Homeಮುಖಪುಟಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ಪರ ನಿಂತ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ

ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ಪರ ನಿಂತ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ

ನನಗೆ ಈ ಉದ್ಯಮದಿಂದ ಹೆಸರು, ಖ್ಯಾತಿ, ಗೌರವ ಎಲ್ಲವೂ ಸಿಕ್ಕಿದೆ. ಬಾಲಿವುಡ್ ಯಾವಾಗಲೂ ಉನ್ನತ ಗೌರವ ಸ್ಥಾನದಲ್ಲಿಯೇ ಉಳಿಯಲಿದೆ. ಡ್ರಗ್ಸ್ ಮತ್ತು ಸ್ವಜನ ಪಕ್ಷಪಾತದಂತಹ ಆರೋಪಗಳಿಂದ ಅದನ್ನು ಕೆಳಗಿಳಿಸಲು ಸಾಧ್ಯವಿಲ್ಲ- ಹೇಮಾ ಮಾಲಿನಿ

- Advertisement -
- Advertisement -

ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಬಾಲಿವುಡ್ ಚಿತ್ರ ಉದ್ಯಮದ ಮೇಲೆ ಮಾಡುತ್ತಿರುವ ದಾಳಿ ಮತ್ತು ಆರೋಪಗಳು ನಿಜವಾಗಿಯೂ ನೋವನ್ನುಂಟುಮಾಡುತ್ತಿವೆ ಎಂದು ಬಿಜೆಪಿ ಸಂಸದೆ ಮತ್ತು ಹಿರಿಯ ಬಾಲಿವುಡ್ ನಟಿ ಹೇಮಾ ಮಾಲಿನಿ ವಿಷಾದ ವ್ಯಕ್ತಪಡಿಸಿದರು. “ನನಗೆ ಈ ಉದ್ಯಮದಿಂದ ಹೆಸರು, ಖ್ಯಾತಿ, ಗೌರವ ಎಲ್ಲವೂ ಸಿಕ್ಕಿದೆ. ಬಾಲಿವುಡ್ ಯಾವಾಗಲೂ ಉನ್ನತ ಸ್ಥಾನದಲ್ಲಿಯೇ ಉಳಿಯಲಿದೆ. ಡ್ರಗ್ಸ್ ಮತ್ತು ಸ್ವಜನ ಪಕ್ಷಪಾತದಂತಹ ಆರೋಪಗಳಿಂದ ಅದರ ಗೌರವವನ್ನು ಕೆಳಗಿಳಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ ಮತ್ತು ಮಾದಕವಸ್ತು ಸೇವನೆಗೆ ಸಂಬಂಧಿಸಿದಂತೆ ಬಾಲಿವುಡ್ ಚಲನಚಿತ್ರೋದ್ಯಮವನ್ನು ಕೆಣಕುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಜಯಾ ಬಚ್ಚನ್ ಸಂಸತ್ತಿನಲ್ಲಿ ಹೇಳಿದ ಒಂದು ದಿನದ ನಂತರ ಹೇಮಾ ಮಾಲಿನಿ ಎನ್‌ಡಿಟಿವಿಯೊಂದಿಗಿನ ಸಂದರ್ಶನದಲ್ಲಿ ಈ ಮಾತನ್ನು ಹೇಳಿದರು.

“ಸಿನಿಮಾ ಕ್ಷೇತ್ರದಲ್ಲಿ ಮಾದಕವಸ್ತು ವ್ಯಸನದ ಸಮಸ್ಯೆ ಇದೆ” ಎಂದು ಬಿಜೆಪಿ ಸಂಸದ ಮತ್ತು ನಟ ರವಿ ಕಿಶನ್ ಆರೋಪಿಸಿದ್ದರು. ಇತ್ತೀಚೆಗೆ ಬಾಲಿವುಡ್ ಅನ್ನು ‘ಚರಂಡಿ’ಗೆ ಹೋಲಿಸಿ ಕಂಗನಾ ರಣಾವತ್ ಟೀಕಿಸಿದ್ದರು.

ಇದನ್ನೂ ಓದಿ: ಡ್ರಗ್ಸ್ ಕೇಸ್: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ಇದಕ್ಕೆ ಪ್ರತಿಕ್ರಿಯೆಯಾಗಿ ಜಯಾ ಬಚ್ಚನ್, “ಇದೇ ಕ್ಷೇತ್ರದಲ್ಲಿ ಇದ್ದು, ಹೆಸರು ಮಾಡಿರುವವರೂ ಸಹ ಈಗ ಈ ಕ್ಷೇತ್ರವನ್ನು ಚರಂಡಿ ಎನ್ನುತ್ತಿದ್ದಾರೆ. ಇನ್ನು, ಸಿನಿಮಾ ಕ್ಷೇತ್ರದಿಂದ ಬಂದು ಈಗ ಸಂಸದರಾಗಿರುವವರೊಬ್ಬರು ಇದರ ಬಗ್ಗೆ ಮಾತನಾಡಿದ್ದಾರೆ” ಎಂದು ಯಾರ ಹೆಸರನ್ನೂ ಹೇಳದೇ ತಿರುಗೇಟು ನೀಡಿದ್ದರು.

“ಸಿನಿಮಾ ಕ್ಷೇತ್ರವು ನಿತ್ಯ 5 ಲಕ್ಷ ಜನರಿಗೆ ನೇರ ಉದ್ಯೋಗ ನೀಡುತ್ತಿದೆ. ಪರೋಕ್ಷವಾಗಿ ಸುಮಾರು 50 ಲಕ್ಷ ಜನರಿಗೆ ಉದ್ಯೋಗವನ್ನು ನೀಡಿದೆ. ಈ ಸಾಂಕ್ರಾಮಿಕ ಪಿಡುಗಿನ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಸಂದರ್ಭದಲ್ಲಿ ಜನರ ದಿಕ್ಕುತಪ್ಪಿಸಲು ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಕ್ಷೇತ್ರವನ್ನು ಟೀಕಿಸಲಾಗುತ್ತಿದೆ. ನಮಗೆ ಸರ್ಕಾರದ ಬೆಂಬಲವೂ ಸಿಗುತ್ತಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಹೇಮಾ ಮಾಲಿನಿ, ರಾಜಕೀಯದಲ್ಲಿ ಜಯ ಬಚ್ಚನ್ ಅವರ ಪ್ರತಿಸ್ಪರ್ಧಿಯಾಗಿದ್ದರೂ, ಅವರ ಹೇಳಿಕೆಯನ್ನು ಬೆಂಬಲಿಸಿ, “ಬಾಲಿವುಡ್ ಒಂದು ಸುಂದರವಾದ ಸ್ಥಳ. ಸೃಜನಶೀಲ ಜಗತ್ತು. ಇದು ಕಲೆ ಮತ್ತು ಸಂಸ್ಕೃತಿಯ ಉದ್ಯಮ. ಜನರು ಇದರ ಬಗ್ಗೆ ಕೆಟ್ಟದಾಗಿ ಮಾತನಾಡುವುದನ್ನು, ಡ್ರಗ್ಸ್ ಬಗೆಗಿನ ವಿಷಯಗಳ ಬಗ್ಗೆ ಕೇಳಿದಾಗ ವೈಯಕ್ತಿಕವಾಗಿ ತುಂಬಾ ನೋವುಂಟಾಗುತ್ತದೆ. ಡ್ರಗ್ಸ್ ಜಾಲ ಇಲ್ಲಿ ಬಿಟ್ಟು ಬೇರೆಲ್ಲಿಯೂ ಸಂಭವಿಸುದಿಲ್ಲವೇ? ಕಪ್ಪು ಕಲೆಯಿದ್ದರೆ, ಅದನ್ನು ತೊಳೆಯಿರಿ. ಅದು ಇಲ್ಲವಾಗುತ್ತದೆ. ಬಾಲಿವುಡ್‌ಗೆ ಅಂಟಿರುವ ಡ್ರಗ್ಸ್ ಕಲೆ ಕೂಡಾ ಹಾಗೆಯೇ, ತೊಳೆದರೆ ಹೋಗುತ್ತದೆ” ಎಂದು ಹೇಳಿದರು.

ಮುಂದುವರರಿದು, “ಅನೇಕ ಕಲಾವಿದರು ಉದ್ಯಮವನ್ನು ಕಟ್ಟಲು ತುಂಬಾ ಶ್ರಮಿಸಿದ್ದಾರೆ. ಎಷ್ಟೋ ಕಲಾವಿದರನ್ನು ದೇವರಂತೆ ಆರಾಧಿಸುತ್ತಿದ್ದರು. ರಾಜ್ ಕಪೂರ್, ಧರ್ಮೇಂದ್ರ (ಹೇಮಾ ಮಾಲಿನಿ ಅವರ ಪತಿ), ಅಮಿತ್ ಜೀ ಮುಂತಾದವರುಗಳಿಂದ ಉದ್ಯಮವನ್ನು ಶ್ರೇಷ್ಠ ಮಟ್ಟಕ್ಕೆ ಕೊಂಡೊಯ್ದಿದ್ದರು. ಆದರೆ ಈ ಸಂದರ್ಭದಲ್ಲಿ ಹೀಗೆ ಉದ್ಯಮವನ್ನು ಅಪಹಾಸ್ಯ ಮಾಡುವುದನ್ನು ನಾವು ಸ್ವೀಕರಿಸಲು ಸಾಧ್ಯವಿಲ್ಲ. ಒಂದೆರಡು ಪ್ರಕರಣಗಳನ್ನು ಉಲ್ಲೇಖಿಸಿ ಇಡೀ ಉದ್ಯಮವನ್ನು ದೂಷಿಸುವುದು ಸರಿಯಲ್ಲ. ಇದನ್ನು ಒಪ್ಪಲೂ ಸಾಧ್ಯವಿಲ್ಲ” ಎಂದು ತಮ್ಮ ಅಭಿಪ್ರಾಯ ತಿಳಿಸಿದರು.

ನಟಿ ಮತ್ತು ಸಂಸದೆ ಜಯಾ ಬಚ್ಚನ್ ಅವರನ್ನು ಬೆಂಬಲಿಸಿ ಅಥವಾ ಅವರ ಪರ ನಿಂತು ಹೇಳಿಕೆ ನೀಡುತ್ತಿರುವವರ ಸಾಲಿನಲ್ಲಿ ಈಗ ಹೇಮಾ ಮಾಲಿನಿ ಕೂಡ ಒಬ್ಬರಾಗಿದ್ದಾರೆ.


ಇದನ್ನೂ ಓದಿ: ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...