Homeಕರ್ನಾಟಕಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

- Advertisement -
- Advertisement -

“ಅಕ್ರಮವಾಗಿ ಮತದಾರರ ವಿವರಗಳನ್ನು ಸಂಗ್ರಹಿಸಲು ಚಿಲುಮೆ ಎಂಬ ಕಂಪನಿಗೆ ಬಿಬಿಎಂಪಿ ಅವಕಾಶ ಮಾಡಿಕೊಟ್ಟಿದೆ. ಮತದಾರರ ವಿವರಗಳು ಸೋರಿಕೆಯಾಗಿವೆ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಚುನಾವಣೆಗೂ ಮುನ್ನ ನಕಲಿ ಮತದಾರರ ಪಟ್ಟಿ ಪತ್ತೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಸಲುವಾಗಿ ಬಿಬಿಎಂಪಿ ಜವಾಬ್ದಾರಿ ಹೊರಿಸಿದ್ದ ಚಿಲುಮೆ ಕಂಪನಿ ಅಕ್ರಮ ಎಸಗಿದೆ. ಬಿಬಿಎಂಪಿಯನ್ನು ಬಳಸಿಕೊಂಡು ಬಸವರಾಜ ಬೊಮ್ಮಾಯಿಯವರ ಸರ್ಕಾರ ಮತದಾರರ ಡೇಟಾ ಕದ್ದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಚಿವ ಅಶ್ವತ್ಥನಾರಾಯಣ ಅವರ ಸಹಯೋಗ ಹೊಂದಿರುವ ‘ಹೊಂಬಾಳೆ’ ಕಂಪನಿಯ ಒಡೆತನದಲ್ಲಿರುವ ‘ಚಿಲುಮೆ’ ಕಂಪನಿಗೆ ಈ ಜವಾಬ್ದಾರಿ ವಹಿಸುವ ಮೂಲಕ ಬಿಬಿಎಂಪಿ ಕಾನೂನು ಉಲ್ಲಂಘನೆ ಮಾಡಿದೆ” ಎಂದು ಆರೋಪಿಸಿ, ಅದರ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಿದೆ.

ಗುರುವಾರ ಮಧ್ಯಾಹ್ನ ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಮ್ ಅಹ್ಮದ್ ಮತದಾರರ ಪಟ್ಟಿ ಅಕ್ರಮ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್‌ಗೆ ದೂರು ನೀಡಲಿದ್ದಾರೆ.

ಇದಕ್ಕೂ ಮುನ್ನ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಟಿ ನಡೆಸಿದ ಕಾಂಗ್ರೆಸ್ ನಾಯಕರು, ಮತದಾರರ ಪಟ್ಟಿ ವಿಚಾರದಲ್ಲಿ ಬಿಜೆಪಿಯ ಡಾಟಾ ಕಳ್ಳತನದ ಮಾಹಿತಿ ಬಿಡುಗಡೆ ಮಾಡಿದೆ.

“ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮತದಾರರಿಗೆ ಸಂಬಂಧಿಸಿದ ಡೇಟಾವನ್ನು ಕಳ್ಳತನ ಮಾಡಿದೆ. ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ಇದಕ್ಕೆ ಹೊಣೆಯಾಗಿದೆ” ಎಂದಿದ್ದಾರೆ.

‘ಚಿಲುಮೆ’ ಎನ್ನುವ ಖಾಸಗಿ ಸಂಸ್ಥೆ ಮತದಾರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಬಿಬಿಎಂಪಿ ಅನುಮತಿ ಪಡೆದುಕೊಂಡು ಮತದಾರರ ಸೂಕ್ಷ್ಮ ಮಾಹಿತಿ ಸಂಗ್ರಹ ಮಾಡಿದೆ. ‘ಚಿಲುಮೆ’ ಎನ್‌ಜಿಒ ‘ಡಿಜಿಟಲ್ ಸಮೀಕ್ಷಾ’ ಎಂಬ ಮತದಾರರ ಸಮೀಕ್ಷೆ ಆ್ಯಪ್ ಅನ್ನು ಸಹ ನಿರ್ವಹಿಸುತ್ತಿದೆ. ಚುನಾವಣಾ ಆಯೋಗದ ಮತದಾರರ ನೋಂದಣಿ ಅರ್ಜಿಗಳಾದ ‘ಗರುಡ’ ಮತ್ತು ‘ಮತದಾರರ ಸಹಾಯವಾಣಿ’ಗಳ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಬದಲು, ಈ ಸಂಸ್ಥೆ ತಮ್ಮ ಸಿಬ್ಬಂದಿ ಮೂಲಕ ಮತದಾರರ ಧರ್ಮ, ಜಾತಿ, ಮಾತೃ ಭಾಷೆ, ಶಿಕ್ಷಣ, ವೈವಾಹಿಕ ಸ್ಥಿತಿ ಮತ್ತು ರಾಜಕೀಯ ಕುಂದುಕೊರತೆಗಳು ಸೇರಿದಂತೆ ‘ಡಿಜಿಟಲ್ ಸಮೀಕ್ಷಾʼದಲ್ಲಿ ವೈಯಕ್ತಿಕ ಮಾಹಿತಿಯನ್ನೂ ಸಂಗ್ರಹಿಸಿ ಅಪ್ಲೋಡ್ ಮಾಡಿದೆ ಎಂದು ವಿವರಿಸಿದ್ದಾರೆ.

“ಕೃಷ್ಣಪ್ಪ ರವಿಕುಮಾರ್ ಇದರ ಕಿಂಗ್ ಪಿನ್ ಆಗಿದ್ದಾರೆ. ಅವರು ಮಾಜಿ ಡಿಸಿಎಂ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಡಿಎಪಿ ಹೊಂಬಾಳೆ ಪ್ರೈ. ಲಿಮಿಟೆಡ್ ಕೂಡಾ ಇದರಲ್ಲಿ ಭಾಗಿಯಾಗಿದೆ” ಎಂದು ಕಾಂಗ್ರೆಸ್ ನಾಯಕರು ವಿವರಿಸಿದ್ದಾರೆ.

ಏನಿದು ವಿವಾದ?

ಚಿಲುಮೆ ಕಂಪನಿಯು ತಮ್ಮ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ  ಬೆಂಗಳೂರಿನ ಸಾವಿರಾರು ಮತದಾರರ ವೈಯಕ್ತಿಕ ಮಾಹಿತಿಯನ್ನು ರಹಸ್ಯವಾಗಿ ಸಂಗ್ರಹಿಸಿದೆ ಎಂದು ‘ದಿ ನ್ಯೂಸ್‌ ಮಿನಿಟ್‌’ ಮತ್ತು ‘ಪ್ರತಿಧ್ವನಿ’ ಸುದ್ದಿಜಾಲತಾಣಗಳು ತನಿಖಾ ವರದಿ ಪ್ರಕಟಿಸಿವೆ.

“ಮತದಾರರ ಪಟ್ಟಿ ನವೀಕರಣ ಕಾರ್ಯಾಚರಣೆಗೆ ಬಿಬಿಎಂಪಿ ನೀಡಿದ ಆದೇಶವನ್ನು ಎನ್‌ಜಿಒ ದುರುಪಯೋಗ ಮಾಡಿಕೊಂಡಿದ್ದು, ಮತದಾರರಿಗೆ ಅನುಮಾನ ಬರಬಾರದೆಂದು ತನ್ನ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ ಹಲವು ಸೂಕ್ಷ್ಮ ಮಾಹಿತಿಗಳನ್ನು ಸಂಗ್ರಹಿಸಿಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳ ಮೂಗಿನ ನೇರದಲ್ಲಿ ಹಲವು ತಿಂಗಳಿಂದ ಈ ಅಕ್ರಮ ಸರ್ವೆ ನಡೆದಿದೆ” ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಬಿಜೆಪಿ ಸರ್ಕಾರದ ಹೊಸ ವಿವಾದ: ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದಕ್ಕೆ ವಿರೋಧ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಚುನಾವಣಾ ಆಯೋಗದ ವಿಶೇಷ ಮತದಾರರ ಜಾಗೃತಿ ಅಭಿಯಾನವಾದ SVEEP (Systematic Voters Education and Electoral Participation) ಅನ್ನು ನಡೆಸಲು, ‘ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆʼಗೆ ಬಿಬಿಎಂಪಿ ಅನುಮತಿ ನೀಡಿತ್ತು. ಆದರೆ ಚಿಲುಮೆ ಸಂಸ್ಥೆ ಆದೇಶವನ್ನು ದುರುಪಯೋಗಪಡಿಸಿಕೊಂಡಿದ್ದು, ತನ್ನ ನೂರಾರು ಏಜೆಂಟರಿಗೆ ನಕಲಿ ಐಡಿ-ಕಾರ್ಡ್‌ಗಳನ್ನು ನೀಡಿದೆ. ಆ ಐಡಿ ಕಾರ್ಡುಗಳಲ್ಲಿ ತಮ್ಮನ್ನು ಬಿಬಿಎಂಪಿಯ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಎಂದು ಗುರುತಿಸಲಾಗಿದೆ ಎಂದು ತನಿಖಾ ವರದಿ ಬಹಿರಂಗಪಡಿಸಿದೆ.

ಬಿಎಲ್‌ಒ ಒಬ್ಬ ತಳಮಟ್ಟದ ಅಧಿಕಾರಿಯಾಗಿದ್ದು, ಅವರು ಸರ್ಕಾರಿ, ಅರೆ-ಸರ್ಕಾರಿ ಅಥವಾ ನಿವೃತ್ತ ಸರ್ಕಾರಿ ನೌಕರರಾಗಿರಬೇಕು. ಬಿಎಲ್‌ಒಗಳು ತಮ್ಮನ್ನು ನಿಯೋಜಿಸಲಾದ ಮತಗಟ್ಟೆಯ ನಿವಾಸಿಗಳಾಗಿರಬೇಕು. ಆದರೆ, ಚಿಲುಮೆ ತನ್ನ ಏಜೆಂಟರುಗಳಿಗೆ ಬಿಎಲ್‌ಒ ಎಂದು ನಕಲಿ ಗುರುತಿನ ಚೀಟಿ ನೀಡಿ ಫೀಲ್ಡಿಗೆ ಮಾಹಿತಿ ಸಂಗ್ರಹಿಸಲು ಬಿಟ್ಟಿದೆ. ಈ ಏಜೆಂಟ್‌ಗಳು ಮತದಾರರಿಂದ ಅವರ ಜಾತಿ, ಮಾತೃಭಾಷೆ, ವೈವಾಹಿಕ ಸ್ಥಿತಿ, ವಯಸ್ಸು, ಲಿಂಗ, ಉದ್ಯೋಗ ಮತ್ತು ಶಿಕ್ಷಣದ ವಿವರಗಳಂತಹ ವೈಯಕ್ತಿಕ ಮಾಹಿತಿಯನ್ನು ಹಾಗೂ ಆಧಾರ್ ಸಂಖ್ಯೆ, ಫೋನ್ ಸಂಖ್ಯೆ, ವಿಳಾಸ, ಮತದಾರರ ID ಸಂಖ್ಯೆ ಮತ್ತು ಇಮೇಲ್ ವಿಳಾಸದೊಂದಿಗೆ ಸಂಗ್ರಹಿಸಿದ್ದಾರೆ. ಅಲ್ಲದೆ, ಮತದಾರರು ತಮ್ಮ ಚುನಾಯಿತ ಪ್ರತಿನಿಧಿಗಳ ಕಾರ್ಯಕ್ಷಮತೆಯ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ಉತ್ತರವನ್ನೂ ಪಡೆದುಕೊಂಡಿದ್ದಾರೆ ಎಂದು ಈ ತನಿಖಾ ವರದಿಗಳು ಉಲ್ಲೇಖಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...