Homeಕರ್ನಾಟಕಶಾಲೆಗಳಿಗೆ ಬಾಂಬ್ ಬೆದರಿಕೆ: ಸೂಕ್ತ ಭದ್ರತೆ ಒದಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಶಾಲೆಗಳಿಗೆ ಬಾಂಬ್ ಬೆದರಿಕೆ: ಸೂಕ್ತ ಭದ್ರತೆ ಒದಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

- Advertisement -
- Advertisement -

ಬೆಂಗಳೂರು ನಗರದ ವಿವಿಧ ಪ್ರದೇಶಗಳ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇಂದು (ಡಿ.1) ಬಾಂಬ್ ಬೆದರಿಕೆ ಬಂದಿದೆ. ಪೊಲೀಸ್ ಆಯುಕ್ತರು ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಈಗಾಗಲೇ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರದ ಶಾಲೆಗಳು ಮತ್ತು ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

“ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ವಿದ್ವಂಸಕ ಕೃತ್ಯ ನಡೆಸುವುದಾಗಿ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಈಗಾಗಲೇ ಶಾಲೆಗಳಲ್ಲಿ ಪರಿಶೀಲನೆ ನಡೆಸುತ್ತಿವೆ. ಸಾರ್ವಜನಿಕರು ಮತ್ತು ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ. ಈ ಪ್ರಕರಣವನ್ನು ನಮ್ಮ‌ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿ ಶಾಲೆಗಳು ಮತ್ತು ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದ್ದೇನೆ. ನಾಡಿನ ಜನರಿಗೆ ಸುರಕ್ಷಿತ ವಾತಾವರಣ, ನೆಮ್ಮದಿಯ ಬದುಕು ಕಲ್ಪಿಸಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.

“ವಿದ್ವಂಸಕ ಕೃತ್ಯದ ಬೆದರಿಕೆ ಒಡ್ಡಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವುದು, ಸಾರ್ವಜನಿಕರ ನೆಮ್ಮದಿ ಕದಡುವುದು ಇಂತಹಾ ಯಾವುದೇ ದುಷ್ಟ ಆಲೋಚನೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಘಟನೆಯ ಹಿಂದಿರುವ ದುಷ್ಟಶಕ್ತಿಗಳನ್ನು ಆದಷ್ಟು ಬೇಗ ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸುತ್ತೇವೆ” ಎಂದು ಭವರವಸೆ ನೀಡಿದ್ದಾರೆ.

ಬೆಂಗಳೂರಿನ ಬಸವೇಶ್ವರ ನಗರ, ಸದಾಶಿವನಗರ, ಯಲಹಂಕ ಮತ್ತು ಬನ್ನೇರುಘಟ್ಟ ಭಾಗದ ಶಾಲೆಗಳಿಗೆ ಇಂದು ಬೆಳಿಗ್ಗೆ ಈ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಪೊಲೀಸರು ಶಾಲೆಗಳಿಗೆ ತೆರಳಿ ಮಕ್ಕಳನ್ನು ಮನೆಗೆ ಕಳುಹಿಸಿದ್ದಾರೆ. ಶಾಲೆಗಳಿಗೆ ಬಾಂಬ್ ನಿಷ್ಕ್ರಿಯ ದಳ ತೆರಳಿ ಪರಿಶೀಲನೆ ನಡೆಸಿದೆ.

ಇದನ್ನೂ ಓದಿ : ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕದನ ವಿರಾಮ ಒಪ್ಪಿಗೆ ನಡುವೆಯೇ ರಫಾ ಮೇಲೆ ದಾಳಿ ನಡೆಸಿದ ಇಸ್ರೇಲ್: 12 ಪ್ಯಾಲೆಸ್ತೀನಿಯರು...

0
ಒತ್ತೆಯಾಳುಗಳ ಬಿಡುಗಡೆ ಮೂಲಕ ಕದನ ವಿರಾಮಕ್ಕೆ ಹಮಾಸ್ ಒಪ್ಪಿಗೆ ಸೂಚಿಸಿದ ನಡುವೆಯೇ ಇಸ್ರೇಲ್ ತನ್ನ ಆಕ್ರಮಣವನ್ನು ಮುಂದುವರೆಸಿದೆ. ಗಾಝಾದ ದಕ್ಷಿಣ ನಗರವಾದ ರಫಾದ ಮೇಲೆ ಸೋಮವಾರ (ಮೇ 6) ರಾತ್ರಿ ವಾಯುದಾಳಿ ನಡೆಸುವ...