Homeಮುಖಪುಟಇಡಿಗೆ ದಂಡ ವಿಧಿಸಿದ ಬಾಂಬೆ ಹೈಕೋರ್ಟ್ : ನಾಗರಿಕರಿಗೆ ಕಿರುಕುಳ ನೀಡದಂತೆ ಎಚ್ಚರಿಕೆ

ಇಡಿಗೆ ದಂಡ ವಿಧಿಸಿದ ಬಾಂಬೆ ಹೈಕೋರ್ಟ್ : ನಾಗರಿಕರಿಗೆ ಕಿರುಕುಳ ನೀಡದಂತೆ ಎಚ್ಚರಿಕೆ

- Advertisement -
- Advertisement -

ಡೆವಲಪರ್ ಮತ್ತು ಅವರ ವ್ಯವಹಾರದ ಅಕ್ರಮ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ‘ದುರುದ್ದೇಶಪೂರಿತ ಕ್ರಮ’ಕ್ಕಾಗಿ ಬಾಂಬೆ ಹೈಕೋರ್ಟ್ ಮಂಗಳವಾರ (ಜ.22) ಜಾರಿ ನಿರ್ದೇಶನಾಲಯಕ್ಕೆ (ಇಡಿ) 1 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಇಡಿ ಪ್ರಕರಣವನ್ನು ನಿರ್ವಹಿಸಿದ ರೀತಿಗೆ ನ್ಯಾಯಮೂರ್ತಿ ಮಿಲಿಂದ್ ಜಾಧವ್ ಅವರು ತೀವ್ರ ಅಸಮ್ಮತಿ ವ್ಯಕ್ತಪಡಿಸಿದ್ದು, ಇಡಿಯಂತಹ ಸಂಸ್ಥೆಗಳು ಕಾನೂನಿನ ಮಿತಿಯೊಳಗೆ ಕಾರ್ಯನಿರ್ವಹಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ನಾಗರಿಕರಿಗೆ ಕಿರುಕುಳ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಅನಗತ್ಯ ದಬ್ಬಾಳಿಕೆಯನ್ನು ತಪ್ಪಿಸಲು ಸೂಕ್ತ ಪ್ರಕ್ರಿಯೆಯನ್ನು ಅನುಸರಿಸುವಂತೆ ಸೂಚಿಸಿದ್ದಾರೆ.

ಆಗಸ್ಟ್ 2024ರಲ್ಲಿ ಮುಂಬೈ ಮೂಲದ ಡೆವಲಪರ್ ವಿರುದ್ಧ ವಿಶೇಷ ನ್ಯಾಯಾಲಯವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಹೊರಡಿಸಲಾದ ಆದೇಶವನ್ನು ರದ್ದುಗೊಳಿಸುವಾಗ ನ್ಯಾಯಾಲಯವು ಈ ಅವಲೋಕನಗಳನ್ನು ಮಾಡಿದೆ.

2007ರಲ್ಲಿ ದೂರುದಾರರು ಮುಂಬೈನ ಉನ್ನತ ಮಟ್ಟದ ಯೋಜನೆಯಲ್ಲಿ ವಾಣಿಜ್ಯ ಆಸ್ತಿಯನ್ನು ಖರೀದಿಸಲು ಮತ್ತು ಅದನ್ನು ವಸತಿ ಹೋಟೆಲ್/ಅತಿಥಿ ಗೃಹವಾಗಿ ಪರಿವರ್ತಿಸಲು ನವೀಕರಣ ಕಾರ್ಯಕ್ಕಾಗಿ ಡೆವಲಪರ್‌ನೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಾಗ ಪ್ರಕರಣ ಪ್ರಾರಂಭವಾಯಿತು.

ದೂರುದಾರರು ಆಸ್ತಿ ಮತ್ತು ನವೀಕರಣ ಕಾರ್ಯ ಎರಡಕ್ಕೂ ಸೇರಿ ಡೆವಲಪರ್‌ಗೆ 10 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಪಾವತಿಸಿದ್ದರು. ಆದರೆ, ಆಕ್ಯುಪೆನ್ಸಿ ಪ್ರಮಾಣಪತ್ರ (OC)ಪಡೆಯುವಲ್ಲಿನ ಭಾರೀ ವಿಳಂಬವು ಅವರಿಗೆ ನಿರಾಶೆ ಉಂಟು ಮಾಡಿತ್ತು.

ಈ ಸಂಬಂಧ ಅವರು ನೀಡಿದ್ದ ಆರಂಭಿಕ ದೂರುಗಳನ್ನು ಪೊಲೀಸರು ತಿರಸ್ಕರಿದ್ದರು. ಯಾವುದೇ ಗುರುತಿಸಬಹುದಾದ ಅಪರಾಧವಿಲ್ಲ. ಅಲ್ಲದೆ ಇದು ಸಿವಿಲ್ ಸ್ವರೂಪದ ಪ್ರಕರಣವಾಗಿದೆ ಎಂದಿದ್ದರು.

ತನ್ನ ಮೊದಲ ದೂರು ತಿರಸ್ಕೃತಗೊಂಡ ಬಳಿಕ, ಜೂನ್ 2009 ರಲ್ಲಿ ದೂರುದಾರರು ಮಲಾಡ್ ಪೊಲೀಸ್ ಠಾಣೆಗೆ ಎರಡನೇ ದೂರು ನೀಡಿದ್ದರು. ಆದರೆ, ಮತ್ತೊಮ್ಮೆ ದೂರು ತಿರಸ್ಕೃತಗೊಂಡಿತ್ತು. ಈ ಪ್ರಕರಣ ಸಿವಿಲ್ ಸ್ವರೂಪದ್ದಾಗಿದೆ ಎಂದು ಪೊಲೀಸರು ಎರಡನೇ ಬಾರಿಯೂ ಹೇಳಿದ್ದರು.

ನಂತರ ಡಿಸೆಂಬರ್ 2009ರಲ್ಲಿ ದೂರುದಾರರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದ ಆದೇಶದ ನಂತರ ವಿಲೇ ಪಾರ್ಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಈ ಪ್ರಕರಣವು ನಂತರ ಇಡಿಯ ಗಮನ ಸೆಳೆದಿತ್ತು. ಡೆವಲಪರ್ ಹಣ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂದು ಇಡಿ ಆರೋಪಿಸಿತ್ತು.

ಡೆವಲಪರ್‌ಗೆ ಸಂಬಂಧಿತ ಕಂಪನಿಗಳಲ್ಲಿ ಒಂದರಿಂದ ಪಡೆದ ಹಣ ಒಟ್ಟು 4.27 ಕೋಟಿ ರೂಪಾಯಿ ಅಕ್ರಮ ಆದಾಯವಾಗಿದ್ದು, ನವೀಕರಣ ಒಪ್ಪಂದಕ್ಕೆ ಸಂಬಂಧಿಸಿದ ವಂಚನೆ ಚಟುವಟಿಕೆಗಳು ಮತ್ತು ಇದಕ್ಕೆ ಸಂಬಂಧವಿದೆ ಎಂದು ಇಡಿ ಆರೋಪಿಸಿತ್ತು.

ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ, ಡೆವಲಪರ್ ಪರ ವಕೀಲರು ಈ ಪ್ರಕರಣದ ಹಿಂದೆ ಯಾವುದೇ ಕ್ರಿಮಿನಲ್ ಉದ್ದೇಶವಿಲ್ಲ. ಇದೊಂದು ಸಿವಿಲ್ ವಿವಾದ ಎಂದಿದ್ದರು. ಡೆವಲಪರ್ ಯಾವುದೇ ತಪ್ಪು ಮಾಡಿಲ್ಲ ಎಂದು ಪೊಲೀಸರು ಈಗಾಗಲೇ ಹೇಳಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಆದರೂ,ಇಡಿ ಹಣ ವರ್ಗಾವಣೆಯ ತನ್ನ ಆರೋಪಗಳನ್ನು ಮುಂದಿಡುತ್ತಲೇ ಇತ್ತು.

ಈ ಪ್ರಕರಣವನ್ನು ಇಡಿ ನಿರ್ವಹಿಸಿದ ರೀತಿಗೆ ನ್ಯಾಯಮೂರ್ತಿ ಜಾಧವ್ ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿ ವಂಚನೆಯ ಯಾವುದೇ ಅಂಶಗಳು ಕಂಡುಬಂದಿಲ್ಲ ಮತ್ತು ಮುಂಬೈನಲ್ಲಿ ಅಭಿವೃದ್ಧಿ ಯೋಜನೆಗಳು ಸಾಮಾನ್ಯವಾಗಿ ಹೇಗೆ ನಡೆಯುತ್ತವೆಯೋ ಅದಕ್ಕೆ ಅನುಗುಣವಾಗಿ ಡೆವಲಪರ್ ವರ್ತಿಸಿದ್ದಾರೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಇಡಿಯ ಅಸ್ಪಷ್ಟ ಮತ್ತು ಆಧಾರರಹಿತ ಆರೋಪಗಳ ವಿರುದ್ದ ಕಿಡಿಕಾರಿ ದಂಡ ವಿಧಿಸಿದ್ದಾರೆ.

ಕ್ಯಾಂಪಸ್ ನೇಮಕಾತಿಗಳಲ್ಲಿ ಜಾತಿ ತಾರತಮ್ಯ : ಐಐಟಿಗಳು, ಕೇಂದ್ರ ಸರ್ಕಾರಕ್ಕೆ ಎಸ್‌ಸಿ ಆಯೋಗದಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...