Homeಮುಖಪುಟಜಾಮೀನು ನಿರಾಕರಿಸುವಾಗ ಹಿಂದಿ ರಾಷ್ಟ್ರೀಯ ಭಾಷೆಯೆಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್: ಸುಪ್ರೀಂ ಮೆಟ್ಟಿಲೇರಿದ ಆರೋಪಿ

ಜಾಮೀನು ನಿರಾಕರಿಸುವಾಗ ಹಿಂದಿ ರಾಷ್ಟ್ರೀಯ ಭಾಷೆಯೆಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್: ಸುಪ್ರೀಂ ಮೆಟ್ಟಿಲೇರಿದ ಆರೋಪಿ

- Advertisement -
- Advertisement -

ಜಾಮೀನು ನಿರಾಕರಿಸುವ ಸಂದರ್ಭದಲ್ಲಿ ಹಿಂದಿಯನ್ನು “ರಾಷ್ಟ್ರೀಯ ಭಾಷೆ” ಎಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೈದರಾಬಾದ್ ನಿವಾಸಿಯೊಬ್ಬರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವ ಪ್ರಸಂಗ ಜರುಗಿದೆ.

ಮುಂಬೈ ಪೊಲೀಸರು ಗಂಗಮ್ ಸುಧೀರ್ ಕುಮಾರ್ ರೆಡ್ಡಿ ಎಂಬ ವ್ಯಕ್ತಿಯನ್ನು ಅವರು ಪ್ರಯಾಣಿಸುತ್ತಿದ್ದ ವಾಹನದಲ್ಲಿ ವಾಣಿಜ್ಯ ಪ್ರಮಾಣದ ಗಾಂಜಾ ಪತ್ತೆಯಾಗಿದೆ ಎಂದು ಆರೋಪಿಸಿ ಜುಲೈ 2019 ರಲ್ಲಿ ಬಂಧಿಸಿದ್ದರು. ಆ ವಾಹನವು ರೆಡ್ಡಿ ಅವರ ಹೆಂಡತಿಗೆ ಸೇರಿದ್ದು ಎನ್ನಲಾಗಿದೆ. ಪೊಲೀಸರು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ ಆಕ್ಟ್ ಸೆಕ್ಷನ್‌ಗಳ ಅಡಿಯಲ್ಲಿ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಕುರಿತು ಜಾಮೀನು ಅರ್ಜಿ ಸಲ್ಲಿಸಿರುವ ರೆಡ್ಡಿ ಪೊಲೀಸರು ತನ್ನ ಬಂಧನಕ್ಕೆ ಕಾರಣಗಳ ಬಗ್ಗೆ ಹಾಗೂ ನನ್ನ  ಶಾಸನಬದ್ಧ ಹಕ್ಕುಗಳ ಬಗ್ಗೆ ಹಿಂದಿಯಲ್ಲಿ ಹೇಳಿದ್ದಾರೆ. ನನಗೆ ಹಿಂದಿ ಬಾರದ ಕಾರಣ ಅದು ಅರ್ಥವಾಗಿಲ್ಲ, ಹಾಗಾಗಿ ಜಾಮೀನು ನೀಡಬೇಕೆಂದು ವಾದಿಸಿದ್ದರು.

ಈ ವಾದಕ್ಕೆ ಪ್ರತಿಕ್ರಿಯೆಯಾಗಿ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಅವರು, ‘ರೆಡ್ಡಿ ಅವರು ಟ್ರಾವೆಲ್ಸ್ ವ್ಯವಹಾರವನ್ನು ಹೊಂದಿದ್ದಾರೆ ಮತ್ತು ಅವರು “ಸ್ಥಳೀಯ ಭಾಷೆಯ ಸ್ಥಳಾಕೃತಿ ಮತ್ತು ಸಂಕೇತಗಳ ಬಗ್ಗೆ ತಿಳಿದಿರಬೇಕು” ಎಂದು ಹೇಳಿ, ರೆಡ್ಡಿಗೆ ಹಿಂದಿ ಗೊತ್ತಿದೆ ಎಂದು ಹೈಕೋರ್ಟ್ ಭಾವಿಸಬಹುದು’ ಎಂದಿದ್ದರು.

“ಅರ್ಜಿದಾರರಿಗೆ ತಮ್ಮ ಹಕ್ಕಿನ ಬಗ್ಗೆ ಹಿಂದಿಯಲ್ಲಿ ತಿಳಿಸಲಾಗಿದೆ, ಅದು ರಾಷ್ಟ್ರೀಯ ಭಾಷೆಯಾಗಿದೆ” ಎಂದು ಜಾಮೀನು ಅರ್ಜಿಯನ್ನು ತಿರಸ್ಕರಿಸುವ ಸಂದರ್ಭದಲ್ಲಿ ನ್ಯಾಯಮೂರ್ತಿ ಸಾಂಬ್ರೆ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ಸಂವಿಧಾನದ ಪ್ರಕಾರ ಭಾರತಕ್ಕೆ ಯಾವುದೇ ರಾಷ್ಟ್ರೀಯ ಭಾಷೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ರೆಡ್ಡಿ ವಾದಿಸಿದ್ದಾರೆ. ಅವರು ಸಂವಿಧಾನದ 345 ನೇ ವಿಧಿಯನ್ನು ಉಲ್ಲೇಖಿಸಿ, ಇದು ಶಾಸಕಾಂಗವು ರಾಜ್ಯದಲ್ಲಿ ಯಾವುದೇ ರಾಜ್ಯ ಭಾಷೆ ಅಥವಾ ಹಿಂದಿಯನ್ನು ಅಧಿಕೃತ ಭಾಷೆಯಾಗಿ ಬಳಸಲು ಅನುಮತಿಸುತ್ತದೆ. ಇಲ್ಲಿ ಹಿಂದಿ ರಾಷ್ಟ್ರ ಭಾಷೆ ಎಂದು ಉಲ್ಲೇಖಿಸಿಲ್ಲ ಎಂದಿದ್ದಾರೆ.

ಸಂವಿಧಾನ ರಚನಾ ಸಭೆಯಲ್ಲಿ ಈ ಬಗ್ಗೆ ತೀವ್ರ ಚರ್ಚೆ ನಡೆದಿದೆ. ನಮ್ಮ ಸಂವಿಧಾನ ರಚನಾಕಾರರು ಹಿಂದಿಯನ್ನು ಹಿಂದಿಯನ್ನು ರಾಷ್ಟ್ರಭಾಷೆಯೆಂದು ಒಪ್ಪಿಕೊಂಡಿಲ್ಲ ಎಂದು ರೆಡ್ಡಿ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.

ಪೊಲೀಸರು ನನಗೆ ತಿಳಿದಿರುವ ರಾಜ್ಯಭಾಷೆಯಲ್ಲಿ ನನ್ನ ಹಕ್ಕುಗಳ ಬಗ್ಗೆ, ನನ್ನ ಮೇಲಿನ ಆರೋಪಗಳ ಬಗ್ಗೆ ತಿಳಿಸಿಲ್ಲ. ಇದು ಸಾಂವಿಧಾನಿಕ ಹಕ್ಕುಗಳ ಗಂಭೀರ ಉಲ್ಲಂಘನೆ ಎಂದು ಆರೋಪಿಸಿದ್ದಾರೆ. ಟ್ರಾವೆಲ್ ಏಜೆನ್ಸಿಯವರು ಸ್ಥಳೀಯ ಭಾಷೆ ತಿಳಿದಿರಬೇಕು ಎಂಬ ಹೈಕೋರ್ಟ್ ಆದೇಶದ ಬಗ್ಗೆ ಮಾತನಾಡಿರುವ ಅವರು, ಸ್ಥಳೀಯ ಭಾಷೆಯಲ್ಲಿ ಸೈನ್‌ಬೋರ್ಡ್‌ಗಳಿಗಿಂತ ನಾನು ಗೂಗಲ್ ನಕ್ಷೆಗಳ ಅಪ್ಲಿಕೇಶನ್ ಅನ್ನು ಅವಲಂಬಿಸಿದ್ದೆ ಎಂದು ಉತ್ತರಿಸಿದ್ದಾರೆ.


ಇದನ್ನೂ ಓದಿ: ರಾಜಧಾನಿಯಲ್ಲಿ ಭೋರ್ಗರೆದ ’ಭೀಮ ಸಾಗರ’: ರ್‍ಯಾಲಿಯನ್ನು ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...