Homeರಾಜಕೀಯಬೊಮ್ಮಾಯಿ ಆಡಳಿತ ಕರ್ನಾಟಕವನ್ನು ಸುವರ್ಣ ಯುಗಕ್ಕೆ ಕೊಂಡೊಯ್ಯುತ್ತಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಣ್ಣನೆ

ಬೊಮ್ಮಾಯಿ ಆಡಳಿತ ಕರ್ನಾಟಕವನ್ನು ಸುವರ್ಣ ಯುಗಕ್ಕೆ ಕೊಂಡೊಯ್ಯುತ್ತಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಣ್ಣನೆ

- Advertisement -
- Advertisement -

ಬೊಮ್ಮಾಯಿ ನೇತೃತ್ವದ ಆಡಳಿತವು ಕರ್ನಾಟಕವನ್ನು ಅಭಿವೃದ್ಧಿಯ ಸುವರ್ಣ ಯುಗಕ್ಕೆ ಕೊಂಡೊಯ್ಯುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಭಾನುವಾರ ಹೇಳಿದ್ದಾರೆ. ಅವರು ವಿಜಯನಗರ ಜಿಲ್ಲೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡುತ್ತಿದ್ದರು.

ಸಭೆಯಲ್ಲಿ ಮಾತನಾಡಿದ ನಡ್ಡಾ “ನಾನು ನಿಮಗೆ ಉಪನ್ಯಾಸ ನೀಡಲು ಬಂದಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮತ್ತು ಬಿ ಎಸ್ ಯಡಿಯೂರಪ್ಪನವರ ಕೃಪೆಯಿಂದ ಕರ್ನಾಟಕವು ಅಭಿವೃದ್ಧಿಯ ಸುವರ್ಣ ಯುಗಕ್ಕೆ ಹೋಗುತ್ತದೆ ಎಂದು ಹೇಳಲು ಬಂದಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನರೇಂದ್ರ ಮೋದಿಯಂತಹ ಅಪ್ರತಿಮ ನಾಯಕನಿದ್ದಾಗ ಬಿಜೆಪಿಯಲ್ಲಿ ಕೆಲಸ ಮಾಡುತ್ತಿರುವ ನಾವೆಲ್ಲರೂ ತುಂಬಾ ಅದೃಷ್ಟವಂತರು. ಅವರು ರಾಷ್ಟ್ರೀಯ ನಾಯಕರಷ್ಟೇ ಅಲ್ಲ, ಅಂತರರಾಷ್ಟ್ರೀಯ ವ್ಯಕ್ತಿಯಾಗಿದ್ದಾರೆ. ಬಿಜೆಪಿ ಮಾತ್ರ ರಾಷ್ಟ್ರೀಯ ಪಕ್ಷವಾಗಿದೆ ಮತ್ತು ಉಳಿದೆಲ್ಲವೂ ಕುಟುಂಬ ಪಕ್ಷಗಳು ಮತ್ತು ಯಾವುದೇ ಪಕ್ಷವು ಸಿದ್ಧಾಂತ ಆಧಾರಿತ ಪಕ್ಷವಲ್ಲ” ಎಂದು ನಡ್ಡಾ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಸುವರ್ಣ ಯುಗ ಅಂದರೆ ಇದೆ ಅಂತಲ್ಲಾ..

“ಜನರ ಬದುಕನ್ನು ಬದಲಾಯಿಸಲು ತಾವು ಏನು ಮಾಡಲಿದ್ದೇವೆ ಎಂಬುದರ ಕುರಿತು ಮುಂದೆ ಬಂದು ಮಾತನಾಡುವ ಯಾವುದೇ ನಾಯಕ ಕಾಂಗ್ರೆಸ್ ಅಥವಾ ಯಾವುದೇ ಪ್ರಾದೇಶಿಕ ಪಕ್ಷದಲ್ಲಿ ಇಲ್ಲ. ಅವರು ಜಾತಿ, ಪ್ರಾದೇಶಿಕತೆ ಮತ್ತು ಭಾಷಾ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾರೆ. ವಿಭಜನೆಯನ್ನು ಉಂಟುಮಾಡುವ ಬಗ್ಗೆ ಮಾತನಾಡುತ್ತಾರೆ. ಆದರೆ ಬಡವರ ಕಣ್ಣೀರು ಒರೆಸಲು ಅವರು ಎರಡು ಪದಗಳನ್ನು ಹೇಳುವುದಿಲ್ಲ” ಎಂದು ಬಿಜೆಪಿ ಅಧ್ಯಕ್ಷ ನಡ್ಡಾ ತಿಳಿಸಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪುನರಾವರ್ತಿತ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದಲ್ಲಿ ಬಿಜೆಪಿಯ ಕಾರ್ಯಚಟುವಟಿಕೆಯಿಂದ ನನಗೆ ಸಂತೋಷವಾಗಿದೆ. ಸರ್ಕಾರ ಪುನರಾವರ್ತನೆ ಆಗುವ ಹಾಗೆ ನೀವು ಸಂಪೂರ್ಣ ಶಕ್ತಿಯೊಂದಿಗೆ ಹೋರಾಡುತ್ತೀರಿ ಎಂಬ ಸಂಪೂರ್ಣ ವಿಶ್ವಾಸವಿದೆ” ಎಂದು ನಡ್ಡಾ ಹೇಳಿದ್ದಾರೆ.

ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಮುಗಿದ ಬಳಿಕ ರಾಜ್ಯದ ಸರ್ಕಾರದಲ್ಲಿ ಬದಲಾವಣೆ ಆಗಲಿದೆ ಎಂಬ ಊಹಾಪೋಹ ಎದ್ದಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ಕುರ್ಚಿಯ ಮೇಲೆ ಹಲವಾರು ತಿಂಗಳುಗಳಿಂದ ತೂಗುಗತ್ತಿ ತೂಗಾಡುತ್ತಿದೆ. ಸಚಿವ ಸಂಪುಟ ಬದಲಾವಣೆ ಕುರಿತು ಮಾತುಕತೆಗಾಗಿ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಬೊಮ್ಮಾಯಿ ಅವರಿಗೆ ಬಿಜೆಪಿ ನಾಯಕತ್ವದಿಂದ ಅನುಕೂಲಕರ ಪ್ರತಿಕ್ರಿಯೆ ಸಿಕ್ಕಿರಲಿಲ್ಲ.

ಇದನ್ನೂ ಓದಿ: ಕತ್ತಿಯ ಅಲಗಿನ ಮೇಲೆ; ಕರ್ನಾಟಕದಲ್ಲಿ ವಸ್ತು-ವಿಷಯಗಳು, ಆಕ್ಷೇಪಗಳು ಮತ್ತು ಉದ್ದೇಶಗಳು 

ಈ ಭೇಟಿಯ ವೇಳೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಬೊಮ್ಮಾಯಿ ಅವರಿಗೆ ಸಾಧ್ಯವಾಗಿರಲಿಲ್ಲ. ಬೊಮ್ಮಾಯಿ ದೆಹಲಿಯನ್ನು ತೊರೆದ ಕೆಲವು ಗಂಟೆಗಳ ನಂತರ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರು ಅಮಿತ್‌ ಶಾ ಅವರನ್ನು ಭೇಟಿಯಾದ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಕರ್ನಾಟಕದ ಉಸ್ತುವಾರಿ ಹೊಂದಿರುವ ಕೇಂದ್ರ ಬಿಜೆಪಿ ನಾಯಕ ಅರುಣ್ ಸಿಂಗ್ ಅವರು, ಬೊಮ್ಮಾಯಿ ಸಾಮಾನ್ಯ ಮನುಷ್ಯ ಮತ್ತು ಸರಳ ವ್ಯಕ್ತಿ ಎಂದು ಶನಿವಾರ ಬಣ್ಣಿಸಿದ್ದಾರೆ.

ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸಚಿವ ಸ್ಥಾನವೂ ಕೈತಪ್ಪಲಿದೆ ಎಂಬ ಊಹಾಪೋಹವಿದೆ. ಗೃಹ ಸಚಿವರ ಕಾರ್ಯವೈಖರಿ ಬಗ್ಗೆ ಬಿಜೆಪಿಯಲ್ಲಿ ಅಸಮಾಧಾನ ಇದೆ ಎಂಬ ಸೂಚನೆಯಾಗಿ, ಸಚಿವ ಸ್ಥಾನದ ಆಕಾಂಕ್ಷಿ ಹಿರಿಯ ಶಾಸಕ ಬಸವರಾಜ ಪಾಟೀಲ ಯತ್ನಾಳ್ ಅವರು, ಜ್ಞಾನೇಂದ್ರ ಅವರು ಒಳ್ಳೆಯ ವ್ಯಕ್ತಿ, ಆದರೆ ಸಚಿವ ಸ್ಥಾನಕ್ಕೆ ಸೂಕ್ತವಲ್ಲ ಎಂದು ಕಳೆದವರ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ ಆಕ್ರೋಶ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುಂಚೆ ಬಲಪಂಥೀಯ ಯುವ ನಾಯಕನನ್ನು ಗೃಹ ಸಚಿವರನ್ನಾಗಿ ಮಾಡಲು ಬಿಜೆಪಿ ಪ್ರಯತ್ನಿಸಲಿದೆ ಎಂಬ ಮಾತುಗಳೂ ಬಿಜೆಪಿ ವಲಯದಲ್ಲಿ ಕೇಳಿ ಬಂದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...