ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ದಿನಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಪಂಡಿತ್ ಜವಹರಲಾಲ್ ನೆಹರೂ ಅವರ ಫೋಟೊ ಮತ್ತು ಪರಿಚಯ ಕೈಬಿಟ್ಟಿರುವುದಕ್ಕೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
“ಸನ್ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿಯವರೇ ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿ @BSBommai ಅವರೇ ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?
1/7 pic.twitter.com/9pfTJgpOJK— Siddaramaiah (@siddaramaiah) August 14, 2022
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಪಂಡಿತ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ. ಆರ್ ಎಸ್ ಎಸ್ ಕೋಮುರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇಧಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ಜವಾಹರಲಾಲ್ ನೆಹರೂ ಅವರ ಬಗ್ಗೆ ಆರ್ ಎಸ್ ಎಸ್ ಅಲರ್ಜಿಯನ್ನು ಅರ್ಥಮಾಡಿಕೊಳ್ಳಬಹುದು, ನಿಮಗೇನಾಗಿದೆ” ಎಂದಿದ್ದಾರೆ.
ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ವಿ.ಡಿ.ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ. ಬ್ರಿಟಿಷರ ಕ್ಷಮೆ ಕೇಳಿ ಜೈಲಿನಿಂದ ಬಿಡುಗಡೆಗೊಂಡ ವಿ.ಡಿ.ಸಾವರ್ಕರ್ ಅವರಿಗೆ ಮೊದಲ ಸಾಲಿನ ಗೌರವ, ಸ್ವಾತಂತ್ರ್ಯ ಹೋರಾಟದ ಜೊತೆ ಬಹುಜನ ಸಮಾಜದ ಹಿತಾಸಕ್ತಿಯ ರಕ್ಷಣೆಗಾಗಿಯೂ ಹೋರಾಟ ನಡೆಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ. ‘ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ಪಂಡಿತ ಜವಾಹರಲಾಲ ನೆಹರೂ ಅವರಿಗೆ ಮಾಡಿರುವ ಅವಮಾನವನ್ನು ಸಹಿಸಲಾಗದು. ಈ ಅವಮಾನಕ್ಕಾಗಿ ಮೊದಲು ರಾಜ್ಯದ ಜನತೆಯ ಕ್ಷಮೆ ಕೇಳಿ ಎಂದು ಆಗ್ರಹಿಸಿದ್ದಾರೆ.
ಸಂಸದರು ಮತ್ತು ಕಾಂಗ್ರೆಸ್ ಕಾರ್ಯದರ್ಶಿಗಳಾದ ಜೈರಾಂ ರಮೇಶ್ ಕೂಡ ಬೊಮ್ಮಾಯಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. “ಇಂತಹ ಸಣ್ಣತನಗಳ ಹೊರತಾಗಿಯೂ ನೆಹರು ನಮ್ಮೆಲ್ಲರ ಮನದಲ್ಲಿ ಉಳಿಯುತ್ತಾರೆ. ತಮ್ಮ ಕುರ್ಚಿ ಉಳಿಸಿಕೊಳ್ಳಲು ಹತಾಶರಾಗಿರುವ ಸಿಎಂ ಬೊಮ್ಮಾಯಿಯವರು ಅವರ ತಂದೆ ಎಸ್.ಆರ್. ಬೊಮ್ಮಾಯಿ ಮತ್ತು ಅವರ ತಂದೆಯ ಮೊದಲನೆ ರಾಜಕೀಯ ಗುರು ಎಂ.ಎನ್. ರಾಯ್‌ರಿಗೆ ಅವಮಾನವೆಸಗಿದ್ದಾರೆ. ಏಕೆಂದರೆ ಆ ಇಬ್ಬರೂ ಮಹಾನ್ ನೆಹರೂ ಅಭಿಮಾನಿಗಳು, ನಂತರ ಸ್ನೇಹಿತರೂ ಆಗಿದ್ದರು. ಕರುಣಾಜನಕ ಸ್ಥಿತಿ ಇದು” ಎಂದು ಟ್ವೀಟ್ ಮಾಡಿದ್ದಾರೆ.
Nehru will survive such pettiness. CM Karnataka desperate to save his job knows what he has done is an insult to his father S.R. Bommai & his father's 1st political guru M.N. Roy both great Nehru admirers, the latter being a friend as well. Pathetic this is. https://t.co/adpkSBVyoU
— Jairam Ramesh (@Jairam_Ramesh) August 14, 2022
ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಫೋಟೋ- ಪರಿಚಯ ಕಿತ್ತೆಸೆದ ಬಿಜೆಪಿ ಸರ್ಕಾರ; ಜನಾಕ್ರೋಶ



ಬಾವುಟ ರಾಜಕೀಯ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಾಯಕರ ವಿಷಯದಲ್ಲಿ ಕೂಡಾ ತಾರತಮ್ಯ ಮಾಡುವ ಕುತ್ಸಿತ ಮಟ್ಟಕ್ಕೆ ಹೋಗಬಹುದು ಎಂಬ ಅನುಮಾನ ಇಂದಿನ ಪ್ರಜಾವಾಣಿ ಮುಖಪುಟ ನೋಡಿದಾಗ ನಿಜಾವಾಯ್ತು. ಇದು ಅತ್ಯಂತ ದುಃಖದ ಮತ್ತು ತಲೆ ತಗ್ಗಿಸುವ ಕ್ರಿಯೆ!
75 ne swatantrana sambramadalli ee BJP galu ee deshada modala pradaniyennu maretu rajakiya madiruvudakke deshada janara dikkara vide, avarige nachike aagabeku
ಈ ರೀತಿಯ ಮನಸ್ಥಿತಿ ನಮ್ಮ ರಾಜಕೀಯ ನಾಯಕರ ವ್ಯಕ್ತಿತ್ವದ ಅಂಧ ಪತನಕ್ಕೆ ಸಾಕ್ಷಿಯಾಗಿದೆ.
ಖುರ್ಚಿಯ ಆಸೆಗಾಗಿ ಬೊಮ್ಮಯಿಯವರು ತೋರುತ್ತಿರುವ ಭಂಗಿ ಅಚ್ಚರಿಯುತ್ತಿಸುತ್ತದೆ.
ರಾಜಕೀಯ ಜೀವನದ ನಂತರದ ದಿನಗಳಲ್ಲಿ ಬೊ ಮ್ಮಾಯಿಯವರು ಪಶ್ಚಾತ್ತಾಪ ಪಡುವ ಅನಿವಾರ್ಯತೆ ಸೃಷ್ಟಿಯಾಗಿದೆ