Homeಮುಖಪುಟರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಪ್ರಮಾಣವಚನ; ನಂತರ ಅವರು ಹೇಳಿದ್ದೇನು?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಪ್ರಮಾಣವಚನ; ನಂತರ ಅವರು ಹೇಳಿದ್ದೇನು?

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ!

- Advertisement -
- Advertisement -

ರಾಜಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಎಸ್.ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಅವರಿಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್‌ ಪ್ರತಿಜ್ಞಾ ವಿಧಿ ಬೋಧಿಸಿದರು. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಾರಂಭದಲ್ಲಿದ್ದು, ನೂತನ ಮುಖ್ಯಮಂತ್ರಿಗೆ ಶುಭಕೋರಿದರು.

ಪ್ರತಿಜ್ಞಾ ವಿಧಿಗೂ ಮೊದಲು ಬೆಂಗಳೂರಿನ ದೇವಾಲಯವೊಂದಕ್ಕೆ ತೆರಳಿ ಪೂಜೆ ಸಲ್ಲಿಸಿದ ಅವರು, ನಂತರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆಗೆ ತೆರಳಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಬಸವರಾಜ ಬೊಮ್ಮಾಯಿ ಅವರ ಬೆನ್ನು ತಟ್ಟಿ ಶುಭ ಹಾರೈಸಿದರು.

ಇದನ್ನೂ ಓದಿ: ‘ಯಡಿಯೂರಪ್ಪ ಕಿಂಗ್ ಮೇಕರ್‌’ ಎಂದ ರೇಣುಕಾಚಾರ್ಯ!

ಪ್ರಮಾಣ ವಚನ ಸ್ವೀಕರಿಸಿ ಕಡತಗಳಿಗೆ ಸಹಿ ಮಾಡಿದ ನಂತರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌‌ ಹೂಗುಚ್ಛ ನೀಡಿ ಅವರನ್ನು ಅಭಿನಂದಿಸಿದರು. ಇದರ ನಂತರ ಸಭೆಯಲ್ಲಿ ಉಪಸ್ಥಿತರಿದ್ದ ಹಲವಾರು ಗಣ್ಯರು ಅವರನ್ನು ಅಭಿನಂದಿಸಿದರು.

ಸಮಾರಂಭದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಒಕ್ಕೂಟ ಸರ್ಕಾರದ ಸಚಿವ ಧರ್ಮೇಂದ್ರ ಪ್ರಧಾನ್, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಕೋಟ‌ ಶ್ರೀನಿವಾಸ ಪೂಜಾರಿ, ಎಸ್.ಟಿ. ಸೋಮಶೇಖರ್, ಶಿವರಾಂ ಹೆಬ್ಬಾರ್, ಡಾ.ಕೆ. ಸುಧಾಕರ್, ಬೈರತಿ ಬಸವರಾಜ,‌ ಎಸ್. ಸುರೇಶ್ ಕುಮಾರ್, ವಿ. ಸೋಮಣ್ಣ, ಕೆ.ಸಿ. ನಾರಾಯಣ ಗೌಡ, ಎಂ.ಟಿ.ಬಿ. ನಾಗರಾಜ್ ಸೇರಿದಂತೆ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಹಲವರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಅಲ್ಲದೆ ಬೊಮ್ಮಾಯಿ ಅವರ ಕುಟುಂಬ ಸದಸ್ಯರು ಕೂಡಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, “ಸವಾಲುಗಳು ನನ್ನ ಮುಂದಿವೆ, ಎಲ್ಲ ಸಹೋದ್ಯೋಗಿಗಳ, ಪಕ್ಷದ ಹಿರಿಯರ ಸಹಕಾರದಿಂದ ಸವಾಲುಗಳನ್ನು ಮೆಟ್ಟಿಲುಗಳಾಗಿ ಮಾಡಿ ಎದುರಿಸುವ ಆತ್ಮ ವಿಶ್ವಾಸವಿದೆ. ದಕ್ಷ , ಪ್ರಾಮಾಣಿಕ, ಜನಪರ ಆಡಳಿತವನ್ನು ಸರ್ಕಾರ ಕೊಡುತ್ತದೆ. ಬಡವರ, ದೀನ ದಲಿತರ, ಹಿಂದುಳಿದ ವರ್ಗದವರ ಕಣ್ಣೀರು ಒರೆಸುವ ಕೆಲಸವನ್ನು ಸರ್ಕಾರ ಮಾಡಲಿದ್ದು, ಪ್ರಾದೇಶಿಕ ಅಸಮತೋಲನವನ್ನು ನೀಗಿಸಲು ಪ್ರಯತ್ನಿಸುತ್ತೇನೆ” ಎಂದು ಹೇಳಿದ್ದಾರೆ.

ನೂತನ ಮುಖ್ಯಮಂತ್ರಿಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ, “ಕರ್ನಾಟಕದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಅವರು ತಮ್ಮ ಶ್ರೀಮಂತ ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವವನ್ನು ತಮ್ಮೊಂದಿಗೆ ತರಲಿದ್ದಾರೆ. ನಮ್ಮ ಸರ್ಕಾರವು ರಾಜ್ಯದಲ್ಲಿ ಮಾಡಿದ ಅಸಾಧಾರಣ ಕಾರ್ಯಗಳನ್ನು ಅವರು ನಿರ್ಮಿಸಲಿದ್ದಾರೆ ಎಂದು ನನಗೆ ವಿಶ್ವಾಸವಿದೆ. ಫಲಪ್ರದ ಅಧಿಕಾರಾವಧಿಗೆ ಶುಭಾಶಯಗಳು” ಎಂದು ಹೇಳಿದ್ದಾರೆ.

ಇದರ ಜೊತೆಗೆ ಯಡಿಯೂರಪ್ಪ ಅವರನ್ನು ಕೂಡಾ ಪ್ರಧಾನಿ ಮೋದಿ ಹಾಡಿ ಹೊಗಳಿದ್ದಾರೆ. ಅವರು ತಮ್ಮ ಟ್ವೀಟ್‌‌ನಲ್ಲಿ, “ನಮ್ಮ ಪಕ್ಷಕ್ಕೆ ಮತ್ತು ಕರ್ನಾಟಕದ ಬೆಳವಣಿಗೆಗೆ ಯಡಿಯೂರಪ್ಪ ಅವರ ಮಹತ್ವದ ಕೊಡುಗೆಯನ್ನು ಬಣ್ಣಿಸಲು ಯಾವುದೇ ಪದಗಳಿಲ್ಲ. ದಶಕಗಳ ಕಾಲ ಅವರು ಕಷ್ಟಪಟ್ಟು ದುಡಿದು, ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಸಂಚರಿಸಿ ಜನರನ್ನು ಸಂಘಟಿಸಿದರು. ಸಾಮಾಜ ಕಲ್ಯಾಣಕ್ಕೆ ನೀಡಿದ ಅವರ ಬದ್ಧತೆಗಾಗಿ ಅವರು ಮೆಚ್ಚುಗೆ ಪಡೆದಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಪ ಮುಖ್ಯಮಂತ್ರಿಗಳಾಗಿ ಗೋವಿಂದ ಕಾರಜೋಳ, ಆ‌‌ರ್‌‌. ಅಶೋಕ್, ಶ್ರೀರಾಮುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...