Homeಚಳವಳಿವರವರ ರಾವ್ ಮುಂಬೈ ಬಿಟ್ಟು ಹೋಗದಂತೆ ಹೈಕೋರ್ಟ್ ಷರತ್ತು: ವಿಚಾರಣೆಗೆ ಹಾಜರಾಗದ್ದಕ್ಕೆ ಮಧುಗಿರಿ ಕೋರ್ಟ್ ವಾರೆಂಟ್!

ವರವರ ರಾವ್ ಮುಂಬೈ ಬಿಟ್ಟು ಹೋಗದಂತೆ ಹೈಕೋರ್ಟ್ ಷರತ್ತು: ವಿಚಾರಣೆಗೆ ಹಾಜರಾಗದ್ದಕ್ಕೆ ಮಧುಗಿರಿ ಕೋರ್ಟ್ ವಾರೆಂಟ್!

ಮಧುಗಿರಿ ಕೋರ್ಟ್ ವರವರರಾವ್‌ರವರು ಗೈರು ಹಾಜರಾಗಿರುವ ಕಾರಣ ನೀಡಿ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ, ಅವರ ಶ್ಯೂರಿಟಿಯನ್ನು ಮುಟ್ಟುಗೋಲು ಹಾಕಿಕೊಂಡು, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ!

- Advertisement -
- Advertisement -

ಎಲ್ಗರ್‌ ಪರಿಷದ್‌ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಬಂಧಿತರಾಗಿದ್ದ 82 ವರ್ಷದ ಖ್ಯಾತ ಕವಿ, ಹೋರಾಟಗಾರ ವರವರ ರಾವ್‌ ಅವರು ಸದ್ಯ ಷರತ್ತುಬದ್ಧ ವೈದ್ಯಕೀಯ ಜಾಮೀನಿನ ಮೇಲೆ ಮುಂಬೈನಲ್ಲಿದ್ದಾರೆ. ಅವರು ಮುಂಬೈ ಬಿಟ್ಟು ಹೊರಹೋಗಬಾರದು ಎಂಬುದು ಜಾಮೀನಿನ ಪ್ರಮುಖ ಷರತ್ತುಗಳಲ್ಲೊಂದಾಗಿದೆ. ವರವರ ರಾವ್ ಕುಟುಂಬ ಹಣಕಾಸಿನ ಸಮಸ್ಯೆ ಸೇರಿ ಹಲವು ಕಾರಣಗಳನ್ನು ಮುಂದಿಟ್ಟು ಹೈದರಾಬಾದ್‌ಗೆ ಅವರನ್ನು ಕರೆತರಲು ಮನವಿ ಮಾಡಿದರೂ ಬಾಂಬೆ ಹೈಕೋರ್ಟ್ ಅದಕ್ಕೆ ಅವಕಾಶ ನೀಡಿಲ್ಲ. ಇದೇ ಅಕ್ಟೋಬರ್ 28 ರಂದು ಅವರ ಜಾಮೀನು ಮುಂದುವರಿಕೆಯ ಅರ್ಜಿ ವಿಚಾರಣೆಗೆ ಬರಲಿದೆ.

ಇಂತಹ ಸಂದರ್ಭದಲ್ಲಿ ಅವರ ಮೇಲಿರುವ 2005ರ ಮತ್ತೊಂದು ಪ್ರಕರಣದಲ್ಲಿ ಕರ್ನಾಟಕದ ಮಧುಗಿರಿ ಕೋರ್ಟ್ ಅವರಿಗೆ ಸಮನ್ಸ್ ಕಳುಹಿಸಿದೆ. ವರವರರಾವ್‌ರವರು ವಿಚಾರಣೆಗೆ ಪದೇ ಪದೇ ಗೈರು ಹಾಜರಾಗಿರುವ ಕಾರಣ ನೀಡಿ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ, ಅವರ ಶ್ಯೂರಿಟಿಯನ್ನು ಮುಟ್ಟುಗೋಲು ಹಾಕಿಕೊಂಡು, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ!

ಬಾಂಬೆ ಹೈಕೋರ್ಟ್ ವರವರರಾವ್‌ರವರಿಗೆ ಜಾಮೀನು ನೀಡುವಾಗ ಅವರು ಮುಂಬೈ ಬಿಟ್ಟು ಹೊರಹೋಗಬಾರದು ಎಂದು ಷರತ್ತು ವಿಧಿಸಿದೆ. ಆ ಕಾರಣದಿಂದ ಅದೇ ಸಂದರ್ಭದಲ್ಲಿ ಮಧುಗಿರಿ ಕೋರ್ಟ್‌ನಲ್ಲಿ ನಡೆದ ವಿಚಾರಣೆಗೆ ಅವರು ಹಾಜರಾಗಲು ಸಾಧ್ಯವಾಗಿಲ್ಲ. ಹೀಗಿರುವಾಗ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ, ಅವರ ಶ್ಯೂರಿಟಿಯನ್ನು ಮುಟ್ಟಗೋಲು ಹಾಕಿಕೊಂಡು, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲು ಹೇಗೆ ಸಾಧ್ಯ ಎಂಬುದು ಕುಟುಂಬ ಸದಸ್ಯರ ಪ್ರಶ್ನೆಯಾಗಿದೆ.

ಏನಿದು ಪ್ರಕರಣ

2005 ರಲ್ಲಿ ಕರ್ನಾಟಕದ ಚಿಕ್ಕಮಗಳೂರಿನಲ್ಲಿ ನಕ್ಸಲ್ ಮುಖಂಡ ಸಾಕೇತ್ ರಾಜನ್‌ರವರ ಎನ್‌ಕೌಂಟರ್ ಸಂಭವಿಸಿತ್ತು. ಅದನ್ನು ಖಂಡಿಸಿ ಬೆಂಗಳೂರಿನಲ್ಲಿ ಖಂಡನಾ ಸಭೆ ನಡೆಯಿತು. ಅದರಲ್ಲಿ ವರವರರಾವ್ ಮತ್ತು ತೆಲುಗಿನ ಮತ್ತೊಬ್ಬ ಕ್ರಾಂತಿಕಾರಿ ಕವಿ ಗದ್ದರ್‌ರವರು ಭಾಗವಹಿಸಿದ್ದರು. ಆದಾದ ನಂತರ ತುಮಕೂರಿನ ಪಾವಗಡ ತಾಲ್ಲೂಕಿನ ವೆಂಕಟಮ್ಮನಹಳ್ಳಿಯಲ್ಲಿ ನಕ್ಸಲರು ಕೆಎಸ್‌ಆರ್‌ಪಿ ತುಕಡಿ ಮೇಲೆ ದಾಳಿ ಮಾಡಿದ್ದರಿಂದ ಏಳು ಜನ ಪೊಲೀಸರು ಹತ್ಯೆಯಾಗಿದರೆಂಬ ಆರೋಪವಿತ್ತು. ಈ ದಾಳಿಗೆ ವರವರ ರಾವ್ ಮತ್ತು ಗದ್ದರ್‌ರವರು ಬೆಂಗಳೂರಿನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದೆ ಪ್ರೇರಣೆ ಎಂದು ಆರೋಪಿಸಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ವಿಚಿತ್ರವೆಂದರೆ ಈ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದ 22 ಜನರು ಪ್ರಕರಣದಿಂದ ಖುಲಾಸೆಯಾಗಿದ್ದರೂ ವರವರರಾವ್ ಮತ್ತು ಗದ್ದರ್ ಮೇಲಿನ ಪ್ರಕರಣದ ವಿಚಾರಣೆ ನಡೆಯುತ್ತಲೇ ಇದೆ!

ವೈದ್ಯಕೀಯ ಚಿಕಿತ್ಸೆಯ ಕಾರಣದಿಂದಾಗಿ 82 ವರ್ಷ ವಯಸ್ಸಿನ ರಾವ್‌ ಅವರಿಗೆ ಆರು ತಿಂಗಳು ಮಧ್ಯಂತರ ಜಾಮೀನನ್ನು ಫೆ.22ರಂದು ಹೈಕೋರ್ಟ್ ನೀಡಿತ್ತು. ಸೆಪ್ಟೆಂಬರ್‌ 5ರಂದು ನ್ಯಾಯಾಂಗ ಬಂಧನಕ್ಕೆ ಮರಳುವಂತೆ ನಿರ್ಧರಿಸಲಾಗಿತ್ತು. ಆದರೆ ಕೋರ್ಟ್‌ ಸಮಯಾವಕಾಶ ಇಲ್ಲದ ಕಾರಣದಿಂದ ಅಕ್ಟೋಬರ್ 28ರವರೆಗೆ ಅವರ ವೈದ್ಯಕೀಯ ಜಾಮೀನು ಅವಧಿ ವಿಸ್ತರಿಸಲಾಗಿದೆ.


ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...