Homeಮುಖಪುಟರಾಜ್ಯದಲ್ಲಿ ಕೃಷಿ ಕಾಯ್ದೆಗಳ ವಾಪಸಾತಿ ಕುರಿತು ರೈತರೊಂದಿಗೆ ಮಾತುಕತೆಗೆ ಸಿದ್ದ - ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಕೃಷಿ ಕಾಯ್ದೆಗಳ ವಾಪಸಾತಿ ಕುರಿತು ರೈತರೊಂದಿಗೆ ಮಾತುಕತೆಗೆ ಸಿದ್ದ – ಬಸವರಾಜ ಬೊಮ್ಮಾಯಿ

- Advertisement -
- Advertisement -

ರೈತರ ಎಲ್ಲಾ ಬೇಡಿಕೆಗಳ ಬಗ್ಗೆ ಅವರೊಂದಿಗೆ ಮಾತನಾಡಲು ನಾವು ಸಿದ್ದರಿದ್ದೇವೆ ಎಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದಲ್ಲಿ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಯಾವುದೇ ಭರವಸೆ ನೀಡಿಲ್ಲ.

ಇಂದು ಬೆಳಿಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಾರ್ವಜನಿಕ ಹಿತಾಸಕ್ತಿ ಇದ್ದರೆ ಕೃಷಿ ಕಾನೂನುಗಳು ಮತ್ತು ಇತರ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾವು ರೈತರೊಂದಿಗೆ ಮಾತನಾಡಲು ಮುಕ್ತರಾಗಿದ್ದೇವೆ. ಅವರು ಏನ್ನನ್ನು ಬಯಸುತ್ತಾರೆ ಎಂಬುದನ್ನು ನಾವು ಆಲಿಸಿ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.

‘ಚಳಿಗಾಲದ ಅಧಿವೇಶನವನ್ನು ಫಲಪ್ರದವಾಗಿ ನಡೆಸಲು ನಾವು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಕೆಲವು ಮಸೂದೆಗಳನ್ನು ಅಂಗೀಕರಿಸಲು, ಅಧಿವೇಶನದಲ್ಲಿ ಚರ್ಚಿಸಲು ನಾವು ಸಿದ್ಧರಿದ್ದೇವೆ. ಪ್ರತಿಪಕ್ಷಗಳ ಎಲ್ಲಾ ಪ್ರಶ್ನೆಗಳನ್ನು ಎದುರಿಸಲು ನಾವು ಸಿದ್ಧರಿದ್ದೇವೆ. ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಕೆಲವು ದೀರ್ಘಾವಧಿಯ ಬೇಡಿಕೆಗಳನ್ನು ಪರಿಹರಿಸಲು ನಾವು ಸಿದ್ದರಿದ್ದೇವೆ’ ಎಂದು ತಿಳಿಸಿದರು.

ರೈತರಿಗೆ ಅತಿವೃಷ್ಟಿ ಪರಿಹಾರ ಪಾವತಿ ವಿಳಂಬದ ಕುರಿತು ಕೇಳಿದ ಪ್ರಶ್ನೆಗೆ ಸದನದ ವೇದಿಕೆಯಲ್ಲಿ ಉತ್ತರ ನೀಡಲಾಗುವುದು ಎಂದರು. ‘ವಿರೋಧ ಪಕ್ಷದ ನಾಯಕರಿಗೆ ಇಂತಹ ಸಮಸ್ಯೆಗಳನ್ನು ಎತ್ತಲು ಹಲವಾರು ಅವಕಾಶಗಳಿವೆ. ನಾವು ಅವರಿಗೆ ಉತ್ತರಿಸುತ್ತೇವೆ. ಸದನ ನಡೆಯುತ್ತಿರುವಾಗ ಇಂತಹ ಪ್ರಶ್ನೆಗಳಿಗೆ ಉತ್ತರಿಸುವುದು ಸರಿಯಲ್ಲ’ ಎಂದರು.

ಮತಾಂತರ ನಿಷೇಧ ಕಾಯ್ದೆ ಕುರಿತು ಕೇಳಲಾದ ಪ್ರಶ್ನೆಗೆ “ಮತಾಂತರ ಕಾಯ್ದೆ ಕಾನೂನು ಇಲಾಖೆಯ ಪರಿಶೀಲನಾ ಸಮಿತಿಯಲ್ಲಿದ್ದು, ಒಪ್ಪಿಗೆಯಾಗಿ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಬೇಕು. ನಂತರ ಸದನದಲ್ಲಿ ಮಂಡಿಸಲಾಗುವುದು ಎಂದರು.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳು ಮತ್ತು ಸೂಚನೆಗೆ ಅನುಗುಣವಾಗಿ ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದೆ. ಆದರೆ ರೈತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಆದರೆ ರಾಜ್ಯ ಸರ್ಕಾರದ ತಿದ್ದುಪಡಿಗಳನ್ನು ಇನ್ನು ವಾಪಸ್ ಪಡೆದಿಲ್ಲ. ಹಾಗಾಗಿ ರೈತರು ನಿನ್ನೆಯಿಂದ ಪ್ರತಿಭಟನೆ ಆರಂಭಿಸಿದ್ದಾರೆ.


ಇದನ್ನೂ ಓದಿ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿರುವ ಮಾಜಿ ಶಾಸಕ ಕೋನರೆಡ್ಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...