ ಭಾರತೀಯ ಸಮಾಜದಲ್ಲಿ ಇರುವ ಜಾತಿ ಅಸಮಾನತೆಗಳ ಮೇಲೆ ಬೆಳಕು ಚೆಲ್ಲುತ್ತದೆ. ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮುಂದಿನ ವರ್ಷ ಆಸ್ಕರ್‌ಗೆ ಭಾರತದ ಅಧಿಕೃತ ಪ್ರವೇಶ ಪಡೆದಿದೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಬಾಲಿವುಡ್ ಚಿತ್ರಗಳು ಹೆಚ್ಚಾಗಿ ಮಾಡದ ಮತ್ತು ಹಿಂದುಳಿದವರ ಜೀವನ ಅನುಭವಗಳ ಬಗ್ಗೆ ಮಾತನಾಡುವುದರಿಂದ ಇಂಥ ಚಿತ್ರಗಳ ಸಂಖ್ಯೆ ಕಡಿಮೆ ಎಂದು ನೀರಜ್ ಹೇಳುತ್ತಾರೆ.

ಐಎಂಡಿಬಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ನಡೆದ ಸಂಭಾಷಣೆಯಲ್ಲಿ ಮಾತನಾಡಿದ ನೀರಜ್, ಭಾರತೀಯ ಸಿನಿಮಾದಲ್ಲಿ ಹೆಚ್ಚಿನ ಒಳಗೊಳ್ಳುವಿಕೆಯ ಅಗತ್ಯವನ್ನು ಒತ್ತಿ ಹೇಳಿದರು. “ಸಾಂಪ್ರದಾಯಿಕವಾಗಿ, ಹಿಂದಿ ಸಿನಿಮಾದಲ್ಲಿ, ನಾವು ಕೇವಲ ಶೇ. 10-15 ರಷ್ಟಿರುವ ಜನಸಂಖ್ಯೆಯ ಸುತ್ತ ಸುತ್ತುವ ಕಥೆಗಳನ್ನು ಹೇಳುತ್ತಿದ್ದೇವೆ, ಹೆಚ್ಚಾಗಿ ಮೇಲ್ಜಾತಿಯ ಜನಸಂಖ್ಯೆಗೆ ಸಂಬಂಧಿಸಿದೆ. 100 ವರ್ಷಗಳ ಸಿನಿಮಾದಲ್ಲಿ, ನಾವು ದೇಶದ ಬಹುಸಂಖ್ಯಾತರನ್ನು ಹೆಚ್ಚಾಗಿ ನಿರ್ಲಕ್ಷಿಸಿದ್ದೇವೆ” ಎಂದು ಅವರು ಹೇಳಿದರು.

ಮುಖ್ಯವಾಹಿನಿಯ ಭಾರತೀಯ ಸಿನಿಮಾಗಳಲ್ಲಿ ಕ್ಯಾಮೆರಾ ಮುಂದೆ, ಮತ್ತು ಹಿಂದೆ ದಲಿತ ಧ್ವನಿಗಳು ಹಾಗೂ ಕಥೆಗಾರರ ​​ಕೊರತೆಯ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿದರು. “ಕ್ಯಾಮೆರಾ ಮುಂದೆ ಅಥವಾ ಹಿಂದೆ ದಲಿತ ಅಥವಾ ಬುಡಕಟ್ಟು ಸಮುದಾಯಗಳಿಂದ ಬಂದವರು ಯಾರೂ ಇಲ್ಲ. ಸಮುದಾಯದ ಕೆಲವೇ ಕೆಲವು ಮಾನ್ಯತೆ ಪಡೆದ ಸದಸ್ಯರಲ್ಲಿ ನಾನು ಒಬ್ಬ; ಅದು ಒಂದು ಸ್ಪಷ್ಟ ಸಮಸ್ಯೆ. ಇದಕ್ಕೆ ನಾವು ಪರಿಹಾರ ಹುಡುಕಬೇಕು” ಎಂದು ಅವರು ಹೇಳಿದರು.

ಹೋಮ್‌ಬೌಂಡ್ ಚಿತ್ರದ ಕುರಿತು

ಹೋಮ್‌ಬೌಂಡ್ ಚಿತ್ರದಲ್ಲಿ ಜಾನ್ವಿ ಕಪೂರ್ ಜೊತೆಗೆ ಇಶಾನ್ ಖಟ್ಟರ್ ಮತ್ತು ವಿಶಾಲ್ ಜೆತ್ವಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನ್ಯೂಯಾರ್ಕ್ ಟೈಮ್ಸ್ ಪ್ರಬಂಧವನ್ನು ಆಧರಿಸಿದ ಈ ಚಿತ್ರವು, ತಾವು ಎದುರಿಸುತ್ತಿರುವ ತಾರತಮ್ಯದಿಂದ ತಪ್ಪಿಸಿಕೊಳ್ಳಲು ಪೊಲೀಸರಾಗಲು ಬಯಸುವ ಇಬ್ಬರು ಸ್ನೇಹಿತರ ಕಥೆಯನ್ನು ಹೇಳುತ್ತದೆ. ಒಬ್ಬ ದಲಿತ, ಮತ್ತೋರ್ವ ಮುಸ್ಲಿಂ ಪಾತ್ರಗಳ ಕಥೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ವಲಸೆ ಕಾರ್ಮಿಕರಾಗಿ ಅವರ ಪ್ರಯಾಣವನ್ನು ಕಥೆ ಹೇಳುತ್ತದೆ.

ಕರಣ್ ಜೋಹರ್ ನಿರ್ಮಿಸಿದ ಈ ಚಿತ್ರವನ್ನು ಹಾಲಿವುಡ್ ದಂತಕಥೆ ಮಾರ್ಟಿನ್ ಸ್ಕಾರ್ಸೆಸೆ ಬೆಂಬಲಿಸಿದರು. ಅವರು ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಸೇರಿಕೊಂಡರು. ಹೋಮ್‌ಬೌಂಡ್ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಅನ್ ಸೆರ್ಟೈನ್ ರಿಗಾರ್ಡ್ ವಿಭಾಗದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಆಗಸ್ಟ್ 2025 ರಲ್ಲಿ ಭಾರತದಲ್ಲಿ ಬಿಡುಗಡೆಗೆ ಮೊದಲು ಜಾಗತಿಕವಾಗಿ ಇತರ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಮೆಚ್ಚುಗೆ ಗಳಿಸಿತು.

ಬಿಹಾರದಲ್ಲೂ ಮತಗಳ್ಳತನ ಮಾಡಲು ಎನ್‌ಡಿಎ ಪ್ರಯತ್ನಿಸುತ್ತಿದೆ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...