Homeಮುಖಪುಟಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

ಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

- Advertisement -
- Advertisement -

ಮುಂಬೈ: ಅಪ್ರಾಪ್ತ ಮುಸ್ಲಿಂ ಯುವಕನನ್ನು ಮದುವೆಯಾಗಲು ನಿರ್ಧರಿಸಿದ ಹಿಂದೂ ಯುವತಿಗೆ ತನ್ನದೇ ಆದ ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಪ್ರಸ್ತುತ ಮುಂಬೈನ  ಹಾಸ್ಟೆಲ್ ವೊಂದರಲ್ಲಿ ಇರುವ ಯುವತಿಯನ್ನು ಯಾರೊಬ್ಬರೂ ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ನ್ಯಾಯಾಲಯ ಪ್ರತಿಪಾದಿಸಿದೆ.

ನಾವು ಯುವತಿಯ ಅದೃಷ್ಟವನ್ನು ಮಾತ್ರ ಬಯಸುತ್ತೇವೆ. ನಾವು ಆಕೆಗೆ ಎಲ್ಲಾ ಸ್ವಾತಂತ್ರ್ಯವನ್ನು ನೀಡುತ್ತೇವೆ. ಯುವತಿಯು ಏನು ಮಾಡಬೇಕೆಂದು ಬಯಸುತ್ತಿದ್ದರೋ ಅದನ್ನು ಮಾಡಲಿ ಎಂದು ಎಂದು ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರ ಪೀಠ ಹೇಳಿದೆ.

20 ವರ್ಷದ ಯುವತಿ ಪ್ರಸ್ತುತ ಚೆಂಬೂರಿನ ಸರ್ಕಾರಿ ಮಹಿಳಾ ಕೇಂದ್ರದಲ್ಲಿ (ಹಾಸ್ಟೆಲ್) ನೆಲೆಸಿದ್ದಾಳೆ. ಆಕೆ ತನ್ನ ಮನೆ ತೊರೆದು 19 ವರ್ಷದ ಮುಸ್ಲಿಂ ವ್ಯಕ್ತಿಯೊಂದಿಗೆ ಜೀವನ ನಡೆಸಲು ಪ್ರಾರಂಭಿಸಿದ ನಂತರ ಆಕೆಯ ತಂದೆ ದಾಖಲಿಸಿದ ದೂರಿನ ಮೇರೆಗೆ ನ್ಯಾಯಾಲಯ ಅವಳನ್ನು ಹಾಸ್ಟೆಲ್ ಗೆ ಕಳುಹಿಸಿತ್ತು.

ದೂರಿನ ನಂತರ, ಹುಡುಗಿಯನ್ನು ಠಾಣೆಗೆ ಕರೆಸಲಾಯಿತು. ಅಲ್ಲಿ ಬಜರಂಗದಳದ ಸದಸ್ಯರು ಮತ್ತು ಅವರ ಕುಟುಂಬ ಸದಸ್ಯರು ಹಾಜರಿದ್ದರು. ಪೊಲೀಸ್ ಅಧಿಕಾರಿಗಳು ಅವಳನ್ನು ಬೆದರಿಸಿ ಮತ್ತು ಸಂಬಂಧವನ್ನು ತ್ಯಜಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮುಸ್ಲಿಂ ವ್ಯಕ್ತಿಯ ಅರ್ಜಿಯಲ್ಲಿ ಹೇಳಲಾಗಿದೆ.

ಈ ಒತ್ತಡದ ಹೊರತಾಗಿಯೂ, ಹುಡುಗಿ ಅರ್ಜಿದಾರರನ್ನು ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದಳು ಮತ್ತು ತನ್ನ ಹೆತ್ತವರ ಬಳಿಗೆ ಮರಳಲು ನಿರಾಕರಿಸಿದಳು. ಪರಿಣಾಮವಾಗಿ ಆಕೆಯನ್ನು ಆಶ್ರಯಧಾಮಕ್ಕೆ ಕಳುಹಿಸಲಾಯಿತು.

ನಂತರ ಆ ವ್ಯಕ್ತಿ ಆಕೆಯನ್ನು ಆಶ್ರಯಮನೆಯಿಂದ ಬಿಡುಗಡೆ ಮಾಡುವಂತೆ ಕೋರಿ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ, ಯುವತಿಯ ತಂದೆ, ವಕೀಲ ಸನಾ ರಯೀಸ್ ಖಾನ್ ಮೂಲಕ ಮಗಳನ್ನು ತನ್ನ ಸುಪರ್ದಿಗೆ ನೀಡುವಂತೆ ಕೋರಿದ್ದರು.

ಯುವತಿಯೊಂದಿಗೆ ಮಾತನಾಡಲು ವಕೀಲ ಖಾನ್‌ಗೆ ನ್ಯಾಯಾಲಯ ಅನುಮತಿ ನೀಡಿತು. ಅವರು ಗುರುವಾರ ಮಹಿಳೆಯನ್ನು ಒಂದು ಗಂಟೆ ಭೇಟಿಯಾಗಿ, ಯುವತಿಯು ಸ್ವಲ್ಪ “ವಿಚಿತ್ರವಾಗಿ” ತೋರುತ್ತಿದ್ದರು ಎಂದು ಶುಕ್ರವಾರ ಪೀಠದ ಮುಂದೆ ಖಾನ್ ಹೇಳಿದರು.

ಒಂದು ಹಂತದಲ್ಲಿ, ಅವಳು ತನ್ನ ಹೆತ್ತವರೊಂದಿಗೆ ಇರಲು ಸಿದ್ಧಳಾಗಿದ್ದಾಳೆಂದು ಹೇಳಿದಳು. ನಂತರ ಅವಳು ಅರ್ಜಿದಾರರೊಂದಿಗೆ ಹೋಗಿ ವಾಸಿಸಲು ಬಯಸುವುದಾಗಿ ಹೇಳಿದಳು. ಅವಳ ಕೈಗಳು ನಡುಗುತ್ತಿದ್ದವು ಮತ್ತು ಅವಳು ಸ್ಥಿರವಾಗಿ ಕಾಣಲಿಲ್ಲ. ಅವಳ ಆಯ್ಕೆಯು ಬಾಹ್ಯ ಒತ್ತಡ ಮತ್ತು ಅನಗತ್ಯ ಪ್ರಭಾವದಿಂದ ಮುಕ್ತವಾಗಿಲ್ಲವೆಂದು ತೋರುತ್ತದೆ.  ಇಂತಹ ಸ್ಥಿತಿಯಲ್ಲಿ, ಅವಳು ತಿಳುವಳಿಕೆಯುಳ್ಳ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವಂತೆ ತೋರುತ್ತಿಲ್ಲ ಎಂದು ಖಾನ್ ಪೀಠದ ಮುಂದೆ ಹೇಳಿದರು.

ಅರ್ಜಿದಾರ ಮುಸ್ಲಿಂ ವ್ಯಕ್ತಿಯು 2025ರ ಅಕ್ಟೋಬರ್‌ನಲ್ಲಿ ಮದುವೆಯ ವಯಸ್ಸಿಗೆ ತಲುಪುತ್ತಾನೆ. ಅಲ್ಲಿಯವರೆಗೆ ಅಂದರೆ ಸುಮಾರು  ಎರಡು ವರ್ಷಗಳ ಕಾಲ ಯುವತಿ ಮತ್ತು ಅರ್ಜಿದಾರನು ಕಾಯುವಂತೆ ಖಾನ್ ಸಲಹೆ ನೀಡಿದರು.

ಯುವತಿಯ ತಂದೆಯು ತನ್ನ ಮಗಳಿಗಾಗಿಯ ಬ್ಯೂಟಿ ಸಲೂನ್ ವ್ಯವಹಾರವನ್ನು ಸ್ಥಾಪಿಸಲು ಸಿದ್ಧರಿದ್ದಾರೆ ಮತ್ತು ಈ ಎರಡು ವರ್ಷಗಳವರೆಗೆ ಅರ್ಜಿದಾರರೊಂದಿಗೆ ಯುವತಿಯು ಫೋನ್‌ನಲ್ಲಿ ಮಾತನಾಡಲು ಅನುಮತಿ ನೀಡುತ್ತಾರೆ. ನಂತರ ಯುವತಿಯು ತನ್ನ ಜೀವನದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದು ವಕೀಲರು ಹೇಳಿದರು.

ಇದೀಗ ಅರ್ಜಿದಾರರ ಜೊತೆ ಹೋಗುವ ತನ್ನ ನಿರ್ಧಾರದ ಬಗ್ಗೆ ಯುವತಿ ಅಚಲವಾಗಿದ್ದರೆ, ತಂದೆ ಜೊತೆ ಹೋಗಲು ಯುವತಿ ನಿರಾಕರಿಸುತ್ತಿದ್ದಾರೆ ಎಂದು ಖಾನ್ ಹೇಳಿದರು.

ನಿಸ್ಸಂಶಯವಾಗಿ ಯುವತಿ ವಯಸ್ಕಳಾಗಿರುವುದರಿಂದ, ಯಾರು ಆಕೆಯನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ.ನಾವು ಅವಳ ಸ್ವತಂತ್ರದ ಆಯ್ಕೆಯನ್ನು ಮಾತ್ರ ಬಯಸುತ್ತೇವೆ.  ಯುವತಿಯು ಏನು ಮಾಡಬೇಕೆಂದು ಬಯಸುತ್ತರೋ ಅದನ್ನು ಮಾಡಲಿ ಎಂದು ಪೀಠ ಹೇಳಿದೆ.

ಅರ್ಜಿದಾರನ ವಿವರವನ್ನು ತಾರ್ಕಿಕತೆಯೊಂದಿಗೆ  ನೋಡಿದ ಪೀಠವು ತರುವಾಯ ಅದನ್ನು ಅಂಗೀಕರಿಸಿತು.

ಇದನ್ನೂ ಓದಿ….ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ವಿರುದ್ಧದ ಹೋರಾಟಕ್ಕೆ ರೈತರ ಬೆಂಬಲ: ನವೆಂಬರ್ 26ರಂದು ದೇಶವ್ಯಾಪಿ ಪ್ರತಿಭಟನೆಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಬೆಂಬಲವಾಗಿ ದೇಶಾದ್ಯಂತ ರೈತರನ್ನು ಬೀದಿಗಿಳಿಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಿರ್ಧರಿಸಿದೆ. ಎಸ್‌ಐಆರ್ ಪ್ರಕ್ರಿಯೆಯನ್ನು...

‘ಪ್ರತಿಭಟನೆಗೆ ದ್ವಿಮುಖ ನೀತಿ ಇಲ್ಲ’: ಪ್ರತಿಭಟನಾಕಾರರ ಮೇಲೆ ಪೊಲೀಸರ ಬಲಪ್ರಯೋಗದ ಬಗ್ಗೆ ಸಮಗ್ರ ವರದಿ ಕೇಳಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಮೂಲಭೂತ ಹಕ್ಕು. ದೆಹಲಿಯಲ್ಲಿ ಈ ಹಕ್ಕನ್ನು ಪ್ರತಿಪಾದಿಸಿ, ಬೆಂಗಳೂರಿನಲ್ಲಿ ಅದೇ ಹಕ್ಕನ್ನು ನಿರಾಕರಿಸುವ ದ್ವಿಮುಖ ನೀತಿ ಇರಬಾರದು ಎಂದು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

ವಿಜಯ್ ನೇತೃತ್ವದ ಟಿವಿಕೆ ಸೇರಿದ ಎಐಎಡಿಎಂಕೆ ಶಾಸಕರ ರಾಜೀನಾಮೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಚುನಾವಣೆಯ ಬೆನ್ನಲ್ಲೇ ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ಪಕ್ಷಕ್ಕೆ ರಾಜೀನಾಮೆ ನೀಡಿ, ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಸೇರಿದ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿದ್ಧ ತಮಿಳುನಾಡು...

ದೆಹಲಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ತೀವ್ರ ಹಲ್ಲೆ ನಡೆಸಿದ್ದ ಆರೋಪಿಗೆ 48 ಗಂಟೆಯೊಳಗೆ ಜಾಮೀನು, ಹೂಮಾಲೆ ಹಾಕಿ ಸ್ವಾಗತ!

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ರಕ್ಷಾ ದಳದ ನಾಲ್ವರು ಕಾರ್ಯಕರ್ತರು ಬಿಡುಗಡೆಯಾದ ಬಳಿಕ, ಅವರಲ್ಲಿ ಒಬ್ಬರಿಗೆ ಹೂಮಾಲೆ ಹಾಕಿ, ಹೂವುಗಳನ್ನು ಸುರಿದು...

SC, ST ಮೀಸಲಾತಿ ಹೆಚ್ಚಳ ರದ್ದು | ಸುಪ್ರೀಂ ಕೋರ್ಟ್‌ಗೆ ಹೋಗುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ : ಡಿಸಿಎಂ ಪರಮೇಶ್ವರ್

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು ಸೇರಿದಂತೆ ಮುಂದಿನ ಕಾನೂನಾತ್ಮಕ ಕ್ರಮಗಳ...

ಬೆಂಗಳೂರಿನಲ್ಲಿ SIR ವಿರೋಧಿ ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: “ಶಾಂತಿಯುತ ಹಕ್ಕು ರಕ್ಷಿಸಿ, ಪೊಲೀಸರ ನಡವಳಿಕೆ ಮರುಪರಿಶೀಲಿಸಲಾಗುವುದು” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಕ್ಟೋಬರ್ 12ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಂತಿಯುತ ಮೆರವಣಿಗೆಯ...

SC, ST ಮೀಸಲಾತಿ ಹೆಚ್ಚಳ ರದ್ದು | ಹಿಂದಿನ ಬಿಜೆಪಿ ಸರ್ಕಾರದ ಬೇಜವಾಬ್ದಾರಿತನ ಕಾರಣ; ಡಿಸಿಎಂ ಪರಮೇಶ್ವರ್

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿಯನ್ನು ಶೇಕಡ 50ರ ಮಿತಿಗಿಂತ ಹೆಚ್ಚಿಸುವ ಕಾಯ್ದೆಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ (ಅ.12) ರದ್ದುಗೊಳಿಸಿದೆ. ಈ ಮೀಸಲಾತಿ ಹೆಚ್ಚಳವು 'ಸಾಂವಿಧಾನಿಕವಾಗಿ ಅಸಮ್ಮತ' ಎಂದು...

ದೆಹಲಿ ಪ್ರತಿಭಟನೆ: ಇಂಡಿಯಾ ಬ್ಲಾಕ್ ಸಂಸದರು, ನಾಗರಿಕ ಸಮಾಜ ಮತ್ತು ವಿದ್ಯಾರ್ಥಿ ಸಂಘಟನೆಗಳೊಂದಿಗೆ ರಾಹುಲ್ ಗಾಂಧಿ ಚಹಾ ಕೂಟ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಚುನಾವಣಾ ಅಕ್ರಮಗಳು ಮತ್ತು ‘ಮತ ಚೋರಿ’ ಆರೋಪಗಳ ವಿರುದ್ಧ ದೇಶಾದ್ಯಂತ ವಿರೋಧ ಪಕ್ಷಗಳ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಪ್ರತಿಭಟನೆಯ ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ದೌರ್ಜನ್ಯ : ದೆಹಲಿ ಪೊಲೀಸ್‌ನ ಹಿರಿಯ ಅಧಿಕಾರಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ ಸುಪ್ರೀಂ ಕೋರ್ಟ್

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಮಹಿಳಾ ಪತ್ರಕರ್ತೆಯರ ಮೇಲೆ ನಡೆದ ಹಲ್ಲೆಯ ಕುರಿತು ವಿವರಣೆ ನೀಡಲು ದೆಹಲಿ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರು ವೈಯಕ್ತಿಕವಾಗಿ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಅ.13)...

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ : ರಾಹುಲ್ ಗಾಂಧಿ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು "ಚೋರೋ ಕೆ ಸರ್ದಾರ್" (ಕಳ್ಳರ ಸರದಾರ) ಮತ್ತು "ಕಮಾಂಡರ್-ಇನ್-ಚೀಫ್" (ಕಳ್ಳರ ಸೇನಾಧಿಪತಿ) ಎಂದು ನಿಂದಿಸಿದ್ದಾರೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ, ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ...