HomeUncategorizedಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ

ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ

- Advertisement -
- Advertisement -

ಬೆಂಗಳೂರಿನ ವಿವಿಧ ಪ್ರದೇಶಗಳ 15ಕ್ಕೂ ಹೆಚ್ಚು ಶಾಲೆಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಬಸವೇಶ್ವರ ನಗರ, ಸದಾಶಿವನಗರ ಮತ್ತು ಯಲಹಂಕದ ಶಾಲೆಗಳಿಗೆ ಈ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ವರದಿಗಳ ಪ್ರಕಾರ, ಬಸವೇಶ್ವರ ನಗರದ ನ್ಯಾಫಲ್, ಚಿತ್ರಕೂಟ, ಕೌಶಲ್ಯ, ವಿದ್ಯಾಶಿಲ್ಪಿ ಶಾಲೆ, ಚಾಮರಾಜಪೇಟೆ ಭವನ್ ಪ್ರೆಸ್ ಸ್ಕೂಲ್, ಇನ್ವೆಂಚರ್ ಶಾಲೆ, ಸದಾಶಿವನಗರದ ನೀವ್ ಶಾಲೆ, ಅನೇಕಲ್ ಗ್ರೀನ್ ಹುಡ್ ಶಾಲೆ, ಬನ್ನೇರುಘಟ್ಟದ ಗ್ಲೋಬಲ್ ಇಂಟರ್ ನ್ಯಾಷನಲ್ ಶಾಲೆ ಮತ್ತು ಯಲಹಂಕದ ಒಂದು ಶಾಲೆಗೆ ಬೆದರಿಕೆ ಸಂದೇಶ ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಕ್ಕಳನ್ನು ಶಾಲೆಯಿಂದ ಮನೆಗೆ ಕಳುಹಿಸಿದ್ದಾರೆ. ಆತಂಕಗೊಂಡ ಪೋಷಕರು ಶಾಲೆಗೆ ದೌಡಾಯಿಸಿ ತಮ್ಮ ಮಕ್ಕಳನ್ನು ಕರೆದೊಯ್ದಿದ್ದಾರೆ.

ಹುಸಿ ಬಾಂಬ್ ಬೆದರಿಕೆ : ಪೊಲೀಸ್ ಆಯುಕ್ತ

“ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಲಾಗಿದೆ. ನಾವು ಬಾಂಬ್ ನಿಷ್ಕೃಯ ದಳವನ್ನು ಕಳುಹಿಸಿ ಪರಿಶೀಲನೆ ನಡೆಸಿದ್ದೇವೆ. ಆತಂಕಪಡುವ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪಿ. ದಯಾನಂದ ತಿಳಿಸಿದ್ದಾರೆ.

ಮಕ್ಕಳ ಸುರಕ್ಷತೆಯ ಬಗ್ಗೆಆದ್ಯತೆ : ಮಧು ಬಂಗಾರಪ್ಪ

“ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ನಾನು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದೇನೆ. ಮಕ್ಕಳ ಸುರಕ್ಷತೆಯ ಬಗ್ಗೆ ಆದ್ಯತೆ ನೀಡಲಾಗಿದೆ” ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಇದನ್ನೂ ಓದಿ : ಚಿಕ್ಕಮಗಳೂರು: ಯುವ ವಕೀಲನ ಮೇಲೆ ಹಲ್ಲೆ; ಪಿಎಸ್‌ಐ ಸೇರಿ 6 ಪೊಲೀಸರ ಅಮಾನತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಾತಿ, ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಬಿಜೆಪಿ, ಕಾಂಗ್ರೆಸ್‌ಗೆ ಚು.ಆಯೋಗ ಸೂಚನೆ

0
ಜಾತಿ, ಸಮುದಾಯ ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರವನ್ನು ಮಾಡಬೇಡಿ, ರಕ್ಷಣಾ ಪಡೆಗಳನ್ನು ರಾಜಕೀಯಗೊಳಿಸಬೇಡಿ ಎಂದು ಚು.ಆಯೋಗ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಖಡಕ್‌ ಸೂಚನೆಯನ್ನು ನೀಡಿದೆ. ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು...