Homeಮುಖಪುಟಅರ್ನಬ್ ಗೋಸ್ವಾಮಿಗೆ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್

ಅರ್ನಬ್ ಗೋಸ್ವಾಮಿಗೆ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್

ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅರ್ನಾಬ್ ಗೋಸ್ವಾಮಿ, ಅವರ ಪತ್ನಿ, ಮಗ ಮತ್ತು ಇನ್ನಿಬ್ಬರ ವಿರುದ್ಧ ಮುಂಬೈ ಪೊಲೀಸರು ಹೊಸ ಎಫ್‌ಐಆರ್ ದಾಖಲಿಸಿದ್ದಾರೆ

- Advertisement -
- Advertisement -

2018 ರ ಆತ್ಮಹತ್ಯೆ ಪ್ರಕರಣವೊಂದಕ್ಕೆ ಸಂಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಬಾಂಬೆ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆಯಲು ವಿಫಲರಾಗಿದ್ದಾರೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಎಸ್ ಎಸ್ ಶಿಂಧೆ ಮತ್ತು ನ್ಯಾಯಮೂರ್ತಿ ಎಂ ಎಸ್ ಕಾರ್ನಿಕ್ ಅವರ ವಿಭಾಗೀಯ ನ್ಯಾಯಪೀಠ, ಎರಡೂ ಕಡೆಯ ವಿಚಾರಣೆ ನಡೆಸಿ ನಾಳೆ ಸೂಕ್ತ ಆದೇಶ ಹೊರಡಿಸುವುದಾಗಿ ತಿಳಿಸಿದೆ.

ಇದನ್ನೂ ಓದಿ: ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ತಮ್ಮ ವಕೀಲರುಗಳಾದ ಆದಾರ್ ಪೊಂಡ ಹಾಗೂ ಹರೀಶ್ ಸಾಳ್ವೆ ಮೂಲಕ ಅಪೀಲು ಸಲ್ಲಿಸಿರುವ ಅರ್ನಬ್ ತಮ್ಮನ್ನು ಕನಿಷ್ಠ ಜಾಮೀನಿನ ಮೇಲೆ ಬಿಡುಗಡೆಗೊಳಿಸುವಂತೆ ಕೋರಿದ್ದರು. ಈ ನಿರ್ದಿಷ್ಟ ಪ್ರಕರಣವನ್ನು ಎಪ್ರಿಲ್ 2019 ರಲ್ಲಿಯೇ ಮುಚ್ಚಲಾಗಿರುವುದರಿಂದ ಮರು ತನಿಖೆ ನಡೆಸುವುದು ಹಾಗೂ ಬಂಧನ ಅಕ್ರಮವಾಗಿದೆ ಎಂದು ಅವರು ತಿಳಿಸಿದ್ದರು.

ಅರ್ನಬ್ ಪರ ಅಪೀಲನ್ನು ತಿರಸ್ಕರಿಸಿದ ನ್ಯಾಯಾಲಯ, ’ರಾಜ್ಯ ಸರಕಾರ, ಇತರ ಪ್ರತಿವಾದಿಗಳು ಹಾಗೂ ಈ ಪ್ರಕರಣದ ಮಾಹಿತಿದಾರರ (ಅನ್ವಯ್ ನಾಯ್ಕ್ ಅವರ ಪತ್ನಿ ಅಕ್ಷತಾ) ವಾದವನ್ನು ಆಲಿಸದೆ ಅಪೀಲನ್ನು ಮನ್ನಿಸಲು ಸಾಧ್ಯವಿಲ್ಲ. ಅವರಿಗೆ ತಡವಾಗಿ ನೋಟಿಸ್ ಜಾರಿಯಾಗಿರುವುದರಿಂದ ಇಂದು ವಿಚಾರಣೆ ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

2018 ರಲ್ಲಿ ನಡೆದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ನಿನ್ನೆ ಮುಂಜಾನೆ ವಶಕ್ಕೆ ಪಡೆದುಕೊಂಡಿದ್ದರು.

ಜೊತೆಗೆ, ಬಂಧನದ ಸಮಯದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅರ್ನಾಬ್ ಗೋಸ್ವಾಮಿ, ಅವರ ಪತ್ನಿ, ಮಗ ಮತ್ತು ಇನ್ನಿಬ್ಬರ ವಿರುದ್ಧ ಮುಂಬೈ ಪೊಲೀಸರು ಹೊಸ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಅರ್ನಾಬ್ ಬಂಧನ: ಸಾಮಾಜಿಕ ಮಾಧ್ಯಮಗಳಲ್ಲಿ ಭುಗಿಲೆದ್ದ ಪರ-ವಿರೋಧದ ಚರ್ಚೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...