Homeಮುಖಪುಟಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ; ಖಚಿತಪಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ; ಖಚಿತಪಡಿಸಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟವನ್ನು ‘ಬಾಂಬ್ ಸ್ಫೋಟ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಚಿತಪಡಿಸಿದ್ದಾರೆ. ಬೆಂಗಳೂರಿನ ಬ್ರೂಕ್‌ಫೀಲ್ಡ್ ಪ್ರದೇಶದ ಜನಪ್ರಿಯ ಕೆಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಒಂಬತ್ತು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೆಫೆಯೊಳಗೆ ಅನುಮಾನಾಸ್ಪದ ವ್ಯಕ್ತಿಯೊಬ್ಬ ಬ್ಯಾಗ್ ಇಟ್ಟು ಹೋಗಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಬ್ಯಾಗ್‌ನಲ್ಲಿ ಇರಿಸಲಾಗಿದ್ದ ವಸ್ತುವೊಂದು ಸ್ಫೋಟಗೊಂಡಿದ್ದು, ಕೆಫೆಯ ಸುತ್ತಮುತ್ತ ಕಪ್ಪು ಹೊಗೆ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

‘ಇದು ಭಾರೀ ಸ್ಫೋಟಕವಲ್ಲ. ಆದರೆ ಅದನ್ನು ಸುಧಾರಿತಗೊಳಿಸಲಾಗಿದೆ’ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಕೆಫೆಯೊಳಗೆ ಬ್ಯಾಗ್ ಇಟ್ಟ ವ್ಯಕ್ತಿ ಕ್ಯಾಶ್ ಕೌಂಟರ್‌ನಿಂದ ಟೋಕನ್ ತೆಗೆದುಕೊಂಡಿದ್ದಾನೆ. ಕ್ಯಾಷಿಯರ್ ವಿಚಾರಣೆ ನಡೆಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಗಾಯಗೊಂಡವರಲ್ಲಿ ಮೂವರು ಸಿಬ್ಬಂದಿ ಮತ್ತು ಒಬ್ಬ ಗ್ರಾಹಕ ಸೇರಿದ್ದಾರೆ; ಗಾಯಗಳು ಗಂಭೀರವಾಗಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ಗ್ರಾಹಕ ಬಿಟ್ಟು ಹೋಗಿದ್ದ ಬ್ಯಾಗ್‌ನಿಂದ ಸ್ಫೋಟ ಸಂಭವಿಸಿದೆ ಎಂದು ಕೆಫೆ ಮಾಲೀಕರು ತಿಳಿಸಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ‘ಇದು ಬಾಂಬ್ ಸ್ಫೋಟದ ಸ್ಪಷ್ಟ ಪ್ರಕರಣವೆಂದು ತೋರುತ್ತದೆ’  ಸೂರ್ಯ ಹೇಳಿದ್ದಾರೆ.

ಗೃಹ ಸಚಿವ ಡಾ. ಜಿ.ಪರಮೇಶ್ವರ ಕೂಡ ಶೀಘ್ರದಲ್ಲೇ ಸ್ಫೋಟದ ಸ್ಥಳಕ್ಕೆ ಆಗಮಿಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು ಮತ್ತು ಕೆಫೆಯ ಹೊರಗೆ ಹಲವಾರು ಜನರನ್ನು ಸೇರಿದ್ದಾರೆ. ಸ್ಪೋಟ ನಡೆದ ಜಾಗವನ್ನು ಫೋರೆನ್ಸಿಕ್ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.

ಬಾಂಬ್ ನಿಷ್ಕ್ರಿಯ ದಳವೂ ಸ್ಥಳದಲ್ಲಿದ್ದು, ಸ್ಫೋಟದ ಮೊದಲು ಘಟನೆಗಳನ್ನು ಪತ್ತೆಹಚ್ಚಲು ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ; ಮಣಿಪುರ ಗಲಭೆ: ಮಿಲಿಟೆಂಟ್ ಗುಂಪುಗಳೊಂದಿಗಿನ ಒಪ್ಪಂದ ರದ್ದುಗೊಳಿಸುವ ನಿರ್ಣಯ ವಿರೋಧಿಸಿದ ಕುಕಿ ಶಾಸಕರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read