ಮದ್ದೂರಿನಲ್ಲಿ ಪ್ರಚೋಧನಕಾರಿ ಭಾಷಣ ಮಾಡಿದ ಬಿಜೆಪಿ ನಾಯಕ ಸಿ.ಟಿ. ರವಿ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಒಂದು ದಿನದ ನಂತರ, ಗುರುವಾರ ಮದ್ದೂರು ಪಟ್ಟಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಮಾಜಿ ಬಿಜೆಪಿ ನಾಯಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇತ್ತೀಚೆಗೆ ನಡೆದ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟದ ಘಟನೆ ವರದಿಯಾದ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಗುರುವಾರ ಮದ್ದೂರು ಪಟ್ಟಣಕ್ಕೆ ಭೇಟಿ ನೀಡಿದ್ದರು. ನಂತರ ಹಿಂದುತ್ವ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಮದ್ದೂರು ಪಿಎಸ್ಐ ಮಂಜುನಾಥ್ ನೀಡಿದ ದೂರಿನ ಆಧಾರದ ಮೇಲೆ, ಶಾಂತಿ ಕದಡುವ ಸಾಧ್ಯತೆ ಇರುವ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಪೊಲೀಸರು ಯತ್ನಾಳ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಈ ಮಧ್ಯೆ, ಕಲ್ಲು ತೂರಾಟದ ಘಟನೆಯು ಮದ್ದೂರು ಪಟ್ಟಣದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದ ನಂತರ ರಾಜ್ಯ ಸರ್ಕಾರ ಗುರುವಾರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ. ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿದೆ. ಆದರೂ, ಅವರ ವರ್ಗಾವಣೆಗೆ ಸರ್ಕಾರ ಯಾವುದೇ ಕಾರಣವನ್ನು ನಿರ್ದಿಷ್ಟಪಡಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ: ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲು


