Homeಮುಖಪುಟಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್!

ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್!

- Advertisement -
- Advertisement -

ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧಿತರಾಗಿರುವ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನಿರಾಕರಿಸಿದೆ. ನವೆಂಬರ್‌ 4 ರಂದು ಬಂಧನಕ್ಕೊಳಗಾಗಿದ್ದ ಅರ್ನಬ್ ಜಾಮೀನು ಅರ್ಜಿಯ ವಿಚಾರಣೆಯನ್ನು ಕಳೆದ ಶನಿವಾರ ವಿಚಾರಣೆ ನಡೆಸಿದ್ದ ಬಾಂಬೆ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.

2018 ರಲ್ಲಿ ನಡೆದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ನವೆಂಬರ್ 4 ರಂದು ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿತ್ತು.

ಮಧ್ಯಂತರ ಜಾಮೀನಿನ ಕುರಿತು ತೀರ್ಪು ನೀಡಿದ ಬಾಂಬೆ ಹೈಕೋರ್ಟ್ “ಆರೋಪಿಯು ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಬಹುದು. ಸಂಬಂಧಿತ ನ್ಯಾಯಾಲಯವು ಅರ್ಜಿಯನ್ನು ನಿರ್ದಿಷ್ಟಪಡಿಸಿದ ಸಮಯ ಮಿತಿಯಲ್ಲಿ ((4 ದಿನಗಳು)) ನಿರ್ಧರಿಸುತ್ತದೆ ಎಂದಿದೆ.

ಇದನ್ನೂ ಓದಿ: ಕಾಶ್ಮೀರಿಗಳ 600 ಹೇಬಿಯಸ್ ಕಾರ್ಪಸ್ ವರ್ಷದಿಂದ ಬಾಕಿ, ಅರ್ನಬ್ ಅರ್ಜಿ ಒಂದೇ ದಿನದಲ್ಲಿ ವಿಚಾರಣೆ; ಅನ್ಯಾಯ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...