Homeಮುಖಪುಟವಿಮಾನಗಳಿಗೆ ಬಾಂಬ್ ಬೆದರಿಕೆ | ಲಂಡನ್ ಮತ್ತು ಜರ್ಮನಿಯಲ್ಲಿ ದುಷ್ಕರ್ಮಿಗಳು?

ವಿಮಾನಗಳಿಗೆ ಬಾಂಬ್ ಬೆದರಿಕೆ | ಲಂಡನ್ ಮತ್ತು ಜರ್ಮನಿಯಲ್ಲಿ ದುಷ್ಕರ್ಮಿಗಳು?

- Advertisement -
- Advertisement -

ವಿಮಾನಗಳಿಗೆ ಸರಣಿ ಬಾಂಬ್ ಬೆದರಿಕೆಗಳು ಬಂದ ಹಿನ್ನಲೆ ತನಿಖೆ ನಡೆಸಿದ್ದ ಕೇಂದ್ರ ಗುಪ್ತಚರ ಸಂಸ್ಥೆಗಳು, ಬೆದರಿಕೆಗಳು ಲಂಡನ್ ಮತ್ತು ಜರ್ಮನಿಯಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ ಐಪಿ ವಿಳಾಸಗಳಿಂದ ಬಂದಿದೆ ಎಂದು ಪತ್ತೆ ಹಚ್ಚಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವಿಮಾನಗಳಿಗೆ ಬಾಂಬ್ ಬೆದರಿಕೆ

ಈ ವಾರ 20ಕ್ಕೂ ಹೆಚ್ಚು ಆಂತರಿಕ ಮತ್ತು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿವೆ. ಸೋಮವಾರ ಮೂರು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿದ್ದು, ಮಂಗಳವಾರ ಮತ್ತೊಂದು 10 ವಿಮಾನಗಳಿಗೆ ಇದೇ ರೀತಿಯ ಬೆದರಿಕೆಗಳು ಬಂದಿದ್ದವು. ಅದಾಗಿ ಒಂದು ದಿನದ ನಂತರ ಕನಿಷ್ಠ ಆರು ಅಂತಹದ್ದೆ ಬೆದರಿಕೆಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಎಲ್ಲಾ ಬೆದರಿಕೆಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಬಂದಿದ್ದು, ಭದ್ರತಾ ತಪಾಸಣೆಯ ನಂತರ, ಅವುಗಳನ್ನು ಹುಸಿ ಬಾಂಬ್ ಬೆದರಿಕೆ ಎಂದು ಘೋಷಿಸಲಾಗಿದೆ. ಈ ಬಗ್ಗೆ ಕೇಂದ್ರೀಯ ಗುಪ್ತಚರ ಏಜೆನ್ಸಿಗಳು ತನಿಖೆ ನಡೆಸಲು ಪ್ರಾರಂಭಿಸಿದಾಗ, ಮೊದಲಿಗೆ ಎಲ್ಲಾ ಪೋಸ್ಟ್‌ಗಳನ್ನು ರಚಿಸಲಾದ ಐಪಿ ವಿಳಾಸಗಳನ್ನು ಹಂಚಿಕೊಳ್ಳಲು X ಅನ್ನು ಕೇಳಿದ್ದಾರೆ. ಜೊತೆಗೆ ಎಲ್ಲಾ ಖಾತೆಗಳನ್ನು ನಿಷ್ಕ್ರಿಯಗೊಳಿಸಲು ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಮಾನಗಳಿಗೆ ಬಾಂಬ್ ಬೆದರಿಕೆ

“ನಾವು ಪ್ರಾಥಮಿಕ ವರದಿಗಳನ್ನು ಪಡೆದಿದ್ದೇವೆ ಮತ್ತು ಮೂರು ಪ್ರತ್ಯೇಕ ಹ್ಯಾಂಡಲ್‌ಗಳಿಂದ ಈ ಪೋಸ್ಟ್‌ಗಳನ್ನು ಮಾಡಲಾಗಿದೆ ಎಂದು ಅವರು ನಮಗೆ ತಿಳಿಸಿದ್ದಾರೆ. ಈ ಮೂರು ಹ್ಯಾಂಡಲ್‌ಗಳಲ್ಲಿ, ಅವರು ಎರಡು IP ವಿಳಾಸಗಳನ್ನು ಪತ್ತೆಹಚ್ಚಿದ್ದಾರೆ; ಇದು ಲಂಡನ್ ಮತ್ತು ಜರ್ಮನಿಯ ಎರಡು ಸಾಮಾನ್ಯ ಐಪಿಗಳು. ವರ್ಚುವಲ್ ಖಾಸಗಿ ನೆಟ್‌ವರ್ಕ್ (VPN) ಅನ್ನು ಬಳಸಿ ಬಳಕೆದಾರರು ಈ ಟ್ವೀಟ್ ಮಾಡಿದ್ದಾರೆ. ಇನ್ನೊಂದು ಹ್ಯಾಂಡಲ್‌ನ ವಿವರಗಳಿಗಾಗಿ ಇನ್ನೂ ಕಾಯುತ್ತಿದ್ದೇವೆ” ಎಂದು ಮೂಲವೊಂದನ್ನು ಉಲ್ಲೇಖಿಸಿ ಹೇಳಿದ್ದಾರೆ. ಸಾಮಾನ್ಯವಾಗಿ ವಿಪಿಎನ್‌ ಬಳಕೆದಾರರ ಗುರುತು ಮರೆಮಾಚುತ್ತದೆ.

“ಈ ತಿಂಗಳು ಇಲ್ಲಿಯವರೆಗೆ, ವರದಿಯಾದ ಬಾಂಬ್ ಬೆದರಿಕೆಗಳನ್ನು ಒಳಗೊಂಡ ಏಳು ಘಟನೆಗಳಿಗೆ ಐಜಿಐ ವಿಮಾನ ನಿಲ್ದಾಣ ಪೊಲೀಸರು ಪ್ರತಿಕ್ರಿಯಿಸಿದ್ದಾರೆ. ಸಂಪೂರ್ಣ ಪರಿಶೀಲನೆ ಮತ್ತು ತಪಾಸಣೆಯ ನಂತರ, ಎಲ್ಲಾ ಬೆದರಿಕೆಗಳು ಹುಸಿ ಎಂದು ದೃಢಪಡಿಸಲಾಯಿತು. ಬೆದರಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ” ಎಂದು ಉಪ ಪೊಲೀಸ್ ಆಯುಕ್ತ (ಐಜಿಐ ವಿಮಾನ ನಿಲ್ದಾಣ) ಉಷಾ ರಂಗನಾನಿ ಹೇಳಿದ್ದಾರೆ.

ಈ ಮಧ್ಯೆ ನಾಗರಿಕ ವಿಮಾನಯಾನ ಸಚಿವಾಲಯದ (MoCA) ಹಿರಿಯ ಅಧಿಕಾರಿಗಳು, ಇಂತಹ ಬೆದರಿಕೆಗಳ ಹಿಂದೆ ಇರುವವರಿಗೆ, ಭಾರತೀಯ ವಿಮಾನಯಾನ ಸಂಸ್ಥೆಗಳ ವಿಮಾನಗಳಲ್ಲಿ ಹಾರಾಟ ನಿಷೇಧ ಪಟ್ಟಿಗೆ ಸೇರಿಸುವುದು ಸೇರಿದಂತೆ ಕಠಿಣ ಶಿಕ್ಷೆಯನ್ನು ಜಾರಿ ಮಾಡಲು ನಿಯಮಗಳ ನ್ನು ಮತ್ತಷ್ಟು ಬಿಗಿಗೊಳಿಸುವ ಬಗ್ಗೆ ಚಿಂತಿಸುತ್ತಿದ್ದಾರೆ.

ಇದನ್ನೂ ಓದಿ: ಅಸ್ಸಾಂ | ಹಳಿತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ 8 ಬೋಗಿಗಳು!

ಅಸ್ಸಾಂ | ಹಳಿತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ 8 ಬೋಗಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...