Homeಮುಖಪುಟಗಡಿ ಸಂಘರ್ಷ: ಮಿಜೋರಾಂಗೆ ಪ್ರಯಾಣಿಸದಂತೆ ರಾಜ್ಯಕ್ಕೆ ಸಲಹೆ ನೀಡಿದ ಅಸ್ಸಾಂ ಸರ್ಕಾರ

ಗಡಿ ಸಂಘರ್ಷ: ಮಿಜೋರಾಂಗೆ ಪ್ರಯಾಣಿಸದಂತೆ ರಾಜ್ಯಕ್ಕೆ ಸಲಹೆ ನೀಡಿದ ಅಸ್ಸಾಂ ಸರ್ಕಾರ

- Advertisement -
- Advertisement -

ಇತ್ತೀಚೆಗೆ ಅಸ್ಸಾಂ ಮತ್ತು ಮಿಜೋರಾಂ ಅಂತರ ರಾಜ್ಯ ಗಡಿಯಲ್ಲಿ ನಡೆದ ಸಂಘರ್ಷದಿಂದಾಗಿ ಆರು ಅಸ್ಸಾಂ ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು ಮತ್ತು ಹಲವಾರು ಜನರು ಗಾಯಗೊಂಡಿದ್ದರು. ಇದಾಗಿಯು ಅಸ್ಸಾಂನ ಕ್ಯಾಚಾರ್, ಹೈಲಕಂಡಿ ಮತ್ತು ಕರಿಮಗಂಜ್ ಜಿಲ್ಲೆಗಳ ಮಿಜೋರಾಂ ಗಡಿಯ ಬಳಿ ಇತ್ತೀಚಿನ ಕೆಲವು ಘರ್ಷಣೆಗಳನ್ನು ಸೂಚಿಸಿರುವ ಅಸ್ಸಾಂ ಸರ್ಕಾರ, ಗುರುವಾರದಂದು ‘ಪ್ರವಾಸ ಸಲಹೆ’ ನೀಡಿದೆ. ಈ ಸಲಹೆಯಲ್ಲಿ ರಾಜ್ಯದ ಜನರು ಮಿಜೋರಾಂಗೆ ಪ್ರಯಾಣಿಸದಂತೆ ಅದು ಕೇಳಿಕೊಂಡಿದೆ.

“ಈ ಘಟನೆಯ ನಂತರವೂ, ಕೆಲವು ಮಿಜೋ ನಾಗರಿಕ ಸಮಾಜ ಹಾಗೂ ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು ನಿರಂತರವಾಗಿ ಅಸ್ಸಾಂ ಮತ್ತು ಅದರ ಜನರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿವೆ …” ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

“ಅನೇಕ ನಾಗರಿಕರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆಂದು ಅಸ್ಸಾಂ ಪೊಲೀಸರ ಬಳಿಯಿರುವ ವೀಡಿಯೊ ತುಣುಕಿನಿಂದ ತಿಳಿದುಬಂದಿದೆ. ಅದರಂತೆ, ಅಸ್ಸಾಂ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಈ ಮೂಲಕ ಪ್ರಯಾಣ ಸಲಹೆಯನ್ನು ನೀಡಲಾಗುತ್ತದೆ” ಎಂದು ಸಲಹೆಯು ಹೇಳಿದೆ.

ಮಿಜೋರಾಂನಲ್ಲಿ ಕೆಲಸ ಮಾಡುತ್ತಿರುವ ರಾಜ್ಯದ ಜನರು ಅತ್ಯಂತ ಎಚ್ಚರಿಕೆಯಿಂದ ವರ್ತಿಸುವಂತೆ ಅಸ್ಸಾಂ ಸರ್ಕಾರ ಸಲಹೆ ನೀಡಿದೆ. ಮಿಜೋರಾಂನಿಂದ ಅಸ್ಸಾಂಗೆ ಪ್ರವೇಶಿಸುವ ಪ್ರತಿಯೊಂದು ವಾಹನವನ್ನು ಸಂಪೂರ್ಣವಾಗಿ ಪರಿಶೀಲಿಸುವುದಾಗಿ ಸರ್ಕಾರ ಹೇಳಿದೆ.

“ಅಕ್ರಮ ಮಾದಕವಸ್ತುಗಳ ಕಳ್ಳಸಾಗಣೆ ಪರಿಶೀಲಿಸಲು, ಮಿಜೋರಾಂನಿಂದ ಅಸ್ಸಾಂಗೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ಪರಿಶೀಲಿಸುವುದು ಅವಶ್ಯಕ. ವಾಹನಗಳನ್ನು ಅಸ್ಸಾಂ ಪೊಲೀಸರು ಸಂಪೂರ್ಣವಾಗಿ ಪರಿಶೀಲಿಸುತ್ತಾರೆ. ಸಬ್‌ ಇನ್ಸ್‌‌ಪೆಕ್ಟರ್‌‌ ಹುದ್ದೆಗಿಂತ ಕೆಳಗಿಲ್ಲದ ಅಧಿಕಾರಿಯೊಬ್ಬರು ವಾಹನಗಳನ್ನು ಪರಿಶೀಲಿಸಿ ವಾಹನದಲ್ಲಿ ಅಕ್ರಮ ದ್ರವ್ಯಗಳು ಇಲ್ಲ ಎಂದು ತಿಳಿದ ನಂತರವೇ ಬಿಡುಗಡೆ ಮಾಡಲಾಗುವುದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅಸ್ಸಾಂ-ಮಿಜೋರಾಂ ವಿವಾದಿತ ಗಡಿಯಲ್ಲಿ ಹಿಂಸಾಚಾರ: ಅಸ್ಸಾಂನ 6 ಪೊಲೀಸರ ಹತ್ಯೆ

ಈ ಮಧ್ಯೆ, ಅಸ್ಸಾಂ ಮೂಲದ ಸಂಘಟನೆ ಮಿಜೋರಾಂಗೆ ಹೇರಿದ ಆರ್ಥಿಕ ದಿಗ್ಬಂಧನ ಮುಂದುವರೆದಿದ್ದು, ಇದರಲ್ಲಿ ಹಸ್ತಕ್ಷೇಪ ಮಾಡುವಂತೆ ಮಿಜೋರಾಂ ಒಕ್ಕೂಟ ಸರ್ಕಾರವನ್ನು ಕೋರಿದೆ.

ಅಸ್ಸಾಂ ಸಿಎಂ ವಿರುದ್ದ ಕಿಡಿ ಕಾರಿದ ವಿದ್ಯಾರ್ಥಿ ನಾಯಕ

ಮಿಜೋ ಸ್ಟೂಡೆಂಟ್ಸ್ ಯೂನಿಯನ್ (ಎಂಎಸ್‌ಯು) ಅಧ್ಯಕ್ಷ ಜೆ. ಲಾಲ್ಮುವಾನ್‌ಜುವಲಾ, “ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಈಶಾನ್ಯ ರಾಜ್ಯಗಳ ಶಾಂತಿಗೆ ಭಂಗ ಮಾಡಿದ್ದಾರೆ. ಅವರು ರಾಜಕೀಯ ಜಗತ್ತಿಗೆ ಪ್ರವೇಶಿಸುವ ಮೊದಲು ಇಲ್ಲಿ ಶಾಂತಿ ಇತ್ತು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸಿದ ಮಿಜೋರಾಂ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...