ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್‌ಗೆ ಬಾಂಬೆ ಹೈಕೋರ್ಟ್ ಬಂಧನದಿಂದ ಭೀತಿಯಿಂದ ಮಧ್ಯಂತರ ರಕ್ಷಣೆ ನೀಡಿದೆ. ಆದರೆ ತಮ್ಮ ಮೇಲೆ ದಾಖಲಾಗಿರುವ ಕೋಮುದ್ವೇಷ ಮತ್ತು ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 8 ರಂದು ಮುಂಬೈ ಪೊಲೀಸರ ಮುಂದೆ ಹಾಜರಾಗುವಂತೆ ಆದೇಶಿಸಿದೆ.
ತಮ್ಮ ವಿರುದ್ಧ ಮುಂಬೈ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಅನ್ನು ರದ್ದುಪಡಿಸುವಂತೆ ಕೋರಿ ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ನಿನ್ನೆ ಬಾಂಬೆ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು. ಕೋಮು ದ್ವೇಷ ಹರಡಲು ಪ್ರಯತ್ನಿಸಿದ್ದಾರೆ ಎಂಬ ಕಾರಣಕ್ಕೆ ಅವರ ಮೇಲೆ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಣಾವತ್‌ಗೊಂದು ಪತ್ರ
ಕಂಗನಾ ರಣಾವತ್ ಮತ್ತು ಅವರ ಸಹೋದರಿ ಮೇಲೆ ದೇಶದ್ರೋಹ ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದ್ದು, ಇವರ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸುವಂತೆ ಬಾಂದ್ರಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿತ್ತು.
ಇದನ್ನೂ ಓದಿ: ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!
“ಈ ಎಫ್ಐಆರ್ ಮತ್ತು ಮ್ಯಾಜಿಸ್ಟ್ರೇಟ್ ನೀಡಿರುವ ಈ ಆದೇಶವನ್ನು ರದ್ದುಗೊಳಿಸುವಂತೆ ಕಂಗನಾ ರಣಾವತ್ ಮತ್ತು ರಂಗೋಲಿ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ” ಎಂದು ಅವರ ವಕೀಲ ರಿಜ್ವಾನ್ ಸಿದ್ದಿಕಿ ಪಿಟಿಐಗೆ ತಿಳಿಸಿದ್ದರು.
ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಅವರ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ನವೆಂಬರ್ 23 ಮತ್ತು 24 ರಂದು ಪೊಲೀಸರ ಮುಂದೆ ಹಾಜರಾಗುವಂತೆ ಕಳೆದ ವಾರವೇ ನೋಟಿಸ್ ನೀಡಲಾಗಿತ್ತು.
ಇದನ್ನೂ ಓದಿ: ಕಂಗನಾ ವಿರುದ್ಧ ಜಾವೇದ್ ದೂರು: ಅದೊಂದು ತೋಳಗಳ ಹಿಂಡು ಎಂದ ನಟಿ!