Homeಮುಖಪುಟಪಶ್ಚಿಮ ಬಂಗಾಳ: ’ಸಚಿವರ ಮೇಲಿನ ಬಾಂಬ್ ದಾಳಿ ಪಿತೂರಿಯ ಭಾಗ’ ಎಂದ ಮಮತಾ

ಪಶ್ಚಿಮ ಬಂಗಾಳ: ’ಸಚಿವರ ಮೇಲಿನ ಬಾಂಬ್ ದಾಳಿ ಪಿತೂರಿಯ ಭಾಗ’ ಎಂದ ಮಮತಾ

- Advertisement -
- Advertisement -

ಪಶ್ಚಿಮ ಬಂಗಾಳ ಕಾರ್ಮಿಕ ಸಚಿವ ಜಾಕೀರ್ ಹುಸೇನ್ ಮೇಲೆ ಬುಧವಾರ (ಫೆ.17) ರಾತ್ರಿ ಕಚ್ಚಾ ಬಾಂಬ್ ದಾಳಿ ನಡೆದಿದ್ದು, ಸಚಿವರು ಗಾಯಗೊಂಡಿದ್ದಾರೆ. ಈ ಬಾಂಬ್ ದಾಳಿ ಪಿತೂರಿಯ ಭಾಗವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯ ನಿಮ್ತಿತಾ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ದಾಳಿ ನಡೆದಿದ್ದು, ಸಚಿವರು ಕೊಲ್ಕತ್ತಾಗೆ ರೈಲು ಹತ್ತಲು ತೆರಳುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್‌ಗಳನ್ನು ಎಸೆದ ಹಿನ್ನೆಲೆಯಲ್ಲಿ ಸಚಿವರು ಗಾಯಗೊಂಡಿದ್ದಾರೆ. ಅವರು ಒಂದು ಕೈ ಮತ್ತು ಕಾಲಿಗೆ ಗಾಯಗಳಾಗಿದ್ದು, ಸದ್ಯ ಜಾಕೀರ್ ಹುಸೇನ್ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ.

ಸಚಿವರ ಮೇಲೆ ಬೇರೆ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಕೆಲವರು ಒತ್ತಡ ಹೇರುತ್ತಿದ್ದರು. ಈ ಪಿತೂರಿಯ ಭಾಗವಾಗಿ ಬಾಂಬ್ ದಾಳಿ ನಡೆದಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಜೊತೆಗೆ ಅಹಿತಕರ ಘಟನೆ ರೈಲ್ವೇ ನಿಲ್ದಾಣದ ಆವರಣದಲ್ಲಿ ನಡೆದಿದ್ದರಿಂದ  ಭಾರತೀಯ ರೈಲ್ವೇ ಇಲಾಖೆ ಘಟನೆಯ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್ ಸ್ಥಳೀಯ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

ಸದ್ಯ ಈ ಪ್ರಕರಣವನ್ನು ಪಶ್ಚಿಮ ಬಂಗಾಳ ಸಿಐಡಿ ವಹಿಸಿಕೊಂಡಿದೆ. ರೈಲ್ವೆ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಅಲ್ಲಿ ತನಿಖೆ ನಡೆಯುತ್ತಿದೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕಾವು ಏರುತ್ತಿರುವಾಗಲೇ ಈ ಅಹಿತಕರ ಘಟನೆ ನಡೆದಿದೆ.

ಬುಧವಾರ (ಫೆ.17) ರಾತ್ರಿ 10 ಗಂಟೆ ಸುಮಾರಿಗೆ ಕೊಲ್ಕತ್ತಾಗೆ ರೈಲು ಹತ್ತಲು ನಿಲ್ದಾಣದಲ್ಲಿ ಕಾಯುತ್ತಿದ್ದ ಕಾರ್ಮಿಕ ಸಚಿವ ಜಾಕೀರ್‌ ಹುಸೇನ್ ಮೇಲೆ ದಾಳಿ ನಡೆದಿದೆ ಎಂದು ಬಂಗಾಳ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

’ಘಟನೆಯಲ್ಲಿ ಸಚಿವ ಜಕೀರ್ ಹುಸೇನ್ ಸೇರಿದಂತೆ ಸುಮಾರು 26 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸ್ ತನಿಖೆ ನಡೆಯುತ್ತಿದೆ. ಘಟನೆಯ ತನಿಖೆಗೆ ಸಿಐಡಿ, ಎಸ್‌ಟಿಎಫ್ ಮತ್ತು ಸಿಐಎಫ್ ಕೂಡ ಸೇರಿಕೊಂಡಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ’ ಎಂದು ಸಚಿವ ಫಿರ್ಹಾದ್ ಹಕೀಮ್ ತಿಳಿಸಿದ್ದಾರೆ.

’ತನಿಖೆಗೆ ರೈಲ್ವೆ ಇಲಾಖೆ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ. ಪಕ್ಷದ ಪರವಾಗಿ, ಅಪರಾಧಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ತರಬೇಕೆಂದು ನಾವು ಬಯಸುತ್ತೇವೆ” ಎಂದು ಫಿರ್ಹಾದ್ ಹಕೀಮ್ ಹೇಳಿದ್ದಾರೆ.


ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ಬೆದರಿಕೆ: ಕುಮಾರಸ್ವಾಮಿ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...